
ಬೆಂಗಳೂರು: ಆಪರೇಷನ್ ಕಮಲದ ಯಾವುದೇ ಭೀತಿ ಇಲ್ಲ ಎಂದು ನಿರಾಳವಾಗಿರುವ ಜೆಡಿಎಸ್‌ಗೂ ಬಂಡಾಯದ ಬಿಸಿ ತಟ್ಟಿದ್ದು, ಕೆ.ಆರ್.ಪೇಟೆ ಕ್ಷೇತ್ರದ ಶಾಸಕ ನಾರಾಯಣ ಗೌಡ ಅಧಿವೇಶನದ ಮೊದಲ ದಿನ ಗೈರಾಗಿರುವ ಮೂಲಕ ಶಾಕ್ ನೀಡಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಧೋರಣೆಯ ಬಗ್ಗೆ ಅಸಮಾಧಾನಗೊಂಡಿರುವ ನಾರಾಯಣಗೌಡ, ಅನಾರೋಗ್ಯದ ನೆಪ ನೀಡಿ ಸದನಕ್ಕೆ ಗೈರಾಗಿದ್ದರು ಎಂಬ ಮಾತುಗಳು ಕೇಳಿಬಂದಿವೆ.
ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಮುಂಬೈಗೆ ತೆರಳಿದ್ದಾರೆ. ಅವರು ಚಿಕಿತ್ಸೆ ಪಡೆದುಕೊಂಡು ಅಧಿವೇಶನದಲ್ಲಿ ಭಾಗಿಯಾಗಲಿದ್ದಾರೆ. ಆಪರೇಷನ್ ಕಮಲಕ್ಕೊಳಗಾಗುವ ಆತಂಕ ಇಲ್ಲ. ಜೆಡಿಎಸ್‌ನಲ್ಲಿಯೇ ಅವರು ಇರಲಿದ್ದಾರೆ ಎಂದು ಜೆಡಿಎಸ್‌ನ ಪ್ರಮುಖರು ಸಮಜಾಯಿಷಿ ನೀಡಿದ್ದಾರೆ.
ಈ ನಡುವೆ ಸ್ವತಃ ನಾರಾಯಣಗೌಡ ವಾಟ್ಸ್‌ಆಪ್ ಸಂದೇಶದ ಮೂಲಕ ಸುದ್ದಿ ರವಾನಿಸಿ, ಅನಾರೋಗ್ಯದ ಹಿನ್ನೆಲೆಯಲ್ಲಿ ಸದನಕ್ಕೆ ಹಾಜರಾಗುತ್ತಿಲ್ಲ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ