Latest Videos

ಸೂರಜ್‌ ರೇವಣ್ಣ ಸಲಿಂಗರತಿ: 2ನೇ ಕೇಸೂ ಸಿಐಡಿಗೆ

By Kannadaprabha NewsFirst Published Jun 27, 2024, 6:15 AM IST
Highlights

ಇನ್ನೊಂದೆಡೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಸಿಐಡಿ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ತಮ್ಮ ಮೇಲಿನ ಆರೋಪವನ್ನು ನಿರಾಕರಿಸುತ್ತಿರುವ ಅವರು, ತಾವು ಟ್ರ್ಯಾಪ್‌ಗೊಳಗಾಗಿದ್ದೇವೆ. ನಾನು ತಪ್ಪು ಮಾಡಿಲ್ಲವೆಂದು ಅಲವತ್ತುಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬೆಂಗಳೂರು(ಜೂ.27): ಸಲಿಂಗ ರತಿ ಸಂಬಂಧ ಜೆಡಿಎಸ್ ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಎರಡನೇ ಪ್ರಕರಣವು ರಾಜ್ಯ ಅಪರಾಧ ತನಿಖಾ ದಳದ (ಸಿಐಡಿ) ತನಿಖೆಗೆ ವರ್ಗಾವಣೆಯಾಗಿದೆ.

ಈಗಾಗಲೇ ಇದೇ ಠಾಣೆಯಲ್ಲಿ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಜೆಡಿಎಸ್ ಕಾರ್ಯಕರ್ತನ ಮೇಲಿನ ಅಸಹಜ ಲೈಂಗಿಕ ದೌರ್ಜನ್ಯ ಕೃತ್ಯ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ, ಸೂರಜ್‌ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ. ಈಗ ಹೊಳೆನರಸೀಪುರ ಠಾಣೆಯಲ್ಲಿ ಮಂಗಳವಾರ ರಾತ್ರಿ ದಾಖಲಾಗಿದ್ದ ಎರಡನೇ ಪ್ರಕರಣವನ್ನು ಮುಂದಿನ ತನಿಖೆಗೆ ಸಿಐಡಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಸೂಚನೆ ಮೇರೆಗೆ ಹಾಸನ ಜಿಲ್ಲೆ ಪೊಲೀಸರು ವರ್ಗಾಯಿಸಿದ್ದಾರೆ.

ಪೆನ್‌ಡ್ರೈವ್ ಪ್ರಕರಣ: ಈಗ ಬಿಜೆಪಿ ಪ್ರೀತಂಗೌಡ ವಿರುದ್ಧವೂ ಎಫ್‌ಐಆರ್..!

ಮೂರು ವರ್ಷಗಳ ಹಿಂದೆ ತಮ್ಮ ಮೇಲೂ ಸೂರಜ್ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಅವರ ಆಪ್ತ ದೂರು ನೀಡಿದ್ದರು. ಈ ದೂರಿನ ಮೇರೆಗೆ ಸೂರಜ್ ಮೇಲೆ ಐಪಿಸಿ 377ರಡಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ತಪ್ಪು ಮಾಡಿಲ್ಲ- ಸೂರಜ್‌:

click me!