
ಬೆಂಗಳೂರು (ಜು.11) : ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮಧ್ಯಾಹ್ನ ಹಾಗೂ ಸಂಜೆ ವಿವಿಧ ಕಡೆ ಮಳೆಯಾಗಿದೆ. ಕಳೆದೊಂದು ವಾರದಿಂದ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದರೂ ದೊಡ್ಡ ಪ್ರಮಾಣ ಮಳೆಯಾಗಿರಲಿಲ್ಲ. ಆದರೆ, ಸೋಮವಾರ ನಗರದಲ್ಲಿ ಮಧ್ಯಾಹ್ನ ಕೆಲವು ಕಡೆ ಉತ್ತಮ ಮಳೆಯಾಗಿದೆ. ಸಂಜೆ ಸುಮಾರು 6ರ ವೇಳೆಗೆ ಆರಂಭಗೊಂಡ ಸುಮಾರು 30 ನಿಮಿಷಕ್ಕೂ ಅಧಿಕ ಕಾಲದ ಧಾರಾಕಾರವಾಗಿ ಸುರಿಯಿತು.
ಮಳೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಮಳೆ ನೀರು ಹರಿದ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು. ನಗರದ ಪ್ರಮುಖ ಅಂಡರ್ ಪಾಸ್‌ಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬಂದ್ ಮಾಡಿ ವಾಹನ ಸಂಚಾರ ನಿಷೇಧಿಸಲಾಗಿತ್ತು.
ಮಂಗಳವಾರವೂ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದೆರೆಡು ಬಾರಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸೋಮವಾರ ರಾತ್ರಿ 10 ಗಂಟೆಯ ವರದಿ ಪ್ರಕಾರ ನಗರದಲ್ಲಿ ಸರಾಸರಿ 0.7 ಸೆಂ.ಮೀ ಮಳೆಯಾಗಿದೆ. ಬಾಗಲಗುಂಟೆ ಹಾಗೂ ಶೆಟ್ಟಿಹಳ್ಳಿಯಲ್ಲಿ ಅತಿ ಹೆಚ್ಚು ತಲಾ 2 ಸೆಂ.ಮೀ , ವಿದ್ಯಾರಣ್ಯಪುರದಲ್ಲಿ 1.7, ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ 1.6, ರಾಜ್‌ಮಹಲ್ ಗುಟ್ಟಹಳ್ಳಿಯಲ್ಲಿ 1.5, ಕೊಡಿಗೆಹಳ್ಳಿ 1.2 ಹಾಗೂ ಸಂಪಂಗಿರಾಮನಗರದಲ್ಲಿ 1.1 ಸೆಂ.ಮೀ ಮಳೆಯಾದ ವರದಿಯಾಗಿದೆ.
ಕರ್ನಾಟಕದ ಎಂಟಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಬ್ಬರಕ್ಕೆ 4 ಮಂದಿ ಬಲಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ