
ವಿಧಾನಸಭೆ (ಸೆ.16): ಮೈಸೂರಿನ ಹಿಂದಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸದನದಲ್ಲಿ ಹಕ್ಕುಚ್ಯುತಿ ಪ್ರಸ್ತಾವನೆ ಮಂಡಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್‌ನ ಸದಸ್ಯರು ಸದನದಲ್ಲಿ ಕೆಲಕಾಲ ಧರಣಿ ನಡೆಸಿದರು.
ಅಲ್ಲದೇ, ಶಾಸಕ ಸಾ.ರಾ.ಮಹೇಶ್ ಹಕ್ಕುಚ್ಯುತಿ ಪ್ರಸ್ತಾವನೆಗೆ ಅವಕಾಶ ನೀಡದಿದ್ದರೆ ರಾಜೀನಾಮೆ ನೀಡುವುದಾಗಿ ಬೆದರಿಕೆ ಹಾಕಿದರು. ಬುಧವಾರ ಶೂನ್ಯವೇಳೆ ಬಳಿಕ ವಿಷಯ ಪ್ರಸ್ತಾಪಿಸಿದ ಸಾ.ರಾ.ಮಹೇಶ್, ಬ್ಯಾಗ್ ಖರೀದಿ ಸೇರಿದಂತೆ ಮೈಸೂರಿನ ಹಿಂದಿನ ಜಿಲ್ಲಾಧಿಕಾರಿಗಳು ದೊಡ್ಡಮಟ್ಟದಲ್ಲಿ ಹಣ ದುರುಪಯೋಗ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡಿದ್ದಾರೆ.
ಕೊಟ್ಯಂತರ ರು. ಹಗರಣ : ಸಿಂಧೂರಿ ವಿರುದ್ಧ ಸಾರಾ ಮತ್ತೊಂದು ಗಂಭೀರ ಆರೋಪ
ಎಲ್ಲವನ್ನೂ ಹೇಳಬೇಕಾಗಿದೆ. ದಾಖಲೆಗಳನ್ನು ತೆಗೆದುಕೊಂಡು ಬಂದಿದ್ದೇವೆ. ಈಗಲೇ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದರು. ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗುರುವಾರ ಅಥವಾ ಶುಕ್ರವಾರ ಚರ್ಚೆಗೆ ಅವಕಾಶ ನೀಡುವುದಾಗಿ ಹೇಳಿದರು.
ಇದಕ್ಕೆ ಒಪ್ಪದ ಮಹೇಶ್ ಬಾವಿಗಿಳಿದು ಧರಣಿ ಆರಂಭಿಸಿದರು. ಅವಕಾಶ ನೀಡುವುದಾಗಿ ಹೇಳಿದ್ದರೂ ಜೆಡಿಎಸ್ ಸದಸ್ಯರು ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ ಎಂದು ಸ್ಪೀಕರ್ ಹೇಳಿದ ಬಳಿಕ ಧರಣಿ ಕೈಬಿಟ್ಟರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ