
ಬೆಂಗಳೂರು(ಮಾ.10): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿರುವ 2021-22ನೇ ಸಾಲಿನ ರಾಜ್ಯದ ಬಜೆಟ್ ಉಪ್ಪು, ಹುಳಿ ಮತ್ತು ಖಾರವಿಲ್ಲದ ಸಪ್ಪೆ ಬಜೆಟ್ ಆಗಿದೆ ಎಂದು ಜೆಡಿಎಸ್ ಮುಖಂಡ ಟಿ.ಎ.ಶರವಣ ಪ್ರತಿಕ್ರಿಯಿಸಿದ್ದಾರೆ.
ಈ ಬಜೆಟ್‌ನಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳಿಗೆ ಒತ್ತು ಕೊಟ್ಟಿಲ್ಲ. ಹಿಂದಿನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಧಿಕಾರವಿದ್ದಾಗ ಘೋಷಣೆ ಮಾಡಲಾದ ಯೋಜನೆಗಳನ್ನು ಈಗ ಇವರು ಮುಂದುವರಿಸಿದ್ದಾರೆ. ಕೋವಿಡ್ ನಂತರ ಮಂಡಿಸಿದ ಈ ಬಜೆಟ್ ನಮ್ಮೆಲ್ಲರಿಗೂ ನಿರಾಸೆ ತಂದಿದೆ. ಜನ ಸಂಕಷ್ಟದಲ್ಲಿರುವಾಗ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನ ನಿತ್ಯ ಬಳಕೆ ವಸ್ತುಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡುತ್ತಾರೆ ಎಂಬ ನಿರೀಕ್ಷೆಯಿತ್ತು. ಅದು ಹುಸಿಯಾಗಿದೆ ಎಂದು ತಿಳಿಸಿದ್ದಾರೆ.
ಕ್ಷೇತ್ರಕ್ಕೆ ಅನ್ಯಾಯ: ಯಡಿಯೂರಪ್ಪ ವಿರುದ್ಧ ತಿರುಗಿಬಿದ್ದ ಶಾಸಕ
ಎಲ್ಲ ನಿಗಮಗಳಿಗೆ ಹೆಚ್ಚಿನ ಅನುದಾನ ಕೊಟ್ಟು ನಮ್ಮ ಸಮಾಜದ ಆರ್ಯ ವೈಶ್ಯ ಅಭಿವೃದ್ಧಿ ನಿಗಮಕ್ಕೆ ಕೇವಲ 5 ಕೋಟಿ ಕೊಡುವ ಮೂಲಕ ನಮ್ಮ ಸಮಾಜಕ್ಕೆ ಅನ್ಯಾಯ ಮಾಡಿದ್ದಾರೆ. ನಮ್ಮ ಸಮಾಜದಲ್ಲಿಯೂ ಬಹಳಷ್ಟುಬಡವರಿದ್ದಾರೆ. ಸರ್ಕಾರಕ್ಕೆ ವ್ಯಾಪಾರ ವಹಿವಾಟು ಮೂಲಕ ಹೆಚ್ಚಿನ ತೆರಿಗೆಯನ್ನು ಪ್ರಾಮಾಣಿಕವಾಗಿ ಪಾವತಿ ಮಾಡುವ ಸಮಾಜ ನಮ್ಮದು. ಆದ್ದರಿಂದ ಈ ಕೂಡಲೆ ಆರ್ಯ ವೈಶ್ಯ ಅಭಿವೃದ್ಧಿ ನಿಗಮಕ್ಕೆ .25 ಕೋಟಿ ಒದಗಿಸಬೇಕು ಎಂದು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ