
ಬೆಂಗಳೂರು(ಸೆ.24): ಕೊಲೆ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿರುವ ನಟ ದರ್ಶನ್‌ಗೆ ಆದಾಯ ತೆರಿಗೆ ಇಲಾಖೆಯ (ಐಟಿ) ಕುಣಿಕೆಯೂ ಸುತ್ತಿಕೊಳ್ಳುವ ಸಾಧ್ಯತೆಯಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶ ಮಾಡಲು ಬಳಕೆ ಮಾಡಲಾಗಿದೆ ಎನ್ನಲಾದ 84 ಲಕ್ಷ ಹಣ ಮೂಲ ಪತ್ತೆ ಹಚ್ಚಲು ಆದಾಯ ತೆರಿಗೆ (ಐಟಿ) ಇಲಾಖೆ ಮುಂದಾಗಿದೆ.
ಹಣವನ್ನು ತನ್ನ ವಶಕ್ಕೆ ನೀಡಬೇಕು ಹಾಗೂ ಹಣದ ಮೂಲದ ಕುರಿತು ಹೆಚ್ಚಿನ ವಿಚಾರಣೆ ನಡೆಸಲು ಅನುಮತಿ ನೀಡುವಂತೆ ನಗರದ 57ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಮನವಿ ಮಾಡಿದೆ. ಈ ಕುರಿತು ಆದಾಯ ತೆರಿಗೆ ಇಲಾಖೆ ಪರ ವಕೀಲರು ಸೆಷನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು!
ಈ ಅರ್ಜಿಗೆ ತಮ್ಮದು ಯಾವುದೇ ಆಕ್ಷೇಪಣೆ ಇಲ್ಲ ಎಂದು ಕಾಮಾಕ್ಷಿ ಪಾಳ್ಯ ಠಾಣೆಯ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ, ಅರ್ಜಿ ಸಂಬಂಧ ಮಂಗಳವಾರ ಆದೇಶ ಮಾಡುವುದಾಗಿ ನ್ಯಾಯಾಲಯ ತಿಳಿಸಿದೆ.
ರೇಣುಕಾಸ್ವಾಮಿಯ ಕೊಲೆ ಪ್ರಕರಣದಿಂದ ತಪ್ಪಿಸಿಕೊಳ್ಳಲು ನಟ ದರ್ಶನ್ ಅವರು ಇತರೆ ಆರೋಪಿಗಳಿಗೆ 30 ಲಕ್ಷ ಹಣ ನೀಡಿದ್ದರು, ಈ ಹಣವು ಆರೋಪಿ ಪ್ರದೋಷ್ ಮನೆಯಿಂದ ಕಾಮಾಕ್ಷಿಪಾಳ್ಯ ಠಾಣಾ ತನಿಖಾಧಿಕಾರಿಗಳು ಜಪ್ತಿ ಮಾಡಿದರು. ನಂತರ ಪ್ರಕರಣದಲ್ಲಿ ದರ್ಶನ್ ಪಾತ್ರ ಇರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವರ ಮನೆಯನ್ನು ತಪಾಸಣೆ ನಡೆಸಲಾಗಿತ್ತು. ಈ ವೇಳೆ 40 ಲಕ್ಷ ಹಣ ದೊರೆತಿತ್ತು. ಇನ್ನೂ ಆರೋಪಿ ಕೇಶವಮೂರ್ತಿ ಮನೆಯಲ್ಲಿ 5, ಅನುಕುಮಾರ್ ಮನೆಯಲ್ಲಿ 1.5 ಲಕ್ಷ ಹಣ ಸೇರಿದಂತೆ ಒಟ್ಟು 84 ಹಣವನ್ನು ತನಿಖಾ ಧಿಕಾರಿಗಳು ಜಪ್ತಿ ಮಾಡಿದ್ದರು.
ನಟ ದರ್ಶನ್, ಪವಿತ್ರ ಗೌಡ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ
ಮಾಜಿ ಉಪ ಮೇಯರ್ ಮೋಹನ್ ರಾಜ್ ಅವರು ದರ್ಶನ್ ಅವರಿಗೆ ಸಾಲ ನೀಡಿದ್ದರು ಎಂದು ತನಿಖೆ ವೇಳೆ ಕಂಡು ಬಂದಿತ್ತು. ಇನ್ನೂ ಇಷ್ಟು ಹಣವು ಸಿನಿಮಾದಲ್ಲಿ ನಟಿಸಿದ ಕಾರಣ ನಿರ್ಮಾಪಕರು ನೀಡಿದ್ದರು ಎಂದು ದಶನ್ ತಪೊಪ್ಪಿಗೆ ಹೇಳಿಕೆಯಲ್ಲಿ ತಿಳಿಸಿದರು. ಇದೀಗ ಈ 84 ಲಕ್ಷ ಹಣಕ್ಕೆ ಲೆಕ್ಕವಿಲ್ಲ ಎಂದು ಭಾವಿಸಿರುವ ಐಟಿ ಇಲಾಖೆ, ಹಣದ ಮೂಲ ಪತ್ತೆ ಮಾಡಲು ನಿರ್ಧರಿಸಿದೆ. ಆ ಕುರಿತು ಹೆಚ್ಚಿನ ವಿಚಾರಣೆ ನಡೆಸಲು ಅನುಮತಿ ನೀಡುವಂತೆ ನ್ಯಾಯಾಲಯ ವನ್ನು ಕೋರಿದೆ.
ಎಲ್ಲರಿಗಿಂತ ಮೊದಲೇ ತಿಳಿಯುವುದು ಇಲ್ಲೇ!
ದರ್ಶನ್ ವಿರುದ್ಧ ಐಟಿ ತನಿಖೆ ನಡೆಯಲಿದೆ ಎಂದು ಕನ್ನಡಪ್ರಭ' ಜೂ.22ರಂದೇ ವರದಿ ಮಾಡಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ