Feb 10, 2019, 5:06 PM IST
ರಾಮನಗರ(ಫೆ.10): ಅನಿತಾ ಕುಮಾರಸ್ವಾಮಿಗೆ ಜೆಡಿಎಸ್ ಕಾರ್ಯಕರ್ತನೋರ್ವ ಕ್ಲಾಸ್ ತೆಗೆದುಕೊಂಡ ಘಟನೆ ರಾಮನಗರದಲ್ಲಿ ನಡೆದಿದೆ. ಇಂದು ಕ್ಷೇತ್ರಕ್ಕೆ ಭೇಟಿ ನೀಡಿದ್ದ ಅನಿತಾ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಕಾರ್ಯಕರ್ತ, ನಿಮ್ಮ ಮಾವ(ಹೆಚ್.ಡಿ.ದೇವೇಗೌಡ) ಅವರಿಗಾಗಿ ಹಗಲು ರಾತ್ರಿ ಪ್ರಚಾರ ಮಾಡಿದ್ದೇವೆ. ಆ ಋಣಕ್ಕಾದರೂ ನಮ್ಮ ಕೆಲಸ ಮಾಡಿಕೊಡುವಂತೆ ಏರು ಧ್ವನಿಯಲ್ಲಿ ಮನವಿ ಮಾಡಿದರು. ಇದಕ್ಕೆ ಸಮಾಧಾನದಿಂದಲೇ ಉತ್ತರಿಸಿದ ಶಾಸಕಿ ಅನಿತಾ ಕುಮಾರಸ್ವಾಮಿ, ದೇವೇಗೌಡರನ್ನು ಭೇಟಿ ಮಾಡಲು ಅಪಾಯಿಂಟ್ಮೆಂಟ್ ಕೊಡಿಸುವುದಾಗಿ ಭರವಸೆ ನೀಡಿದರು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...