
ಬೆಂಗಳೂರು (ಜೂ.18): ಜನತಾ ಜಲಧಾರೆ ಯಶಸ್ವಿಗೊಂಡ ಬಳಿಕ ಜೆಡಿಎಸ್ ರಾಜಧಾನಿಗೆ ಸೀಮಿತವಾಗಿರುವಂತೆ ಜನತಾ ಮಿತ್ರ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜು.1ರಂದು ಕಾರ್ಯಕ್ರಮಕ್ಕೆ ಚಾಲನೆ ನೀಡಲು ತೀರ್ಮಾನಿಸಲಾಗಿದೆ. ಈ ಮೊದಲು ಇದೇ ತಿಂಗಳ 22ರಂದು ಕಾರ್ಯಕ್ರಮಕ್ಕೆ ಚಾಲನೆ ನೀಡಬೇಕಾಗಿತ್ತು. ಇದೀಗ ಜು.1ಕ್ಕೆ ಮುಂದೂಡಲಾಗಿದೆ. ಶುಕ್ರವಾರ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಬಿಬಿಎಂಪಿ ಚುನಾವಣೆ ಮತ್ತು ಜನತಾ ಮಿತ್ರ ಕಾರ್ಯಕ್ರಮದ ಕುರಿತು ಚರ್ಚಿಸಲು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.
ಈ ವೇಳೆ ಮಾತನಾಡಿದ ಅವರು, ಜು.1ರಿಂದ 17 ದಿನ ಬೆಂಗಳೂರಲ್ಲಿ ಜನತಾ ಮಿತ್ರ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ. ಬೆಂಗಳೂರಿನ ಸಮಸ್ಯೆಗಳು, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ನಾನು ನಗರಕ್ಕೆ ನೀಡಿದ ಕೊಡುಗೆಗಳು ಕುರಿತು ವಾಹನಗಳ ಮೂಲಕ ಪ್ರಚಾರ ಕೈಗೊಳ್ಳುತ್ತೇವೆ. ಕಾಂಗ್ರೆಸ್-ಬಿಜೆಪಿ ಸರ್ಕಾರದಲ್ಲಿ ಆಗಿರುವ ಅನ್ಯಾಯ, ಅಕ್ರಮಗಳು, ಸಮಸ್ಯೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತೇವೆ. ನಿತ್ಯ ಮಳೆ ಬಂದರೆ ಏನು ಸಮಸ್ಯೆಯಾಗುತ್ತದೆ ಎಂಬುದನ್ನು ಬೆಂಗಳೂರಲ್ಲಿ ನೊಡಿದ್ದೇನೆ. ಈ ಎಲ್ಲ ವಿಚಾರಗಳ ಬಗ್ಗೆ ಗಮನಹರಿಸಲಾಗುತ್ತದೆ ಎಂದು ಹೇಳಿದರು.
ರಾಷ್ಟ್ರಪತಿ ಅಭ್ಯರ್ಥಿಯಾಗಿ ಎಚ್. ಡಿ ದೇವೇಗೌಡ?: ದೀದೀ ಸಭೆಯಲ್ಲಿ ಭಾಗಿ!
ಪ್ರತಿ ರಸ್ತೆಗಳು, ಮನೆಗಳಿಗೆ ಭೇಟಿ ನೀಡಲಾಗುತ್ತದೆ. ಮನೆ ಮನೆಗೆ ಕರಪತ್ರ ಹಂಚಿಕೆ ಮಾಡುತ್ತೇವೆ. ನಾಗರಿಕರು, ಮಹಿಳೆಯರು, ಯುವಕರು ಏನು ನಿರೀಕ್ಷೆ ಮಾಡಿದ್ದಾರೆ ಎನ್ನುವ ಮಾಹಿತಿ ಸಂಗ್ರಹ ಮಾಡಲಾಗುವುದು. ಜನರು ಕೊಡುವ ಸಲಹೆ ಸ್ವೀಕಾರ ಮಾಡುತ್ತೇವೆ. ಬೆಂಗಳೂರಿನ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಚರಿಸಿ ನಮಗೆ ಒಂದು ಬಾರಿ ಅವಕಾಶ ನೀಡುವಂತೆ ಅಭಿಯಾನ ಮಾಡುತ್ತೇವೆ. ಕೊನೆ ದಿನವಾದ ಜು.17ರಂದು ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದರು.
ರಾಷ್ಟ್ರಪತಿ ಚುನಾವಣೆಗೆ ದೇವೇಗೌಡ್ರು ಸ್ಪರ್ಧಿಸುತ್ತಾರಾ?: ಜುಲೈಯಲ್ಲಿ ಹಾಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧಿಕಾರದ ಅವಧಿ ಮುಕ್ತಾಯ ವಾಗಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ರಾಷ್ಟ್ರಪತಿ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ. ಅತೀ ದೊಡ್ಡ ಕೂಟವಾಗಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಇನ್ನೂ ಕೂಡಾ ತನ್ನ ಅಭ್ಯರ್ಥಿಯನ್ನು ಅಧಿಕೃತಗೊಳಿಸಿಲ್ಲ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಕೆಲ ದಿನಗಳ ಹಿಂದೆಯಷ್ಟೇ ಎನ್‍ಡಿಎಯೇತರ ಪಕ್ಷಗಳ ಸಭೆ ನಡೆದಿದ್ದರೂ ಅಭ್ಯರ್ಥಿ ಅಂತಿಮವಾಗಿಲ್ಲ.
'ಎಚ್‌ಡಿಕೆ ಊಸರವಳ್ಳಿ, ಹಿತೈಷಿಗಳಿಂದ ಅಡ್ಡ ಮತ ಮಾಡಿಸಿ ನನ್ನ ಮೇಲೆ ದೂರುತ್ತಿದ್ದಾರೆ'
ಇನ್ನು ರಾಷ್ಟ್ರಪತಿ ಚುನಾವಣೆಗೆ ಹಲವರ ಹೆಸರುಗಳು ಕೇಳಿಬರುತ್ತಿವೆ. ಅದರಲ್ಲೂ ಪ್ರಮುಖವಾಗಿ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹೆಸರು ಕೇಳಿಬರುತ್ತಿದೆ. ಈ ಬಗ್ಗೆ ಸುದ್ದಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ದೇವೇಗೌಡ ಅವರ ಪುತ್ರ ಎಚ್‌ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿ ಸ್ಪಷ್ಟನೆ ಕೊಟ್ಟಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ