ಕೆಂಪೇಗೌಡರ ಜಯಂತಿಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸಬೇಕಿತ್ತು. ಮುಂದಿನ ವರ್ಷದಿಂದ ಇಂತಹ ತಪ್ಪು ಆಗದಂತೆ ಕ್ರಮ ವಹಿಸಲಾಗುವುದು: ಡಿ.ಕೆ.ಶಿವಕುಮಾರ್
ಬೆಂಗಳೂರು(ಜೂ.28): ಕೆಂಪೇಗೌಡರ ಜಯಂತಿಗೆ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಆಹ್ವಾನಿಸಬೇಕಿತ್ತು. ಮುಂದಿನ ವರ್ಷದಿಂದ ಇಂತಹ ತಪ್ಪು ಆಗದಂತೆ ಕ್ರಮ ವಹಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಯಾರನ್ನೂ ಅಗೌರವಿಸುವ ಉದ್ದೇಶ ಇಲ್ಲ. ಒಕ್ಕಲಿಗ ಸಮುದಾಯದ ನಾಯಕರಾಗಿ ಎಸ್.ಎಂ ಕೃಷ್ಣ, ಸದಾನಂದ ಗೌಡ, ದೇವೇಗೌಡ, ಕುಮಾರಸ್ವಾಮಿ ಅವರಿದ್ದಾರೆ. ಪ್ರಾಧಿಕಾರದ ಅಧಿಕಾರಿಗಳು ಶಿಷ್ಟಾಚಾರವನ್ನು ಮಾತ್ರ ಗಮನದಲ್ಲಿಟ್ಟುಕೊಂಡು ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ಮಾತ್ರ ಆಹ್ವಾನ ನೀಡಿದ್ದಾರೆ. ಕುಮಾರಸ್ವಾಮಿ ಮಂಡ್ಯಕ್ಕೆ ಹೋಗಿದ್ದು, ದೇವೇಗೌಡರು ಹಾಸನದ ಪ್ರತಿನಿಧಿಯಾಗಿದ್ದಾರೆ ಎಂದರು.
undefined
ಸಿದ್ದರಾಮಯ್ಯ ಎದುರಲ್ಲೇ ಡಿಕೆಶಿಯನ್ನು ಸಿಎಂ ಮಾಡುವಂತೆ ಆಗ್ರಹಿಸಿದ ಒಕ್ಕಲಿಗ ಸ್ವಾಮೀಜಿ
ಒಕ್ಕಲಿಗ ಸಮುದಾಯದವರ ಜತೆಗೆ ಬೇರೆ ಸಮುದಾಯದ ಮುಖಂಡರು ಹಾಗೂ ಸ್ವಾಮೀಜಿಗಳನ್ನು ಆಹ್ವಾನಿಸುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.