ಚಿಕ್ಕಪೇಟೆ ಶಾಸಕ ಗರುಡಾಚಾ‌ರ್‌ಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದು

Published : Apr 25, 2024, 01:07 PM IST
ಚಿಕ್ಕಪೇಟೆ ಶಾಸಕ ಗರುಡಾಚಾ‌ರ್‌ಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದು

ಸಾರಾಂಶ

ವಿಚಾರಣಾ ನ್ಯಾಯಾಲಯಗಳ ಆದೇಶ ಪ್ರಶ್ನಿಸಿ ಬಿ.ಜಿ. ಉದಯ್ ಗರುಡಾಚಾರ್ ಸಲ್ಲಿಸಿದ್ದ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಈ ಆದೇಶ ಮಾಡಿದೆ. 

ಬೆಂಗಳೂರು(ಏ.25): 2018ರ ವಿಧಾನಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ನಾಮಪತ್ರದೊಂದಿಗೆ ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ತಮ್ಮ ಮೇಲಿನ ಕ್ರಿಮಿನಲ್ ಪ್ರಕರಣದ ಮಾಹಿತಿ ನೀಡದ ಆರೋಪದ ಮೇಲೆ ವಿಚಾರಣಾ ನ್ಯಾಯಾಲಯಗಳ ಚಿಕ್ಕಪೇಟೆ ಶಾಸಕ ಬಿ.ಜಿ. ಉದಯ್ ಗರುಡಾಚಾ‌ರ್ ಅವರಿಗೆ ಎರಡು ತಿಂಗಳು ಸಾಧಾರಣಾ ಸಜೆ ಹಾಗೂ ಹತ್ತು ಸಾವಿರ ರು. ದಂಡ ವಿಧಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. 

ವಿಚಾರಣಾ ನ್ಯಾಯಾಲಯಗಳ ಆದೇಶ ಪ್ರಶ್ನಿಸಿ ಬಿ.ಜಿ. ಉದಯ್ ಗರುಡಾಚಾರ್ ಸಲ್ಲಿಸಿದ್ದ ಕ್ರಿಮಿನಲ್ ಮರು ಪರಿಶೀಲನಾ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಪೀಠ ಈ ಆದೇಶ ಮಾಡಿದೆ. ಅಪರಾಧ ಪ್ರಕರಣ ಸಂಬಂಧ ದೋಷಾ ರೋಪಗಳು ಹೊರಿಸಿದ ಮತ್ತು ಆ ಸಂಬಂಧ ನ್ಯಾಯಾಲಯವು ಕಾಗ್ನಿಜೆನ್ಸ್ ತೆಗೆದುಕೊಂಡ ಸಂದರ್ಭದಲ್ಲಿ ತಮ್ಮ ಮೇಲಿನ ಆರೋಪಗಳ ಕುರಿತು ಮಾಹಿತಿಯನ್ನು ಚುನಾವಣಾ ಕಣದಲ್ಲಿರುವ ಅಭ್ಯರ್ಥಿ ತಿಳಿಸಬೇಕಾಗುತ್ತದೆ. ಆರೋಪಗಳನ್ನು ಪರಿಗಣಿಸಿ ಅವರನ್ನು ಕ್ರಿಮಿನಲ್‌ ಪ್ರಕರಣದಲ್ಲಿ ಆರೋಪಿ ಎಂಬುದಾಗಿ ವ್ಯಾಖ್ಯಾನಿ ಸಬಹುದಾಗಿದೆ. ಎಫ್ ಐಆರ್/ಖಾಸಗಿ ದೂರು ದಾಖಲಾದ ಮಾತ್ರಕ್ಕೆ ಆರೋಪ ದೃಢಪಟ್ಟು, ಚುನಾವಣಾ ಪ್ರಮಾಣಪತ್ರದಲ್ಲಿ ಕೇಸ್ ಮಾಹಿತಿ ನೀಡಬೇಕೆಂದರ್ಥವಲ್ಲ ಎಂದು ಪೀಠ ಹೇಳಿದೆ. 

ಸುಳ್ಳು ಅಫಿಡವಿಟ್‌: ಚಿಕ್ಕಪೇಟೆ ಶಾಸಕ ಗರುಡಾಚಾರ್‌ಗೆ ಜಾಮೀನು ಮಂಜೂರು

ಅರ್ಜಿದಾರರ ವಿರುದ್ಧ ಪ್ರಕರಣವೊಂದರ ಸಂಬಂಧ ದೂರು ದಾಖಲಾಗಿತ್ತು. ಆದರೆ, ನಾಮಪತ್ರ ಸಲ್ಲಿಕೆ ವೇಳೆ ಆ ದೂರಿನ ಸಂಬಂಧ ಅರ್ಜಿದಾರರ ವಿರುದ್ಧ ದೋಷಾರೋಪಣೆ ಹೊರಿಸಿರಲಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಮತ್ತು ಬೆಳಗಾವಿ ವಿಭಜನೆ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ