15ರ ಬಳಿಕ ದಳಪತಿಗಳ ರಾಜ್ಯ ಪ್ರವಾಸ, ಮತ್ತೆ ಪುಟಿದೇಳಲು ತಯಾರಿ!

By Kannadaprabha NewsFirst Published Aug 8, 2023, 1:46 PM IST
Highlights

ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಪಕ್ಷದ ಸಂಘಟನೆಗಾಗಿ ಜೆಡಿಎಸ್‌ ಮುಖಂಡರು ಇದೇ ತಿಂಗಳು 15ರ ನಂತರ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.

ಬೆಂಗಳೂರು (ಆ.8) ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಪಕ್ಷದ ಸಂಘಟನೆಗಾಗಿ ಜೆಡಿಎಸ್‌ ಮುಖಂಡರು ಇದೇ ತಿಂಗಳು 15ರ ನಂತರ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ.

ಅಲ್ಲದೆ, ಪಕ್ಷದ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳುವ ಸಂಬಂಧ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಅವರ ನೇತೃತ್ವದಲ್ಲಿ 20 ಸದಸ್ಯರನ್ನೊಳಗೊಂಡ ನೂತನ ಕೋರ್‌ ಕಮಿಟಿ ಅಸ್ತಿತ್ವಕ್ಕೆ ಬರಲಿದೆ. ಜತೆಗೆ ಈ ಸಮಿತಿಗೆ ಮಾಜಿ ಶಾಸಕ ವೈ.ಎಸ್‌.ವಿ.ದತ್ತ ಅವರನ್ನು ಸಂಚಾಲಕರನ್ನಾಗಿ ನಿಯೋಜಿಸಲಾಗುತ್ತದೆ.

Latest Videos

ಸೋಮವಾರ ಪಕ್ಷದ ವರಿಷ್ಠ ಎಚ್‌.ಡಿ.ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆದ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಈ ಸಂಬಂಧ ನಿರ್ಣಯ ಕೈಗೊಳ್ಳಲಾಯಿತು.

ಆಗಾಗ ಸದ್ದು ಮಾಡೋದೇಕೆ ನೈಸ್ ವಿವಾದ ?: ಮೋದಿ ತನಕ ಹೋಗುತ್ತಾ NICE ಗಲಾಟೆ..?

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಆಗಿರುವ ಹಿನ್ನಡೆಯ ಬಗ್ಗೆ ಎದೆಗುಂದದೆ ಪಕ್ಷದ ಸಂಘಟನೆ ಕಡೆ ಹೆಚ್ಚು ಗಮನ ನೀಡಬೇಕು ಎಂಬುದಾಗಿ ರಾಷ್ಟ್ರೀಯ ಅಧ್ಯಕ್ಷರು ತಾಕೀತು ಮಾಡಿದ್ದಾರೆ. ಅವರ ಆದೇಶದಂತೆ ಪಕ್ಷ ಸಂಘಟನೆಗೆ ಬಹಳಷ್ಟುಒತ್ತು ಕೊಟ್ಟು ಕೆಲಸ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಪಕ್ಷದ ಸಂಘಟನೆ ಮತ್ತು ಲೋಕಸಭೆ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ನಿಟ್ಟಿನಲ್ಲಿ ಆ.15ರ ನಂತರ ರಾಜ್ಯಾದ್ಯಂತ ಪಕ್ಷದ ಪ್ರಮುಖ ಮುಖಂಡರು ಪ್ರವಾಸ ಮಾಡಲಿದ್ದಾರೆ. ನಾನೂ ಸೇರಿ ಪಕ್ಷದ ಬಹುತೇಕ ಹಿರಿಯ ನಾಯಕರು ಪ್ರವಾಸ ಕೈಗೊಳ್ಳುವರು. ನಮ್ಮ ಹೋರಾಟ ಸಂಘಟಿತವಾಗಿರಬೇಕು ಮತ್ತು ವಿಷಯಾಧಾರಿತ ಆಗಿರಬೇಕು. ಜನಪರವಾಗಿ ಇರಬೇಕು ಎಂದು ರಾಷ್ಟ್ರೀಯ ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ. ಅವರ ಸೂಚನೆಯ ಮೇರೆಗೆ ನಾವು ಹೋರಾಟ ಮಾಡುತ್ತೇವೆ ಎಂದರು.

ಬಿಜೆಪಿ ಜತೆ ಹೋಗುವ ದಾರಿದ್ರ್ಯ ನಮಗೆ ಬಂದಿಲ್ಲ: ಕುಮಾರಸ್ವಾಮಿ ಸಡ್ಡು

ಸಭೆಯಲ್ಲಿ ಹಿರಿಯ ಮುಖಂಡರಾದ ಬಂಡೆಪ್ಪ ಕಾಶೆಂಪೂರ, ಎಚ್‌.ಕೆ.ಕುಮಾರಸ್ವಾಮಿ, ಅಲ್ಕೋಡ್‌ ಹನುಮಂತಪ್ಪ, ಸುರೇಶ್‌ಗೌಡ, ಅನ್ನದಾನಿ, ನಿಸರ್ಗ ನಾರಾಯಣಸ್ವಾಮಿ, ಕೆæ.ಎನ್‌.ತಿಪ್ಪೇಸ್ವಾಮಿ ಇತರರು ಉಪಸ್ಥಿತರಿದ್ದರು.

click me!