
ಆನೇಕಲ್(ಜು.17): ಜಿಲ್ಲಾ ಜೆಡಿಎಸ್ ಮುಖಂಡ ಹಾಗೂ ಆನೇಕಲ್ ತಾಲೂಕು ಮಾಜಿ ಅಧ್ಯಕ್ಷ ಟಿ.ಶ್ರೀನಾಥರೆಡ್ಡಿ(69) ಕೊರೋನಾಗೆ ಬಲಿಯಾಗಿದ್ದಾರೆ. ಇತ್ತೀಚೆಗೆ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದರು. ಪತ್ನಿ ಹಾಗೂ ಪುತ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಮುಖಂಡರಾದ ಶುಭಾನಂದ್, ಸಿ.ತೋಪಯ್ಯ, ದೇವರಾಜ್, ಅಧ್ಯಕ್ಷ ದೇವೇಗೌಡ ಹಾಗೂ ಕೆಲ ಜೆಡಿಎಸ್ ಪ್ರಮುಖರು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು.
‘ಮಾಸ್ಕ್ ಹಾಕಲ್ಲ, ಏನ್ಮಾಡ್ಕೊತ್ತಿರಾ’
ಕೊರೋನಾ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಹೋಮ್ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯೊಬ್ಬ ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿರುವ ಘಟನೆ ನಡೆದಿದೆ.
2ನೇ ದಿನ ಕಟ್ಟುನಿಟ್ಟಿನ ಲಾಕ್‌ಡೌನ್: 9 ಜಿಲ್ಲೆಗಳಲ್ಲಿ ಬಂದೋಬಸ್ತ್ ಬಿಗಿ ಮಾಡಿದ ಪೊಲೀಸರು
ಕೆಂಗೇರಿಯ ಅಪಾರ್ಟ್‌ಮೆಂಟ್‌ನಲ್ಲಿದ್ದ ನಿವಾಸಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಆ ನಿವಾಸಿಯನ್ನು ಕೋವಿಡ್ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಜೊತೆಗಿದ್ದ ವ್ಯಕ್ತಿಯನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಆದರೆ ಕ್ವಾರಂಟೈನ್‌ನಲ್ಲಿದ್ದ ಈ ವ್ಯಕ್ತಿ ಮಾÓ್ಕ… ಧರಿಸದೆ ಅಪಾರ್ಟ್‌ಮೆಂಟ್ ತುಂಬಾ ಓಡಾಡಿದ್ದಾನೆ. ಈ ಬಗ್ಗೆ ನಿವಾಸಿಗಳು ಪ್ರಶ್ನಿಸಿದ್ದಕ್ಕೆ, ‘ನಾನು ಮಾಸ್ಕ್ ಹಾಕಲ್ಲ. ಮನೆ ಒಳಗೂ ಇರಲ್ಲ. ಅದೇನ್ ಮಾಡ್ಕೋತಿರೋ ಮಾಡ್ಕೊಳ್ಳಿ ಎಂದಿರುವ ವಿಡಿಯೋ ವೈರಲ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ