'ನಾನು, ನನ್ನಿಂದಲೇ ಎನ್ನುವ ನೀವು ಸ್ಮಶಾನಕ್ಕೆ ಹೋಗಿ ಬನ್ನಿ..' ರಾಜ್ಯ ಸರ್ಕಾರದ ವಿರುದ್ಧ ಸೂರಜ್‌ ರೇವಣ್ಣ ಗುಡುಗು!

By Santosh Naik  |  First Published Jan 2, 2025, 3:06 PM IST

ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸೂರ್ಯ ಹುಟ್ಟುವುದು ಮಾತ್ರವಲ್ಲ, ಪ್ರಜ್ವಲಿಸುತ್ತಾನೆ ಎಂದು ಎಚ್ಚರಿಸಿದ್ದಾರೆ. ಯಾವುದೂ ಶಾಶ್ವತವಲ್ಲ, ಸರ್ಕಾರ ಕೂಡ ಶಾಶ್ವತವಲ್ಲ ಎಂದು ಹೇಳಿದ್ದಾರೆ.


ಹಾಸನ (ಜ.2): ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್‌ ಎಂಎಲ್‌ಸಿ ಸೂರಜ್‌ ರೇವಣ್ಣ ಗುಡುಗಿದ್ದಾರೆ. ಸೂರ್ಯ ಹುಟ್ಟೋದು ಮಾತ್ರವಲ್ಲ, ಸೂರ್ಯ ಪ್ರಜ್ವಲಿಸುತ್ತಾನೆ ಅನ್ನೋದು ನೆನಪಿರಲಿ ಎಂದು ಸರ್ಕಾರಕ್ಕೆ ಎಚ್ಚರಿಸಿದ್ದಾರೆ. ನಿಮ್ಮ ಪ್ರಜ್ವಲ್ ಅಣ್ಣ ಕೂಡ ಅಷ್ಟೇ, ನಿಮ್ಮ ಸೂರಜ್ ಅಣ್ಣ ಕೂಡ ಅಷ್ಟೇ. ಈ ಜಿಲ್ಲೆಯ ಋಣ ತೀರಿಸುವ ಕೆಲಸ ಮಾಡೇ ಮಾಡುತ್ತೇವೆ. ಕೆಲವು ಅಧಿಕಾರಿಗಳು, ಕೆಲವು ವಿರೋಧಿಗಳು ನಮ್ಮ ಕಾರ್ಯಕರ್ತರಿಗೆ ಯಾವ ರೀತಿ ತೊಂದರೆ ಕೊಡುತ್ತಿದ್ದಾರೆ ಅನ್ನೋದನ್ನ ನೋಡುತ್ತಿದ್ದೇವೆ. ಯಾವುದೂ ಕೂಡ ಶಾಶ್ವತವಲ್ಲ, ಯಾವ ಸರ್ಕಾರ ಕೂಡ ಶಾಶ್ವತವಲ್ಲ. ನಾನು, ನನ್ನಿಂದ ಮಾಡಿದ್ದು ಅಂತ ಹೇಳಿದವರು ಒಮ್ಮೆ ಸ್ಮಶಾನಕ್ಕೆ ಹೋಗಿ ಬನ್ನಿ. ಎಂಥೆಂತವರು ಏನೇನ್ ಆಗಿದ್ದಾರೆ ಅನ್ನೋದು ಗೊತ್ತಾಗುತ್ತೆ ಎಂದು ಸೂರಜ್‌ ರೇವಣ್ಣ ಹೇಳಿದ್ದಾರೆ.

ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ರೇವಣ್ಣ ಹುಟ್ಟುಹಬ್ಬ ನಿಮಿತ್ತ ಬುಧವಾರ ರಾತ್ರಿ ಚೆನ್ನರಾಯಪಟ್ಟಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇಲ್ಲಿ ಮಾತನಾಡಿದ ಸೂರಜ್‌ ರೇವಣ್ಣ, ನಾವು ಮಾಡುವ ಒಳ್ಳೆಯ ಕೆಲಸ ಮಾತ್ರ ಈ ಭೂಮಿ ಮೇಲೆ ಉಳಿಯುತ್ತದೆ. ಈ ದ್ವೇಷದ ರಾಜಕಾರಣ ಉಳಿಯಲ್ಲ. ನಿಮಗೆ 135 ಸೀಟ್ ಕೊಟ್ಟಿರೋದು ಕೆಲಸ ಮಾಡಲಿ, ಜನಕ್ಕೆ ಒಳ್ಳೆಯದು ಮಾಡಲಿ ಅಂತ. ಅದನ್ನು ಬಿಟ್ಟು ದಿನ ಬೆಳಿಗ್ಗೆಯಾದರೆ ರೇವಣ್ಣ ಅವರನ್ನು ಹೇಗೆ ತುಳಿಯೋದು, ದೇವೇಗೌಡರ ಕುಟುಂಬನ ಹೇಗೆ ಮುಗಿಸೋದು ಬರೀ ಇದನ್ನೆ ಮಾಡುತ್ತಿದ್ದೀರಿ. ಸರ್ಕಾರ ಬಂದು ಎಷ್ಟು ತಿಂಗಳು ಆಯ್ತು, ಯಾವ ರೈತರಿಗೆ ಒಳ್ಳೆಯದಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯ ಸರ್ಕಾರ ಗ್ಯಾರಂಟಿಗಳಿಗೆ ಹಣ ಹೊಂದಸಲಾಗದೇ ರೇಷನ್ ಕಾರ್ಡ್ ಬದಲಾವಣೆ; ಸೂರಜ್ ರೇವಣ್ಣ!

Tap to resize

Latest Videos

ಕುತಂತ್ರಿಗಳ, ವಿರೋಧಿಗಳ, ದ್ವೇಷದ ರಾಜಕಾರಣದ ಕತ್ತಲು ಇವತ್ತು ಆವರಿಸಿಕೊಂಡಿದೆ. ಮತ್ತೆ ನಿಮ್ಮ ಸೂರಜ್‌ ರೇವಣ್ಣನ ಮೂಲಕ ಸೂರ್ಯ ಹುಟ್ಟೇ ಹುಟ್ಟುತ್ತಾನೆ. ಇವತ್ತು ಮೂಡಲಹಿಪ್ಪೆಯಿಂದ ಬೆಂಕಿ ಶುರುವಾಗಿದೆ. ಈ ದ್ವೇಷದ ರಾಜಕಾರಣ ಮಾಡುತ್ತಿರುವ ಸರ್ಕಾರ, ಕಾಂಗ್ರೆಸ್ ಸರ್ಕಾರ ಇದೆ ಅಂತ ಕುಣಿಯುತ್ತಿದ್ದಾರೆ ಅದನ್ನು ಸುಡುವಂತಹ ಪರಿಸ್ಥಿತಿ, ಕಣ್ಣೀರಿಡುವ ಪರಿಸ್ಥಿತಿ ಬಂದೇ ಬರುತ್ತೆ ಎಂದು ಭವಿಷ್ಯ ನುಡಿಸಿದ್ದಾರೆ.

ಅಸಹಜ ಲೈಂಗಿಕ ದೌರ್ಜನ್ಯ ಕೇಸ್: ಜಾಮೀನು ಪಡೆದು ಜೈಲಿನಿಂದ ಹೊರಬಂದ ಸೂರಜ್ ರೇವಣ್ಣ

click me!