ಜೈನಮುನಿ ಹತ್ಯೆ: ಸತ್ಯಾಸತ್ಯತೆ ಬೆಳಕಿಗೆ ತರಲು ಸಿಬಿಐ ತನಿಖೆ ಅಗತ್ಯ -ಸಂಸದ ಅಣ್ಣಾಸಾಹೇಬ ಜೊಲ್ಲೆ

By Kannadaprabha News  |  First Published Jul 17, 2023, 6:54 AM IST

ಹಿರೇಕೋಡಿ ನಂದಿಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಂತಕರಿಗೆ ಕಠಿಣ ಶಿಕ್ಷೆ ಆಗಬೇಕು. ಇದಕ್ಕಾಗಿ ಹತ್ಯೆ ಸತ್ಯಾಸತ್ಯತೆ ಬೆಳಕಿಗೆ ತರಲು ಸಿಬಿಐ ತನಿಖೆಯ ಅಗತ್ಯವಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.


 ಚಿಕ್ಕೋಡಿ ಜು.17) ಹಿರೇಕೋಡಿ ನಂದಿಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಹಂತಕರಿಗೆ ಕಠಿಣ ಶಿಕ್ಷೆ ಆಗಬೇಕು. ಇದಕ್ಕಾಗಿ ಹತ್ಯೆ ಸತ್ಯಾಸತ್ಯತೆ ಬೆಳಕಿಗೆ ತರಲು ಸಿಬಿಐ ತನಿಖೆಯ ಅಗತ್ಯವಿದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ಭಾನುವಾರ, ಹಿರೇಕೋಡಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣ ಹಿನ್ನಲೆ ನಂದಿ ಪರ್ವತಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ನಂದಿ ಮಹಾರಾಜರ ಬರ್ಬರ ಹತ್ಯೆ ಆಘಾತ ಉಂಟು ಮಾಡಿದೆ. ಮಹಾರಾಜರು ಹಿರೇಕೋಡಿ ಎಂಬ ಸಣ್ಣ ಹಳ್ಳಿಯಲ್ಲಿ ಉತ್ತಮ ಆಶ್ರಮ ಕಟ್ಟಿ, ಶಿಕ್ಷಣ ಸಂಸ್ಥೆ ಮಾಡಿದ್ದರು ಸ್ಮರಿಸಿದರು.

Tap to resize

Latest Videos

ಕಾಮಕುಮಾರ ನಂದಿ ಮಹಾರಾಜರು 14 ಭಾಷೆಗಳಲ್ಲಿ ಪರಿಣಿತರಾಗಿದ್ದರು. ಬಿಇ ಪದವೀಧರ ಆಗಿದ್ದರು. ಕರ್ನಾಟಕ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮುಂದಿನ ದಿನಗಳಲ್ಲಿ ಈ ರೀತಿ ಘಟನೆ ಆಗಬಾರದು, ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಹೇಳಿದರು.

ಬಿಜೆಪಿ ಸರ್ಕಾರದ ಯೋಜನೆ ರದ್ದು ತರವಲ್ಲ: ಸಂಸದ ಅಣ್ಣಾಸಾಹೇಬ ಜೊಲ್ಲೆ ಆಕ್ಷೇಪ

ಸ್ವಾಮೀಜಿ ಆಸೆಯಂತೆ ಶಿಕ್ಷಣ ಸಂಸ್ಥೆ ಕಟ್ಟಲು ವೈಯಕ್ತಿಕವಾಗಿ, ಪಕ್ಷದ ವತಿಯಿಂದಲೂ ಸಹಾಯ ಮಾಡ್ತೀವಿ. ಅವರು ಬಿಟ್ಟು ಹೋದ ಕನಸುಗಳನ್ನು ಪೂರ್ಣ ಮಾಡ್ತೀವಿ. ಎಲ್ಲ ಮುನಿಗಳಿಗೂ ಸರ್ಕಾರದಿಂದ ರಕ್ಷಣೆ ಇರಬೇಕು. ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕೆಂಬ ಕಾರಣಕ್ಕೆ ಸಿಬಿಐ ತನಿಖೆಗೆ ಆಗ್ರಹ ಮಾಡುತ್ತಿದ್ದೇವೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು.

ರಾಜ್ಯಸಭೆ ಸದಸ್ಯ ಈರಣ್ಣಾ ಕಡಾಡಿ, ಮಾಜಿ ಶಾಸಕ ಮಹೇಶ ಕುಮಟಳ್ಳಿ, ರೈತ ಮೊರ್ಚಾ ರಾಜ್ಯ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸತೀಶ ಅಪ್ಪಾಜಿಗೋಳ, ಮಂಡಲದ ಅಧ್ಯಕ್ಷ ಸಂಜಯ ಪಾಟೀಲ, ವರ್ಧಮಾನ ಸದಲಗೆ ಸೇರಿದಂತೆ ಜೈನ ಸಮಾಜದ ಮುಖಂಡರು

ಪ್ರಧಾನಿ ಮೋದಿ ಪರಿಶ್ರಮದಿಂದ ಭಾರತಕ್ಕೆ ಜಾಗತಿಕ ಅಗ್ರ ಸ್ಥಾನ: ಸಂಸದ ಅಣ್ಣಾಸಾಹೇಬ ಜೊಲ್ಲೆ

click me!