2ಎ ಮೀಸಲಾತಿ ವಿಚಾರ ಈಗಾಗಲೇ ಒಂದು ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೀಸಲಾತಿ ಕಲ್ಪಿಸುವ ಭರವಸೆ ನೀಡಿದ್ದಾರೆ. ವಿಳಂಬವಾದಲ್ಲಿ ಮತ್ತೆ ಹೋರಾಟಕ್ಕೆ ಮುಂದಾಗಲಿದ್ದೇವೆ ಎಂದು ಕೂಡಲಸಂಗಮ ಪೀಠಾಧ್ಯಕ್ಷ ಜಯ ಮೃತ್ಯುಂಜಯ್ಯ ಸ್ವಾಮೀಜಿ ಹೇಳಿದರು.
ಯಾದಗಿರಿ (ಜ. 1): ‘2ಎ’ ಮೀಸಲಾತಿ (2 A Reservation) ವಿಚಾರ ಈಗಾಗಲೇ ಒಂದು ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಮೀಸಲಾತಿ ಕಲ್ಪಿಸುವ ಭರವಸೆ ನೀಡಿದ್ದಾರೆ. ವಿಳಂಬವಾದಲ್ಲಿ ಮತ್ತೆ ಹೋರಾಟಕ್ಕೆ ಮುಂದಾಗಲಿದ್ದೇವೆ ಎಂದು ಕೂಡಲಸಂಗಮ ಪೀಠಾಧ್ಯಕ್ಷ ಜಯಮೃತ್ಯುಂಜಯ್ಯ ಸ್ವಾಮೀಜಿ (Jayamrutunjaya Swamiji) ಹೇಳಿದರು.
ಸಿಎಂ ಬಸವರಾಜ ಬೊಮ್ಮಾಯಿ ಅವರು ಮೀಸಲಾತಿ ಕಲ್ಪಿಸುವ ವಿಶ್ವಾಸವಿದೆ. ಒಂದು ವೇಳೆ ಮೀಸಲಾತಿ ಕಲ್ಪಿಸದಿದ್ದರೆ ಮತ್ತೆ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ರಾಜ್ಯ ಸರ್ಕಾರಕ್ಕೆ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಮಾರ್ಚ್ ತಿಂಗಳ ಒಳಗೆ ಸಿಎಂ ಮೀಸಲಾತಿ ನೀಡುತ್ತೆನೆಂದು ಸಿಎಂ ಭರವಸೆ ಕೊಟ್ಟಿದ್ದಾರೆ. ನಮಗೆ ಬಸವರಾಜ ಬೊಮ್ಮಾಯಿ ಅವರ ಮೇಲೆ ನಂಬಿಕೆ, ವಿಶ್ವಾಸವಿದೆ. ಹೀಗಾಗಿ ಸಿಎಂ ನಮ್ಮ ಮೇಲೆ ಇಟ್ಟಿರುವ ನಂಬಿಕೆ, ವಿಶ್ವಾಸ ಉಳಿಸಿಕೊಳ್ಳಬೇಕು.
undefined
ಪಂಚಮಸಾಲಿ (Panchamasali) ಸಮಾಜ 2ಎ ಮೀಸಲಾತಿ ಕಲ್ಪಿಸುತ್ತೆನೆಂದು ಭರವಸೆ ನೀಡಿ ಮೀಸಲಾತಿ ಕಲ್ಪಿಸದೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ (B.S.Yediyurappa) ಅವರು ಕೈಕೊಟ್ಟಿದ್ದಾರೆ. ಬಿಎಸ್ವೈ ಮೇಲೆ 10 ವರ್ಷಗಳಿಂದ ನಂಬಿಕೆ ನಾವು ಇಟ್ಟಿದ್ವಿ ಆದರೆ ಅವರು ಕೈ ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಕೈ ಕೊಡಲ್ಲವೆನ್ನುವ ವಿಶ್ವಾಸವಿದೆ. ಪಂಚಮಸಾಲಿ ಸಮುದಾಯಕ್ಕೆ ಸಿಎಂ ಸ್ಥಾನ, ಮಂತ್ರಿ ಸ್ಥಾನಕ್ಕಿಂತ ಮೀಸಲಾತಿ ಕಲ್ಪಿಸುವುದು ಮುಖ್ಯ. ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಹೋರಾಟ ಮುಖ್ಯವಾಗಿದೆ. ಮೀಸಲಾತಿ ಕಲ್ಪಿಸಿದರೆ ಸಮಾಜದ ಜನರಿಗೆ ಅನುಕೂಲವಾಗುತ್ತದೆ. ಮಂತ್ರಿ ಸ್ಥಾನಕ್ಕೆ ಆಸೆ ಪಟ್ಟು ಮೀಸಲಾತಿ ಸೌಲಭ್ಯ ಕಳೆದುಕೊಳ್ಳುವುದು ಬೇಡ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
Anti Conversion Bill: ಮತಾಂತರ ನಿಷೇಧ ಕಾಯ್ದೆಗೆ ಕೂಡಲ ಶ್ರೀ ಬೆಂಬಲ?
ಸಿಎಂ ಆಗಿರುವವರೆಗೂ ಬೊಮ್ಮಾಯಿಗೆ ಬೆಂಬಲ: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಹುದ್ದೆಯಲ್ಲಿ ಇರುವವರೆಗೂ ನಮ್ಮ ಬೆಂಬಲ ಇರಲಿದೆ ಎಂದು ಕೂಡಲ ಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತಂತೆ ನಡೆಯುತ್ತಿರುವ ಚರ್ಚೆಗೆ ಸಂಬಂಧಿಸಿದಂತೆ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿಗಳನ್ನು ಬದಲಾಯಿಸುವುದು ಮತ್ತು ಮುಂದುವರೆಸುವುದು ಆ ಪಕ್ಷದ ಆಂತರಿಕ ವಿಚಾರವಾಗಿದೆ. ಈ ಸಂಬಂಧ ನಾವು ಪ್ರತಿಕ್ರಿಯೆ ನೀಡುವುದಕ್ಕೆ ಸರಿಯಾದ ಕ್ರಮವಲ್ಲ. ಆದರೆ, ಬಸವರಾಜ ಬೊಮ್ಮಾಯಿ ಎಲ್ಲಿಯವರೆಗೂ ಮುಖ್ಯಮಂತ್ರಿಯಾಗಿರುತ್ತಾರೋ ಅಲ್ಲಿಯವರೆಗೂ ನಮ್ಮ ಸಮುದಾಯದ ಸಂಪೂರ್ಣ ಬೆಂಬಲ ಅವರಿಗಿರಲಿದೆ ಎಂದು ಹೇಳಿದರು.
MLC Election: ನೀತಿ ಸಂಹಿತೆ ಮುಗಿದ ಬಳಿಕ ಮೀಸಲಾತಿ ಗ್ರಾಪಂ ಅಭಿಯಾನ: ಕೂಡಲ ಶ್ರೀ
‘ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಬಿ.ಎಸ್.ಯಡಿಯೂಪ್ಪನನವರಿಗೆ ಪಂಚಮಸಾಲಿ ಲಿಂಗಾಯತರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ತಪ್ಪು ಮಾಹಿತಿಯಿತ್ತು. ಇದರಿಂದ ನಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿರಲಿಲ್ಲ. ನಮ್ಮ ಎಲ್ಲ ಮನವಿಗಳನ್ನು ನೀಡಲು ಮುಖ್ಯಮಂತ್ರಿಗಳ ಮನೆ ಬಾಗಿಲಿಗೆ ಹೋಗಬೇಕಾಗಿತ್ತು. ಆದರೆ, ಇದೀಗ ಬೊಮ್ಮಾಯಿಯವರು ನಮ್ಮ ಮನವಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದಾರೆ. ನಮ್ಮ ಹೋರಾಟಕ್ಕೆ ಉತ್ತಮ ಫಲ ನೀಡಲು ಪ್ರಯತ್ನ ನಡೆಸುತ್ತಿದ್ದಾರೆ. ಆದ್ದರಿಂದ ನಮ್ಮ ಬೆಂಬಲ ಅವರಿಗೆ ಇದೆ’ ಎಂದು ಸ್ವಾಮೀಜಿ ತಿಳಿಸಿದರು.