
ಬೆಂಗಳೂರು(ಅ.03): ಗಾಂಧಿವಾದ ಹಾಗೂ ಸಾವರ್ಕರ್ ವಾದದ ಬಗ್ಗೆ ಚರ್ಚಿಸಿದ್ದು ಬಿಟ್ಟರೇ ಸಾವರ್ಕರ್ ಕುರಿತು ವೈಯಕ್ತಿಕ ಟೀಕೆ ಮಾಡಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಹಿಂದೂ ಧರ್ಮದಲ್ಲಿ ನಂಬಿಕೆಯಿಟ್ಟಿದ್ದ ಗಾಂಧೀಜಿ ಹಾಗೂ ನಾಸ್ತಿಕರಾಗಿ ಹಿಂದೂ ರಾಷ್ಟ್ರ ಕಟ್ಟುವ ಸಾವರ್ಕರ್ ಅವರ ಜೀವನ ಶೈಲಿ ಬಗ್ಗೆ ಹೋಲಿಕೆ ಮಾಡಿದ್ದೆ, ದೇಶದಲ್ಲಿ ಗಾಂಧೀವಾದ ಗೆಲ್ಲಬೇಕೇ ಹೊರೆತು ಸಾವರ್ಕರ್ ಅವರ ಮೂಲಭೂತವಾದವಲ್ಲ ಎಂಬುದು ನನ್ನ ಅಭಿಪ್ರಾಯವಾಗಿದೆ. ಮಾಧ್ಯಮಗಳು ಸಾವರ್ಕರ್ ಮಾಂಸಹಾರಿ ಎಂಬುದನ್ನ ಮಾತ್ರ ಚರ್ಚೆಯ ವಿಷಯ ಮಾಡಿಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಗಾಂಧೀವಾದ ಹಾಗೂ ಸಾವರ್ಕರ್ ಅವರ ಮೂಲಭೂತವಾದದ ಬಗ್ಗೆ ವಿಶ್ಲೇಷಣೆ ಮಾಡಿದ್ದೇನೆಯೇ ಹೊರೆತು ಸಾವರ್ಕರ್ ಅವರ ಬಗ್ಗೆ ವೈಯಕ್ತಿಕ ಟೀಕೆ ಮಾಡುವ ಉದ್ದೇಶ ನನ್ನದಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
ಬ್ರಾಹ್ಮಣ ಸಾವರ್ಕರ್ ಗೋಮಾಂಸ ಸೇವಿಸುತ್ತಿದ್ದರು: ವಿವಾದವೆಬ್ಬಿಸಿದ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
ಸಾವರ್ಕರ್ ಮಾಂಸಹಾರಿಯಾಗಿದ್ದರು ಎಂಬ ತಮ್ಮ ಹೇಳಿಕೆಗೆ ಮಾಧ್ಯಮಗಳು ವಿವಾದದ ಸ್ವರೂಪ ನೀಡಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು(ಗುರುವಾರ) ಸ್ಪಷ್ಟನೆ ನೀಡಿದ ಸಚಿವರು, ತಮ್ಮ ಹೇಳಿಕೆಯನ್ನ ತಪ್ಪಾಗಿ ಅರ್ಥೈಸುವುದು ಸರಿಯಲ್ಲ ಎಂದರು.
ಗಾಂಧೀಜಿಯವರು ಸಸ್ಯಹಾರಿಯಾಗಿದ್ದರು. ಹಿಂದೂ ಧರ್ಮ ಹಾಗೂ ನಮ್ಮ ದೇಶದ ಸಂಸ್ಕೃತಿ, ಸಂಪ್ರದಾಯಗಳ ಮೇಲೆ ಅವರಿಗೆ ಅಪಾರವಾದ ನಂಬಿಕೆಯಿತ್ತು. ಆದರೆ ಸಾವರ್ಕರ್ ಅವರು ನಾಸ್ತಿಕರಾಗಿ ಹಿಂದೂ ರಾಷ್ಟ್ರ ಕಟ್ಟಲು ಹೊರಟಿದ್ದರು. ಅವರ ಮೂಲಭೂತವಾದ ನಮ್ಮ ದೇಶದ ಸಂಸ್ಕೃತಿಯಲ್ಲ. ಅದು ಯುರೋಪ್ ನಿಂದ ಬಂದಿದ್ದು. ಅಲ್ಲದೇ ಸಾವರ್ಕರ್ ಮಾಂಸಹಾರಿಯಾಗಿದ್ದರು. ಗೋಹತ್ಯೆಯನ್ನ ಅವರು ವಿರೋಧಿಸಿರಲಿಲ್ಲ. ಒಂದು ರೀತಿ ಅವರು ಮಾಡರ್ನಿಸ್ಟ್ ಆಗಿ ಕಾಣಿಸಿಕೊಂಡರೂ, ಅವರ ಮೂಲಭೂತವಾದ ನಮ್ಮ ದೇಶದ ಪರಂಪರೆಗೆ ವಿರುದ್ಧವಾಗಿದೆ. ಹೀಗಾಗಿ ದೇಶದಲ್ಲಿ ಗಾಂದೀವಾದ ಗೆಲ್ಲಬೇಕು ಎಂದು ಹೇಳಿಕೆ ನೀಡಿದ್ದೆ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ ನೀಡಿದ್ದಾರೆ.
ಸಾವರ್ಕರ್ ನಾಸ್ತಿಕರು, ಮಾಂಸಹಾರಿ ಸೇವೆನೆ ಮಾಡುತ್ತಿದ್ದರು ಎಂಬುದನ್ನ ಅವರೇ ಹಲವು ಪ್ರಸಂಗಗಳಲ್ಲಿ ಹೇಳಿಕೊಂಡಿದ್ದಾರೆ. ಇದನ್ನ ನಾನು ಹೊಸದಾಗಿ ಏನು ಹೇಳುತ್ತಿರುವುದಲ್ಲ. ಸಾವರ್ಕರ್ ಅವರಲ್ಲಿ ವೈಚಾರಿಕ ಚಿಂತನೆಗಳು ಇದ್ದವು. ಹಾಗೆ ನೋಡಿದರೆ ಗಾಂಧೀಜಿ ಸಂಪ್ರದಾಯಸ್ಥರು. ಹಿಂದೂ ಸಂಸ್ಕೃತಿ, ಧರ್ಮದ ಮೇಲೆ ಅಪಾರ ನಂಬಿಕೆಯಿಟ್ಟುಕೊಂಡಿದ್ದರು. ಆದರೆ ಗಾಂಧಿಜೀಯವರದ್ದು ಡೆಮಾಕ್ರೆಟಿಕ್ ವ್ಯಕ್ತಿತ್ವ. ಇತರ ಧರ್ಮಗಳನ್ನು ಅವರು ಗೌರವಿಸುತ್ತಿದ್ದರು. ಸಾವರ್ಕರ್ ಅವರದ್ದು ಮೂಲಭೂತವಾದ. ಹೀಗಾಗಿ ಸಂಪ್ರದಾಯಸ್ಥರೆಲ್ಲ ಮೂಲಭೂತವಾದಿಗಳಲ್ಲ. ಅವರಲ್ಲೂ ಅನೇಕರು ಪ್ರಜಾಪ್ರಭುತ್ವದ ಮನಸ್ಥಿತಿ ಉಳ್ಳವರಿದ್ದಾರೆ. ಹೀಗಾಗಿ ಗಾಂಧೀವಾದಕ್ಕೆ ನಾವು ಹೆಚ್ಚು ಮನ್ನಣೆ ನೀಡುವ ಮೂಲಕ ಮೂಲಭೂತವಾದದ ವಿರುದ್ಧ ಹೋರಾಟ ನಡೆಸುವ ಅಗತ್ಯತೆ ಇದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ