ಜೈನಮುನಿ ಹತ್ಯೆ ಅಪರಾಧಿಗಳಿಗೆ ಮರಣದಂಡನೆ ವಿಧಿಸಲಿ: ರಾಜ್ಯ ಅಲ್ಪಸಂಖ್ಯಾತ ಆಯೋಗ ಅಧ್ಯಕ್ಷ ಅಬ್ದುಲ್ ಅಜೀಮ್ ಒತ್ತಾಯ

By Kannadaprabha News  |  First Published Jul 11, 2023, 9:38 PM IST

ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣ ಅತ್ಯಂತ ಸೂಕ್ಷ್ಮ ಪ್ರಕರಣವಾಗಿದ್ದು, ಈ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ಒಂದು ವರ್ಷದೊಳಗೆ ಆರೋಪಿಗಳಿಗೆ ಮರಣದಂಡನೆ ಶಿಕ್ಷೆಗೆ ಗುರಿಯಾಗುವಂತೆ ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಒತ್ತಾಯಿಸಿದರು.


ಬೆಳಗಾವಿ (ಜು.11) :ಚಿಕ್ಕೋಡಿ ತಾಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣ ಅತ್ಯಂತ ಸೂಕ್ಷ್ಮ ಪ್ರಕರಣವಾಗಿದ್ದು, ಈ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಿ ಒಂದು ವರ್ಷದೊಳಗೆ ಆರೋಪಿಗಳಿಗೆ ಮರಣದಂಡನೆ ಶಿಕ್ಷೆಗೆ ಗುರಿಯಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಒತ್ತಾಯಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಮೇಲ್ವಿಚಾರಣೆಯನ್ನು ಉತ್ತರ ವಲಯದ ಐಜಿಪಿ ಅವರಿಗೆ ವಹಿಸಬೇಕು. ಜೊತೆಗೆ ಪ್ರತ್ಯೇಕ ಹಾಗೂ ಪರೋಕ್ಷವಾಗಿ ಸಹಕಾರ ನೀಡಿದವರ ವಿರುದ್ದವೂ ಕ್ರಮ ಜರುಗಿಸುವಂತೆ ಆಗ್ರಹಿಸಿದರು.

Tap to resize

Latest Videos

ಮೂಲನಿವಾಸಿ ಜೈನರಿಗೆ ಭಾರತದಲ್ಲೇ ಅಭದ್ರತೆ ವಾತಾವರಣ ವಿಷಾದನೀಯ: ಶಾಸಕ ಹರೀಶ್ ಪೂಂಜಾ

ಕಾಮಕುಮಾರ ಶ್ರೀಗಳ ಅವರ ಪೂರ್ವಾಶ್ರಮದ ಕುಟುಂಬಸ್ಥರ ಡಿಎನ್‌ಎ ಪರೀಕ್ಷೆಗೊಳಪಡಿಸಬೇಕು. ಅವರ ಬಯಕೆಯಂತೆ ಶಾಲೆ ನಿರ್ಮಿಸಬೇಕು ಎಂದು ಹೇಳಿದರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಹಿರೇಕೋಡಿ ಜೈನ ಆಶ್ರಮಕ್ಕೆ ಭೇಟಿ ನೀಡಿ, ಪ್ರಕರಣ ಕುರಿತು ಪೊಲೀಸ್‌ ಅಧಿಕಾರಿಗಳ ಜತೆ ಚರ್ಚೆ ನಡೆಸಿರುತ್ತೇನೆ. ಅಲ್ಪಸಂಖ್ಯಾತರ ಹಕ್ಕುಗಳು, ಶಾಸನಬದ್ಧ ಹಕ್ಕುಗಳ ರಕ್ಷಣೆ ಹಾಗೂ ಹಿತರಕ್ಷಣೆಯು ಆಯೋಗದ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆಶ್ರಮಕ್ಕೆ ಭೇಟಿ ನೀಡಿ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ಬಂಧನವಾಗಿದೆ. ಪ್ರಕರಣ ತನಿಖೆ ಹಂತದಲ್ಲಿದ್ದು, ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸರು ಕಸ್ಟಡಿಗೆ ಪಡೆಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಮಾಹಿತಿಗಳು ತನಿಖೆಯಲ್ಲಿ ತಿಳಿದುಬರಲಿವೆ ಎಂದರು.

ಪ್ರಕರಣದ ಪ್ರಮುಖ ಅಂಶಗಳ ಕುರಿತು ತನಿಖಾ ತಂಡದ ಜತೆಯೂ ಚರ್ಚೆ ನಡೆಸಲಾಗಿದೆ. ಕೊಲೆಯ ಉದ್ಧೇಶ, ಸಾಕ್ಷಿ ನಾಶ ಪ್ರಯತ್ನ, ಕೊಲೆಗೆ ಸಹಕರಿಸಿದರು ಸೇರಿದಂತೆ ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ತಿಳಿಸಲಾಗಿದೆ. ವಿಶೇಷ ಪ್ರಕರಣ ಎಂದು ಪರಿಗಣಿಸಬೇಕು ಎಂದು ತಿಳಿಸಲಾಗಿದೆ. ಮೇಲ್ವಿಚಾರಣೆಯನ್ನು ಉತ್ತರ ವಲಯ ಐಜಿಪಿ ಅವರಿಗೆ ವಹಿಸಿಕೊಡುವಂತೆ ಸರಕಾರಕ್ಕೆ ಒಂದು ವಾರದೊಳಗೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.

ಈ ಪ್ರಕರಣ ಸಂಬಂಧ ಐಜಿಪಿ ಮೇಲ್ವಿಚಾರಣೆಯಲ್ಲಿ ಆರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿಸಲ್ಲಿಸಬೇಕು. ಮುಂದಿನ ಆರು ತಿಂಗಳಲ್ಲಿ ವಿಚಾರಣೆ ಪೂರ್ಣಗೊಳಿಸಬೇಕು. ಕೃತ್ಯಕ್ಕೆ ಸಹಕರಿಸಿದವರು ಸೇರಿದಂತೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ನೆರವು ನೀಡಿದವರ ಬಂಧನ ಆಗಬೇಕು. ಅಪರಾಧಿಗಳಿಗೆ ಅತ್ಯಂತ ಕಠಿಣವಾದ ಮರಣದಂಡನೆ ಶಿಕ್ಷೆ ವಿಧಿಸುವಂತಾಗಬೇಕು. ಯಾವುದೇ ಸಂಸ್ಥೆ ತನಿಖೆ ಮಾಡಿದರೂ ಸರಿ. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.

ಜೈನಮುನಿ ಹತ್ಯೆ ಆರೋಪಿಗೆ ಶಿಕ್ಷೆ ಬೇಡ, ಮನಃ ಪರಿವರ್ತನೆಯಾಗಲಿ - ಗುಣಧರನಂದಿ ಮಹಾರಾಜ್‌

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುಖ್ತಾರ ಹುಸೇನ್‌ ಪಠಾಣ, ಅಲ್ಪಸಂಖ್ಯಾತರ ಆಗೋಗದ ಮಾಜಿ ನಿರ್ದೇಶಕ ಸುರೇಶ ತಂಗಾ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಮಿರ್ಜಾನವರ ಮತ್ತಿತರರು ಉಪಸ್ಥಿತರಿದ್ದರು.

click me!