ಕೊಲೆಗಡುಕರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ನಿಲ್ಲುತ್ತದೆ. ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರ ರಾಷ್ಟ್ರ ಭಕ್ತರ ಮೇಲೆ ಪ್ರಕರಣ ದಾಖಲಿಸಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ ಕಿಡಿಕಾರಿದರು.
ಬೆಳಗಾವಿ (ಜು.11) : ಕೊಲೆಗಡುಕರ ರಕ್ಷಣೆಗೆ ಕಾಂಗ್ರೆಸ್ ಸರ್ಕಾರ ನಿಲ್ಲುತ್ತದೆ. ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕಿಸ್ತಾನದ ಧ್ವಜ ಹಿಡಿದು ಪಾಕಿಸ್ತಾನ ಪರ ಘೋಷಣೆ ಕೂಗುತ್ತಾರೆ. ಅವರ ಮೇಲೆ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರ ರಾಷ್ಟ್ರ ಭಕ್ತರ ಮೇಲೆ ಪ್ರಕರಣ ದಾಖಲಿಸಿ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ ಕಿಡಿಕಾರಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದಾಗಲೂ ಸಾಕಷ್ಟುಹಿಂದೂ ಕಾರ್ಯಕರ್ತರ ಹತ್ಯೆ, ಶೋಷಣೆ ನಡೆದಿತ್ತು. ಈಗ ಮತ್ತೆ ಅದೇ ಮರುಕಳಿಸುವ ಮುನ್ಸೂಚನೆ ನೀಡುತ್ತಿದೆ ಎಂದು ದೂರಿದರು.
ನಮ್ಮ ಸರ್ಕಾರ ಇದ್ದಾಗ ಪೊಲೀಸ್ ಇಲಾಖೆಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪೊಲೀಸ್ ಇಲಾಖೆ ಒತ್ತಡದಲ್ಲಿ ಕೆಲಸ ಮಾಡುವ ಸಂದರ್ಭದಲ್ಲಿ ಇಂತಹ ಪ್ರಕರಣಗಳು ಪಾರದರ್ಶಕವಾಗಿ ನಡೆಸುವುದು ಅನುಮಾನ ಇದೆ ಎಂದರು.
ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಪೊಲೀಸ್‌ರ ಮೇಲೆ ಬಿಜೆಪಿಯವರಿಗೆ ಒಂದೂವರೆ ತಿಂಗಳಲ್ಲಿ ನಂಬಿಕೆ ಹೊಯಿತಾ ಎನ್ನುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮಗೆ ಪೊಲೀಸ್ ಇಲಾಖೆಯ ಮೇಲೆ ನಂಬಿಕೆ ಇದೆ. ಆದರೆ, ಪೊಲೀಸರನ್ನು ಒತ್ತಡದಲ್ಲಿ ಕೆಲಸ ಮಾಡಿಸುತ್ತಿರುವ ಸರ್ಕಾರದ ಮೇಲೆ ಇಲ್ಲ ಎಂದರು.
ವರ್ಗಾವಣೆ ದಂಧೆ ಅವ್ಯಾಹತವಾಗಿ ಬೆಳೆದಿದೆ. ಕಾಂಗ್ರೆಸ್‌ಗೆ ಅಹಂ ಮದ ಸಾಕಷ್ಟುಇದೆ. ನಮ್ಮ ಸರ್ಕಾರಕ್ಕೆ ಶೇ.40 ಪರ್ಸೆಂಟ್ ಸರ್ಕಾರ ಎಂದು ಆರೋಪ ಮಾಡುತ್ತಿದ್ದರು. ಈಗ ಅವರ ಸರ್ಕಾರ ಶೇ.80 ರಷ್ಟಿದೆ. ವರ್ಗಾವಣೆ ದಂಧೆಯ ಅಂಗಡಿ ತೆರೆದುಕೊಂಡು ಕಾಂಗ್ರೆಸ್ ಕುಳಿತುಕೊಂಡಿದೆ. ರಾಜಕಾರಣ ವಿರೋಧ ಮಾಡುವುದು ರಾಜಕಾರಣ ಅಲ್ಲ. ಜನಪರ ಆಡಳಿತ ನಡೆಸಿದರೆ ಅಭಿನಂದಿಸುತ್ತೇವೆ ಎಂದರು.
ಬಿಜೆಪಿಯ ವಿಪಕ್ಷ ನಾಯಕ ಸ್ಥಾನವನ್ನು ಪಕ್ಷದಲ್ಲಿ ಪದ್ಧತಿ ಇದೆ. ಅದನ್ನು ಸೂಕ್ತ ಸಮಯದಲ್ಲಿ ಆಯ್ಕೆ ಮಾಡಲಾಗುವುದು. ಕಾಂಗ್ರೆಸ್‌ಗೆ ಎಐಸಿಸಿ ಅಧ್ಯಕ್ಷ ಸ್ಥಾನ 6 ತಿಂಗಳುವರೆಗೆ ಖಾಲಿ ಇತ್ತು. ಆಗ ಏಕೆ ಕಾಂಗ್ರೆಸ್ ಮಾತನಾಡಲಿಲ್ಲ ಎಂದು ಪ್ರಶ್ನಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ನಗರ ಘಟಕದ ಅಧ್ಯಕ್ಷ ಅನಿಲ ಬೆನಕೆ, ಸಂಸದೆ ಮಂಗಲ ಅಂಗಡಿ, ಶಾಸಕ ಮಹೇಶ ತೆಂಗಿನಕಾಯಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಮೂಲನಿವಾಸಿ ಜೈನರಿಗೆ ಭಾರತದಲ್ಲೇ ಅಭದ್ರತೆ ವಾತಾವರಣ ವಿಷಾದನೀಯ: ಶಾಸಕ ಹರೀಶ್ ಪೂಂಜಾ
ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಮಾಡಿದ್ದು ಖಂಡನೀಯ. ಹತ್ಯೆಯ ಹಿನ್ನೆಲೆಯಲ್ಲಿ ಯಾವ ಕಾರಣಕ್ಕೆ ಹತ್ಯೆಯಾಗಿದೆ ಎನ್ನುವುದು ಚರ್ಚೆಯ ವಿಷಯ. ಈ ತನಿಖೆ ಪಾರದರ್ಶಕವಾಗಿ ನಡೆಯಬೇಕು ಎಂದು ಸತ್ಯಸಂಶೋಧನಾ ತಂಡ ಮಾಡಿಕೊಂಡು ಕ್ಷೇತ್ರಕ್ಕೆ ಹೋಗಿ ವರದಿ ತೆಗೆದುಕೊಂಡು ಬರುತ್ತೇವೆನಳೀನ್ ಕುಮಾರ ಕಟೀಲ, ಬಿಜೆಪಿ ರಾಜ್ಯಾಧ್ಯಕ್ಷರು.