
ಬೆಂಗಳೂರು (ಸೆ.11): ಬರುವ ಮೂರ್ನಾಲ್ಕು ದಿನಗಳಲ್ಲಿ ಸರ್ಕಾರ ಬದಲಾವಣೆ ಸಂಬಂಧ ಮಹತ್ತರ ಬದಲಾವಣೆ ನಡೆಯಲಿದೆ ಎಂಬ ಗುಸುಗುಸು ಬಿಜೆಪಿ ಪಾಳೆಯದಲ್ಲಿ ತೀವ್ರವಾಗಿದೆ.
ಸಚಿವ ರಮೇಶ್ ಜಾರಕಿಹೊಳಿ ಅವರು ಸೋಮವಾರ ನಗರಕ್ಕೆ ಆಗಮಿಸಿದ್ದು, ತಮ್ಮ ಮುಂದಿನ ರಾಜಕೀಯ ಬೆಳವಣಿಗೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರೊಂದಿಗೆ ಚರ್ಚಿಸಿ ಪ್ರಮುಖ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಜಾರಕಿಹೊಳಿ ಬ್ರದರ್ಸ್‌ಗೆ ಕೆಪಿಸಿಸಿ ಪಟ್ಟ
ತಮ್ಮ ಬೆಂಬಲಿಗ ಶಾಸಕರೊಂದಿಗೆ ಕಾಂಗ್ರೆಸ್ ತೊರೆಯಲು ಮನಸ್ಸು ಮಾಡಿರುವ ರಮೇಶ್ ಜಾರಕಿಹೊಳಿ ಅವರು ಬಿಜೆಪಿ ನಾಯಕರೊಂದಿಗೆ ನಡೆಸುವ ಮಾತುಕತೆ ಯಶಸ್ವಿಯಾದಲ್ಲಿ ತೀರ್ಮಾನ ಪ್ರಕಟಿಸುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ. ಇದಕ್ಕೆ ಪೂರಕವಾಗಿ ಜಾರಕಿಹೊಳಿ ಸಹೋದರರೊಂದಿಗೆ ಸಂಪರ್ಕದಲ್ಲಿರುವ ಬಿಜೆಪಿಯ ಹಿರಿಯ ಮುಖಂಡ ಬಿ.ಶ್ರೀರಾಮುಲು ಅವರು ಸೋಮವಾರ ಬೆಂಗಳೂರಿನಲ್ಲೇ ಇದ್ದರು. ಜೊತೆಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಇತರ ಪೂರ್ವನಿಗದಿತ ಕಾರ್ಯಕ್ರಮಗಳನ್ನು ಬದಿಗೊತ್ತಿ ನಗರದಲ್ಲೇ ವಾಸ್ತವ್ಯ ಮುಂದು ವರೆಸಿದ್ದು ಅನುಮಾನಕ್ಕೆ ಕಾರಣವಾಗಿದೆ. ಆದರೆ, ಈವರೆಗೂ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ತೊರೆದು ಬಿಜೆಪಿಗೆ ಬರುವುದು ಅಂತಿಮವಾಗಿಲ್ಲವಾದರೂ ವದಂತಿಯಂತೂ ದಟ್ಟವಾಗಿ ಹಬ್ಬಿದೆ. ಒಂದು ವೇಳೆ ರಮೇಶ್ ಬಿಜೆಪಿಗೆ ಆಗಮಿಸುವುದು ನಿರ್ಧಾರವಾದಲ್ಲಿ ಎಷ್ಟು ಜನ ಶಾಸಕರು ಅವರೊಂದಿಗೆ ಕೈಜೋಡಿಸುತ್ತಾರೆ ಎಂಬುದೂ ಕುತೂಹಲಕರವಾಗಿದೆ.
ಜಾರಕಿಹೊಳಿ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ದೆಹಲಿಗೆ ತೆರಳಿದ್ದ ಯಡಿಯೂರಪ್ಪ ಅವರು ದಿಢೀರನೆ ಬೆಂಗಳೂರಿಗೆ ವಾಪಸಾಗಿದ್ದು ಮತ್ತು ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಸೋಮವಾರ ಬಂದ್ ಆಚರಿಸಿದರೂ ಅದನ್ನು ಲೆಕ್ಕಿಸದೆ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿಯಿಂದ ಬೆಂಗಳೂರಿಗೆ ಆಗಮಿಸಿದ್ದು ನಾನಾ ತರಹದ ವದಂತಿಗಳಿಗೆ ಎಡೆ ಮಾಡಿಕೊಟ್ಟಿರುವುದಂತೂ ನಿಜ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ