ಸಿಎಂ ಕುರ್ಚಿಗಾಗಿ ತಾವು ತಾವೇ ಬಡಿದಾಡಿಕೊಳ್ಳುತ್ತಿದ್ದಾರೆ: ಕಾಂಗ್ರೆಸ್ ವಿರುದ್ಧ ನಿಖಿಲ್‌ ಕಿಡಿ

Ravi Janekal   | Kannada Prabha
Published : Nov 05, 2025, 12:53 PM IST
Nikhil Kumaraswamy on Karnataka government

ಸಾರಾಂಶ

Nikhil Kumaraswamy criticism on Karnataka government :ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ರಾಜ್ಯ ಕಾಂಗ್ರೆಸ್ ಸರ್ಕಾರವು ಮುಖ್ಯಮಂತ್ರಿ ಕುರ್ಚಿಗಾಗಿ ಆಂತರಿಕವಾಗಿ ಕಿತ್ತಾಡುತ್ತಾ ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಗುಬ್ಬಿಯಲ್ಲಿ ಆರೋಪಿಸಿದರು.

ಗುಬ್ಬಿ (ನ.5): ರಾಜ್ಯ ಸರ್ಕಾರದಲ್ಲಿ ಸಿಎಂ ಕುರ್ಚಿಗಾಗಿ ಬಡಿದಾಡಿಕೊಳ್ಳುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಯಾರೂ ಕೂಡ ಗಮನಹರಿಸುತ್ತಿಲ್ಲ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ ಆಗಬೇಕು ಎಂದು ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಗುಬ್ಬಿ ತಾಲೂಕಿನ ಬೆಲವತ್ತ ಗ್ರಾಮದ ಶ್ರೀ ವೀರಭದ್ರೇಶ್ವರ ಸ್ವಾಮಿಯ ನೂತನ ವಿಮಾನ ಗೋಪುರ ಕಳಸ ಸ್ಥಾಪನೆ ಮಹೋತ್ಸವದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ರಾಜ್ಯ ಸರ್ಕಾರದಲ್ಲಿ ಹಣವಿಲ್ಲದೆ ಒಂದೇ ಒಂದು ಅಭಿವೃದ್ಧಿಯನ್ನು ಕೂಡ ಈ ಸರ್ಕಾರ ಮಾಡಿಲ್ಲ. ಕ್ಷೇತ್ರದ ಶಾಸಕರು ಅನುದಾನಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯತ್ ಚುನಾವಣೆ ಬಗ್ಗೆಯೂ ಕೂಡ ಗಮನ ಹರಿಸಲಿಲ್ಲ ಎಂದರು.

ಗುಬ್ಬಿ ಜೆಡಿಎಸ್ ಭದ್ರಕೋಟೆ

ಗುಬ್ಬಿ ಜೆಡಿಎಸ್ ಭದ್ರಕೋಟೆ ಎಂಬುದನ್ನು ಈಗಾಗಲೇ ಕಾರ್ಯಕರ್ತರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ತೋರಿಸಿಕೊಟ್ಟಿದ್ದಾರೆ. ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಬಿ.ಎಸ್. ನಾಗರಾಜ್ ಅವರು ಮುಂಚೂಣಿಯಾಗಿ ಕೆಲಸ ಮಾಡುತ್ತಿದ್ದಾರೆ.

ಜೆಡಿಎಸ್ ಬಲಿಷ್ಠ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿ.ಎಸ್. ನಾಗರಾಜ್ ಅವರಿಗೆ 43,000 ಮತಗಳನ್ನು ಹಾಕಿ ಜೆಡಿಎಸ್ ಬಲಿಷ್ಠವಾಗಿದೆ ಎಂದು ತೋರಿಸಿಕೊಟ್ಟಿದ್ದಾರೆ. ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿ ಯಾರನ್ನು ನಂಬಿಕೊಂಡು ಕೆಲಸ ಮಾಡುತ್ತಿಲ್ಲ ನಮ್ಮ ಕಾರ್ಯಕರ್ತರು ಶಕ್ತಿಯಾಗಿ ಗುಬ್ಬಿಯಲ್ಲಿದ್ದಾರೆ. ಮಾತಾಡುವಾಗ ಮಾತ್ನಲ್ಲಿ ನಿಗಾ ಇರಬೇಕು ನಾನು ಈಗ ಮಾತನಾಡುವುದಿಲ್ಲ ಮುಂದಿನ ದಿನಗಳಲ್ಲಿ ಎಲ್ಲಾ ಕಾರ್ಯಕರ್ತರಿಗೆ ಗೊತ್ತಾಗಿಯೇ ಆಗುತ್ತದೆ ಎಂದು ಪರೋಕ್ಷವಾಗಿ ಹೆಸರು ಹೇಳದೆ ಶಾಸಕ ಶ್ರೀನಿವಾಸ್ ವಿರುದ್ಧ ಗುಡುಗಿದರು. ಇದೇ ಸಂದರ್ಭದಲ್ಲಿ ಶಾಸಕ ಎಂ ಟಿ ಕೃಷ್ಣಪ್ಪ ಮುಖಂಡರಾದ ಬಿಎಸ್ ನಾಗರಾಜು ಕಳ್ಳಿಪಾಳ್ಯ ಲೋಕೇಶ್ ಯೋಗಾನಂದ ಕುಮಾರ್, ರಘು, ಗ್ರಾಮ ಪಂಚಾಯತಿ ಅಧ್ಯಕ್ಷ ಲತಾ ದಯಾನಂದ್ ಇತರರಿದ್ದರು.v

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
ರಾಯಚೂರು: ರಸ್ತೆಯಲ್ಲಿ ಹೋಗುತ್ತಿದ್ದ ಹಾವು ಹಿಡಿದು ಬೈಕ್ ಸವಾರ ಹುಚ್ಚಾಟ, ವಿಡಿಯೋ ವೈರಲ್