ಬೆಂಗ್ಳೂರಲ್ಲಿ ಐಟಿ ಅಧಿಕಾರಿಗಳ ರಾತ್ರಿ ಕಾರ್ಯಾಚರಣೆ: ಬಾಕ್ಸ್‌ಗಳಲ್ಲಿ ಕಂತೆ ಕಂತೆ ಹಣ ಪತ್ತೆ..!

Published : Oct 13, 2023, 07:04 AM ISTUpdated : Oct 13, 2023, 09:06 AM IST
ಬೆಂಗ್ಳೂರಲ್ಲಿ ಐಟಿ ಅಧಿಕಾರಿಗಳ ರಾತ್ರಿ ಕಾರ್ಯಾಚರಣೆ:  ಬಾಕ್ಸ್‌ಗಳಲ್ಲಿ ಕಂತೆ ಕಂತೆ ಹಣ ಪತ್ತೆ..!

ಸಾರಾಂಶ

ಏಕಕಾಲದಲ್ಲಿ ಆರ್ ಟಿ ನಗರದ ಎರಡು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಆತ್ಮಾನಂದ ಕಾಲೋನಿಯ ಫ್ಲ್ಯಾಟ್‌ವೊಂದರ ಮೇಲೆ ದಾಳಿ ನಡೆಸಲಾಗಿದೆ. ಫ್ಯಾಟ್‌ನಲ್ಲಿ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆ. 

ಬೆಂಗಳೂರು(ಅ.13):  ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳ ರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ. ದಾಳಿ ವೇಳೆ ಫ್ಲ್ಯಾಟ್‌ವೊಂದರಲ್ಲಿ ಅಪಾರ ಪ್ರಮಾಣದ ಹಣ ಪತ್ತೆಯಾಗಿದೆ. ಹೌದು, ಒಂದಲ್ಲಾ.. ಎರಡಲ್ಲಾ.. ಬರೋಬ್ಬರಿ 25 ಬಾಕ್ಸ್ ಗಳಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ. ಐನೂರು ಮುಖಬೆಲೆಯ ಕಂತೆ ಕಂತೆ ಹಣ  ಪತ್ತೆಯಾಗಿದೆ. 

ಭ್ರಷ್ಟರು ಕಾರಿನಲ್ಲಿ ಹಣ ಸಾಗಾಟ ಮಾಡಲು ತಯಾರಿ ನಡೆಸಿದ್ದರು ಎಂದು ತಿಳಿದು ಬಂದಿದೆ. ವಿಷಯ ಅರಿತ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ(ಗುರುವಾರ) ಸಂಜೆ 6ಗಂಟೆಗೆ ಪೊಲೀಸ್ ಸಿಬ್ಬಂದಿಗಳ ಭದ್ರತೆಯಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಏಕಕಾಲದಲ್ಲಿ ಆರ್ ಟಿ ನಗರದ ಎರಡು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಆತ್ಮಾನಂದ ಕಾಲೋನಿಯ ಫ್ಲ್ಯಾಟ್‌ವೊಂದರ ಮೇಲೆ ದಾಳಿ ನಡೆಸಲಾಗಿದೆ. ಫ್ಯಾಟ್‌ನಲ್ಲಿ ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದೆ. 

ಬೆಂಗಳೂರಿನ 15ಕ್ಕೂ ಹೆಚ್ಚು ಕಡೆ ಐಟಿ ದಾಳಿಗೂ, ರಾಜಸ್ತಾನ ಚುನಾವಣೆಗೂ ಲಿಂಕ್!

ಪತ್ತೆಯಾದ ಹಣದ ಒಟ್ಟಾರೆ ಮೊತ್ತವನ್ನ ಐಟಿ ಅಧಿಕಾರಿಗಳು ಎಣಿಕೆ ಮಾಡಿದ್ದಾರೆ ಅಂತ ತಿಳಿದು ಬಂದಿದೆ. ಎಷ್ಟು ಹಣ ಪತ್ತೆಯಾಗಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ. ಇದೇ ವೇಳೆ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ನಿವಾಸದ ಮೇಲೂ ಐಟಿ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ
ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!