ಇಂದು ಜೆಡಿಎಸ್ ಬೃಹತ್ ಸಮಾವೇಶ; ಬಿಜೆಪಿ ಜತೆ ಮೈತ್ರಿ ಇಂದೇ ನಿರ್ಧಾರ?

Published : Sep 10, 2023, 10:37 AM IST
ಇಂದು ಜೆಡಿಎಸ್ ಬೃಹತ್ ಸಮಾವೇಶ; ಬಿಜೆಪಿ ಜತೆ ಮೈತ್ರಿ ಇಂದೇ ನಿರ್ಧಾರ?

ಸಾರಾಂಶ

ಮುಂಬರುವ ಲೋಕಸಭೆ, ಜಿಲ್ಲಾ, ತಾಲೂಕು ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟಿಸಲು ಜೆಡಿಎಸ್‌ ಭಾನುವಾರ ಬೃಹತ್‌ ಸಮಾವೇಶ ಹಮ್ಮಿಕೊಂಡಿದೆ.

ಬೆಂಗಳೂರು (ಸೆ.10) : ಮುಂಬರುವ ಲೋಕಸಭೆ, ಜಿಲ್ಲಾ, ತಾಲೂಕು ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷವನ್ನು ಸಂಘಟಿಸಲು ಜೆಡಿಎಸ್‌ ಭಾನುವಾರ ಬೃಹತ್‌ ಸಮಾವೇಶ ಹಮ್ಮಿಕೊಂಡಿದೆ.

ನಗರದ ಅರಮನೆ ಮೈದಾನದಲ್ಲಿ ಬೆಳಗ್ಗೆ 11 ಗಂಟೆಗೆ ಸಮಾವೇಶ ನಡೆಯಲಿದ್ದು, ಬಿಜೆಪಿ-ಜೆಡಿಎಸ್‌ ಮೈತ್ರಿ(BJP JDS alliance) ಕುರಿತು ಪ್ರಕಟಿಸುವ ನಿರೀಕ್ಷೆ ಇದೆ. ಲೋಕಸಭೆಯೊಂದಿಗೆ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಯಲ್ಲಿಯೂ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಪ್ರಸ್ತಾಪವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸಮಾವೇಶದಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ(HD Devegowda), ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ(HD Kumaraswamy), ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ(CM Ibrahim) ಸೇರಿದಂತೆ ಪಕ್ಷದ ಮುಖಂಡರು, ಶಾಸಕರು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ.

ಜೆಡಿಎಸ್‌ನಲ್ಲಿ ದೇವೇಗೌಡರ ಮಾತಿಗೆ ಕಿಮ್ಮತ್ತಿಲ್ಲ: ಚಲುವರಾಯಸ್ವಾಮಿ

ಪಕ್ಷದ ಬಲವರ್ಧನೆ, ಮುಂಬರುವ ಚುನಾವಣೆಗಳ ಸಿದ್ಧತೆಗಳ ಕುರಿತು ಸಮಾವೇಶದಲ್ಲಿ ಚರ್ಚೆ ನಡೆಯಲಿದೆ. ರಾಜ್ಯ ಸರ್ಕಾರದ ರೈತ ಮತ್ತು ಜನ ವಿರೋಧಿ ನಿಲುವುಗಳು ಹಾಗೂ ವೈಫಲ್ಯಗಳ ವಿರುದ್ಧ ಕೈಗೊಳ್ಳಲಿರುವ ಹೋರಾಟದ ರೂಪುರೇಷೆಗಳ ಕುರಿತು ಸಮಾಲೋಚನೆ ನಡೆಯಲಿದೆ. ಪಕ್ಷದ ಸಂಘಟನೆ ಚುರುಕುಗೊಳಿಸಲು ಮತ್ತು ಚುನಾವಣೆಗಳಿಗೆ ಸಿದ್ಧತೆ ಮಾಡಲು ಪಕ್ಷದ ವರಿಷ್ಠರು ಮಾರ್ಗದರ್ಶನ ಮಾಡಲಿದ್ದಾರೆ ಎಂದು ಮೂಲಗಳು ಹೇಳಿವೆ.

ಅನಾರೋಗ್ಯಕ್ಕೊಳಗಾಗಿದ್ದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡ ಹಿನ್ನೆಲೆಯಲ್ಲಿ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಕುಮಾರಸ್ವಾಮಿ ಅವರು ಸಹ ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ ಸಮಾವೇಶಕ್ಕೆ ಆಗಮಿಸುವಂತೆ ಮನವಿ ಮಾಡಿದ್ದಾರೆ. ಸಮಾವೇಶದಲ್ಲಿ ದೃಢಸಂಕಲ್ಪ ಮಾಡೋಣ, ಆ ಮೂಲಕ ಪಕ್ಷದ ಬಲವರ್ಧನೆಗೆ ಶ್ರಮಿಸೋಣ ಎಂದಿದ್ದಾರೆ. ಅಲ್ಲದೇ, ಸಮಾವೇಶದಲ್ಲಿ ಮುಕ್ತವಾಗಿ ಮಾತನಾಡಿ, ಮುಂದಿನ ಹೆಜ್ಜೆಗಳನ್ನು ದೃಢವಾಗಿ ಇಡೋಣ’ ಎಂಬ ಕರೆಯನ್ನು ನೀಡಿದ್ದಾರೆ. 

ಕರ್ನಾಟಕದಲ್ಲಿ ಸಂಕಷ್ಟ ಪರಿಸ್ಥಿತಿಯಿದ್ದು, ಕಾವೇರಿ ನೀರಿನ ವಿಚಾರದಲ್ಲಿ ಬಿಜೆಪಿ ರಾಜಕೀಯ ಬಿಡಲಿ: ಚಲುವರಾಯಸ್ವಾಮಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಸೇರಿಯನ್‌ ಹೆರಿಗೆ ಹೆಚ್ಚಳ ಏಕೆ ಎಂದು ತಿಳಿಯಲು ಆಡಿಟ್‌: ಸಚಿವ ದಿನೇಶ್‌ ಗುಂಡೂರಾವ್
ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ