
ಹಾವೇರಿ (ಫೆ.16): ಜಲ ಜೀವನ್ ಮೀಷನ್ ಯೋಜನೆ ಅಡಿಯಲ್ಲಿ ರಾಜ್ಯಕ್ಕೆ 18 ಸಾವಿರ ಕೋಟಿ ರೂ. ಅನ್ಯಾಯವಾಗಿದೆ ಎನ್ನುವುದು ಶುದ್ಧ ಸುಳ್ಳು. ರಾಜ್ಯ ಸರ್ಕಾರ ಸುಳ್ಳು ಹೇಳುವುದನ್ನು ಬಿಟ್ಟು ಸತ್ಯವೇನಿದೆ ಎನ್ನುವುದನ್ನು ನಮಗೆ ತಿಳಿಸಿದರೆ ನಾವೂ ಸಹಕಾರ ಮಾಡುತ್ತೇವೆ. ಸಂಬಂಧ ಪಟ್ಟ ಸಚಿವರ ಜೊತೆ ಮಾತನಾಡಿ ಹಣ ಬಿಡುಗಡೆ ಮಾಡಿಸುವ ಕೆಲಸ ಮಾಡುತ್ತೇವೆ. ಇದರಲ್ಲಿ ರಾಜಕಾರಣ ಮಾಡಬಾರದು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಭಾನುವಾರ ಹಾವೇರಿಯಲ್ಲಿ ಜನ ಸಂಪರ್ಕ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 4 ವರ್ಷಗಳಿಂದ ಜಲ ಜೀಪನ್ ಮಿಷನ್ ಯೋಜನೆ ನಡೆಯುತ್ತಿದೆ. ಕೇಂದ್ರ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಈ ಯೋಜನೆ ಜಾರಿಯಾಗಿದೆ. ರಾಜ್ಯ ಸರ್ಕಾರ ಖರ್ಚು ಮಾಡಿದ ಮೇಲೆ ಕೇಂದ್ರ ಸರ್ಕಾರ ಹಣ ಬಿಡುಗಡೆ ಮಾಡುತ್ತದೆ. ರಾಜ್ಯ ಸರ್ಕಾರ ತನ್ನ ಖಜಾನೆ ಖಾಲಿ ಮಾಡಿಕೊಂಡು ಸಂಪೂರ್ಣ ದಿವಾಳಿಯಾಗಿ ಹಣ ಖರ್ಚು ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಿದರು.
ರಾಜ್ಯ ಸರ್ಕಾರ ಖರ್ಚು ಮಾಡಿದ ಮೇಲೆ ಅದರ ದಾಖಲೆಗಳನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿದರೆ, ಖರ್ಚು ಮಾಡಿದ ಎಲ್ಲ ಹಣವೂ ರಾಜ್ಯಸರ್ಕಾರಕ್ಕೆ ಬರುತ್ತದೆ. ನಾವೂ ಕೂಡ ರಾಜ್ಯ ಸರ್ಕಾರಕ್ಕೆ ಸಹಕಾರ ಮಾಡುತ್ತೇವೆ. ರಾಜ್ಯ ಸರ್ಕಾರ ಸುಳ್ಳು ಹೇಳುವುದನ್ನು ಬಿಟ್ಟು ಸತ್ಯ ಏನಿದೆ ಎನ್ನುವುದನ್ನು ನಮಗೆ ತಿಳಿಸಿದರೆ ನಾವೂ ಸಹಕಾರ ಮಾಡುತ್ತೇವೆ. ಸಂಬಂಧ ಪಟ್ಟ ಸಚಿವರ ಜೊತೆ ಮಾತನಾಡಿ ಹಣ ಬಿಡುಗಡೆ ಮಾಡಿಸುವ ಕೆಲಸ ಮಾಡುತ್ತೇವೆ. ಇದರಲ್ಲಿ ರಾಜಕಾರಣ ಮಾಡಬಾರದು ಎಂದು ಆಗ್ರಹಿಸಿದರು.
ಇದನ್ನೂ ಓದಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆ ವೇಳೆ ಅಭಿಪ್ರಾಯ ಹೇಳುವೆ: ಸಚಿವ ಸ ...
ಗೋದಾವರಿ ಕಾವೇರಿ ನದಿ ಜೋಡಣೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಹೇಳಿರುವ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ದೇವೇಗೌಡರಿಗೆ ಯಾವ ಮಾಹಿತಿ ಇದೆಯೋ ಗೊತ್ತಿಲ್ಲ. ಖಂಡಿತವಾಗಿಯೂ ರಾಜ್ಯಕ್ಕೆ ಅನ್ಯಾಯವಾಗಿದ್ದರೆ ನಾವು ಯಾವಾಗಲೂ ಪಕ್ಷಾತೀತವಾಗಿಯೇ ಹೋರಾಟ ಮಾಡುತ್ತೇವೆ ಎಂದು ಹೇಳಿದರು.
ಇದೇ ವೇಳೆ, ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲುಳಿತದಿಂದ ಕುಂಭಮೇಳಕ್ಕೆ ತೆರಳುವ ಭಕ್ತರು ಸಾವಿಗೀಡಾಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಯಾರೋ ತಪ್ಪು ಮಾಹಿತಿ ನೀಡಿದ್ದರಿಂದ ಅಲ್ಲಿ. ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಲಿ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ