ಬೆಂಗಳೂರು(ಸೆ.02): ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸಂಸತ್ ಸದಸ್ಯತ್ವದಿಂದ ವಜಾಗೊಳಿಸಿ ತಮ್ಮನ್ನು ಜಯಶಾಲಿಯನ್ನಾಗಿ ಘೋಷಿಸಬೇಕೆಂದು ಕೋರಿದ್ದ ಅಂದಿನ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಜೆಡಿಎಸ್ ಶಾಸಕ ಎ.ಮಂಜು ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ತಮ್ಮ ಸದಸ್ಯತ್ವ ರದ್ದತಿ ಕೋರಿ ಎ.ಮಂಜು ಸಲ್ಲಿಸಿದ್ದ ಅರ್ಜಿಗೆ ಪ್ರತಿಯಾಗಿ ಪ್ರಜ್ವಲ್ ಅವರು ಸಹ ರಿ-ಕ್ರಿಮಿನೇಷನ್ ಪಿಟಿಷನ್ ಅರ್ಜಿ ಸಲ್ಲಿಸಿ, ಎ.ಮಂಜು ಅವರನ್ನು ಜಯಶಾಲಿ ಅಭ್ಯರ್ಥಿಯಾಗಿ ಘೋಷಿಸಬಾರದು ಎಂದು ಕೋರಿದ್ದರು. ಕಳೆದ ಲೋಕಸಭಾ ಚುನಾವಣೆಯಲ್ಲಿ ಹಾಸನದಲ್ಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎ.ಮಂಜು ಅವರು ಸಹ ಚುನಾವಣೆಯಲ್ಲಿ ಹಲವು ಅಕ್ರಮ ಎಸಗಿದ್ದಾರೆ. ಅವರು ಸಲ್ಲಿಸಿದ ಪ್ರಮಾಣ ಪತ್ರದಲ್ಲಿ ಹಲವು ದೋಷಗಳಿವೆ. ತಮ್ಮ ಹಾಗೂ ಪತ್ನಿಯ ಆಸ್ತಿ ವಿವರ, ಅವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳ ವಿವರಗಳನ್ನು ಪ್ರಮಾಣ ಪತ್ರದಲ್ಲಿ ಬಹಿರಂಗಪಡಿಸಿಲ್ಲ. ಇದು ಜನ ಪ್ರತಿನಿಧಿಗಳ ಕಾಯ್ದೆಗೆ ವಿರುದ್ಧವಾಗಿದ್ದು, ಅವರನ್ನು ಜಯಶಾಲಿ ಅಭ್ಯರ್ಥಿಯಾಗಿ ಘೋಷಣೆ ಮಾಡಬಾರದು ಎಂದು ಅರ್ಜಿಯಲ್ಲಿ ಪ್ರಜ್ವಲ್ ಕೋರಿದ್ದರು.
ಒಂದೇ ಪಕ್ಷದಲ್ಲಿದ್ದೀರಿ... ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅನರ್ಹತೆ ಬಗ್ಗೆ ಎ.ಮಂಜು ಮಾತು!
ಆ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್, ಚುನಾವಣೆಯಲ್ಲಿ ಎ.ಮಂಜು ಸಹ ಅಕ್ರಮ ಎಸಗಿದ್ದಾರೆ ಎಂದು ತೀರ್ಮಾನಿಸಿದೆ. ಆ ಮೂಲಕ ಎ.ಮಂಜು ಅವರನ್ನು ಜಯಶಾಲಿ ಅಭ್ಯರ್ಥಿಯಾಗಿ ಘೋಷಿಸಲು ನಿರಾಕರಿಸಿದೆ. ಇದು ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ದಾರಿಯಾದಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ