
ಬೆಂಗಳೂರು : ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಆಪ್ತರು ಎನ್ನಲಾದ ಇಬ್ಬರು ಎಲೆಕ್ಟ್ರಿಕ್ ಗುತ್ತಿಗೆದಾರರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ(ಐಟಿ) ಅಧಿಕಾರಿಗಳು ಸೋಮವಾರ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ಎಲೆಕ್ಟ್ರಿಕ್ ಗುತ್ತಿಗೆದಾರರ ಯಲಹಂಕ ಮನೆ ಹಾಗೂ ಕಚೇರಿಗಳು ಸೇರಿ 12 ಸ್ಥಳಗಳ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ. ತಪಾಸಣೆ ವೇಳೆ ಕೆಲ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ರಾಜ್ಯ ಸರ್ಕಾರದ ಟೆಂಡರ್‌ನಲ್ಲಿ ಅವ್ಯವಹಾರದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಇಂಧನ ಸಚಿವ ಕೆ.ಜೆ.ಜಾರ್ಜ್ ಸೇರಿ ಬೆಸ್ಕಾಂನ ಕೆಲ ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಸಚಿವ ಕೆ.ಜೆ.ಜಾರ್ಜ್ ಅವರ ಆಪ್ತರೆನ್ನಲಾದ ಇಬ್ಬರು ಎಲೆಕ್ಟ್ರಿಕ್ ಗುತ್ತಿಗೆದಾರರ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಆದರೆ, ಈ ದಾಳಿ ಕುರಿತು ಅದಾಯ ತೆರಿಗೆ ಇಲಾಖೆ ಈವರೆಗೂ ಯಾವುದೇ ಖಚಿತ ಮಾಹಿತಿ ನೀಡಿಲ್ಲ.
ಸಚಿವ ಜಾರ್ಜ್ ಆಪ್ತ ಎಲೆಕ್ಟ್ರಿಕ್ ಗುತ್ತಿಗೆದಾರರಿಗೆ ಐಟಿ ಶಾಕ್
- ಯಲಹಂಕದ ಮನೆ ಸೇರಿ 12 ಕಡೆ ದಾಳಿ । ಬೆಳ್ಳಂಬೆಳಗ್ಗೆ ದಾಳಿ, ದಾಖಲೆ ಪರಿಶೀಲನೆ
- ಟೆಂಡರ್ ಅಕ್ರಮ ಬಗ್ಗೆ ಆರೋಪಿಸಿದ್ದ ಬಿಜೆಪಿ । ಈ ಬಗ್ಗೆ ಕೋರ್ಟ್‌ಗೆ ದೂರಿದ್ದ ಬಿಜೆಪಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ