
ಬೆಂಗಳೂರು(ನ.30): ಜಪಾನೀಸ್ ಎನ್‌ಸೆಫಲೈಟಿಸ್ (ಜೆಇ) ಲಸಿಕಾ ಅಭಿಯಾನವನ್ನು ಇದೇ ಡಿಸೆಂಬರ್‌ನಿಂದ ಮೂರು ವಾರಗಳ ಕಾಲ 10 ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ತಿಳಿಸಿದರು. ಅವರು ಸೋಮವಾರ ವಿಕಾಸಸೌಧದಲ್ಲಿ ಈ ಲಸಿಕೆ ಅಭಿಯಾನ ಕುರಿತು ಹಮ್ಮಿಕೊಳ್ಳಲಾದ ಸಭೆಯಲ್ಲಿ ಈ ವಿಷಯ ತಿಳಿಸಿದರು.
ಬಾಗಲಕೋಟೆ, ದಕ್ಷಿಣ ಕನ್ನಡ, ಗದಗ, ಹಾಸನ, ಹಾವೇರಿ, ಕಲಬುರಗಿ, ರಾಮನಗರ, ತುಮಕೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಈ ಜೆಇ ಲಸಿಕೆ ಅಭಿಯಾನವನ್ನು 1 ರಿಂದ 15 ವರ್ಷದೊಳಗಿನ ಮಕ್ಕಳಿಗೆ ಹಮ್ಮಿಕೊಳ್ಳಲಾಗಿದೆ.
ಕೋಲಾರ ಜಿಲ್ಲೆಯಲ್ಲಿ ಮೆದುಳು ಜ್ವರ ಪತ್ತೆ: ಆತಂಕದಲ್ಲಿ ಜನತೆ..!
ಈ ಅಭಿಯಾನದಲ್ಲಿ ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಕಾರ್ಮಿಕ, ವೈದ್ಯಕೀಯ ಶಿಕ್ಷಣ, ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗಗಳ ಇಲಾಖೆ ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಇವುಗಳು ಸಮನ್ವಯ ಸಾಧಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ