
ಬೆಂಗಳೂರು(ಆ.02): ಸಚಿವ ಬಿ.ಸಿ.ಪಾಟೀಲ್‌ಗೆ ಕೊರೋನಾ ಸೋಂಕು ದೃಢಪಟ್ಟಬೆನ್ನಲ್ಲೇ ಇದೀಗ ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್ ಅವರಿಗೂ ಕೋವಿಡ್-19 ತಗುಲಿರುವುದು ಶನಿವಾರ ಖಚಿತಪಟ್ಟಿದೆ.
ಇದು ಜಿಲ್ಲೆಯ ಇತರೆ ಜನಪ್ರತಿನಿಧಿಗಳಲ್ಲೂ ಆತಂಕ ಸೃಷ್ಟಿಸಿದೆ. ಏತನ್ಮಧ್ಯೆ, ವಿಧಾನ ಪರಿಷತ್ ಮಾಜಿ ಸದಸ್ಯ ಐವಾನ್ ಡಿಸೋಜಾ ಅವರಿಗೂ ಕೊರೋನಾ ದೃಢಪಟ್ಟಿದ್ದು, ಇವರ ಜತೆಗೆ 2 ದಿನ ಇದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಕ್ವಾರಂಟೈನ್ಗೆ ಒಳಗಾಗಬೇಕಾದ ಆತಂಕ ಶುರುವಾಗಿದೆ.
ಹಿರಿಯ ಕಾಂಗ್ರೆಸ್ ಮುಖಂಡರ ಭೇಟಿ, ಮಂಗಳೂರಲ್ಲಿ ಡಿಕೆಶಿ: ಇಲ್ಲಿವೆ ಫೋಟೋಸ್
ಕೆಲ ದಿನಗಳ ಹಿಂದೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಅವರು ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ಅವರ ಜತೆಗೆ ಹಾಲಪ್ಪ ಆಚಾರ್ ಸೇರಿ ಜಿಲ್ಲೆಯ ಹಲವು ಜನಪ್ರತಿನಿಧಿಗಳು ಇದ್ದರು. ಶುಕ್ರವಾರವಷ್ಟೇ ಬಿ.ಸಿ.ಪಾಟೀಲರಿಗೆ ಸೋಂಕು ದೃಢಪಟ್ಟಿದ್ದು, ಇದರ ಬೆನ್ನಲ್ಲೇ ಈಗ ಹಾಲಪ್ಪ ಆಚಾರ್‌ಗೂ ಸೋಂಕು ದೃಢಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ.
ಕಾಂಗ್ರೆಸ್ ನಾಯಕನಿಗೆ ಕೊರೋನಾ: ಡಿಕೆ ಶಿವಕುಮಾರ್‌ಗೆ ಶುರುವಾಯ್ತು ಟೆನ್ಷನ್
ಡಿಕೆಶಿಗೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹಾಗೂ ಅವರ ಪತ್ನಿ ಡಾ.ಕವಿತಾ ಅವರಿಗೂ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರಿಂದ ಡಿ.ಕೆ.ಶಿವಕುಮಾರ್ ಹಾಗೂ ದಕ್ಷಿಣ ಕನ್ನಡದ ಕಾಂಗ್ರೆಸ್ ಮುಖಂಡರು ಕ್ವಾರಂಟೈನ್ಗೆ ಒಳಗಾಗಬೇಕಾದ ಆತಂಕ ಶುರುವಾಗಿದೆ. ಡಿ.ಕೆ.ಶಿವಕುಮಾರ್ ಶುಕ್ರವಾರದಿಂದ 2 ದಿನ ದಕ್ಷಿಣ ಕನ್ನಡ ಪ್ರವಾಸದಲ್ಲಿದ್ದರು. ಈ ವೇಳೆ ಐವಾನ್ ಡಿಸೋಜ ಅವರ ಜತೆಗೇ ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ