ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಸಾಹಿತಿ ಚಂದ್ರಶೇಖರ್ ಕಂಬಾರ್ ಪತ್ನಿ ಸತ್ಯಭಾಮ ಇನ್ನಿಲ್ಲ

By Suvarna News  |  First Published Jan 18, 2022, 9:53 AM IST

* ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಸಾಹಿತಿ ಚಂದ್ರಶೇಖರ್ ಕಂಬಾರ್ ಪತ್ನಿ ಸತ್ಯಭಾಮ( 76 )

* ಇಂದು ಬೆಳಿಗ್ಗೆ 6-15 ಕ್ಕೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು

* ಜನವರಿ 3 ರಂದು ಆಸ್ಪತ್ರೆ ಗೆ ದಾಖಲಾಗಿದ್ದರು


ಬೆಂಗಲೂರು(ಜ.18): ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಸಾಹಿತಿ ಚಂದ್ರಶೇಖರ್ ಕಂಬಾರ್ ಪತ್ನಿ ಸತ್ಯಭಾಮ( 76 ) ಇಂದು ಬೆಳಿಗ್ಗೆ 6-15 ಕ್ಕೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯಭಾಮ ಕಳೆದ ಜನವರಿ 3 ರಂದು ಆಸ್ಪತ್ರೆ ಗೆ ದಾಖಲಾಗಿದ್ದರು. ಆದರೀಗ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಬೆಳಿಗ್ಗೆ 9-30 ಕ್ಕೆ ಕತ್ರಿಗುಪ್ಪೆಯ ಸಿರಿ ಸಂಪಿಗೆ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸತ್ಯಭಾಮ ಚಂದ್ರಶೇಖರ್ ಕಂಬಾರ ನಿಧನಕ್ಕೆ ಸಿಎಂ ಸಂತಾಪ
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ್ ಕಂಬಾರ ಅವರ ಧರ್ಮಪತ್ನಿ ಶ್ರೀಮತಿ ಸತ್ಯಭಾಮ ಚಂದ್ರಶೇಖರ್ ಕಂಬಾರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸತ್ಯಭಾಮ ಅವರು ಚಂದ್ರಶೇಖರ ಕಂಬಾರ ಅವರ ಪ್ರೇರಣಾ ಶಕ್ತಿಯಾಗಿದ್ದರು. ಅವರಿಗೆ ಅಪಾರವಾದ ಓದಿನ ಹವ್ಯಾಸವಿತ್ತು. ಹೀಗಾಗಿ ಅವರು ಸಾಹಿತ್ಯ ಕ್ಷೇತ್ರದಲ್ಲಿನ ಬೆಳವಣಿಗೆ ಕುರಿತು ಆಸಕ್ತಿ ಹೊಂದಿದ್ದರು. 

ಇವ ಯಾವ ಊರಿನ ಚೆಲುವ?

Tap to resize

Latest Videos

ಸತ್ಯಭಾಮ ಅವರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕಂಬಾರ ಕುಟುಂಬದ ಸದಸ್ಯರಿಗೆ ನೀಡಲಿ ಎಂದು ಕೋರುತ್ತೇನೆ ಎಂದು ಸಿಎಂ ಕಂಬನಿ ಮಿಡಿದಿದ್ದಾರೆ.

ಸತ್ಯಭಾಮಾ ಕಂಬಾರ ನಿಧನಕ್ಕೆ ಸಚಿವರ ಸಂತಾಪ
ಕವಿ ಮತ್ತು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಚಂದ್ರಶೇಖರ ಕಂಬಾರರ ಪತ್ನಿ ಸತ್ಯಭಾಮಾ ಅವರ ನಿಧನಕ್ಕೆ ಉನ್ನತ ಶಿಕ್ಷಣ ಸಚಿವ (Higher Education Minister) ಡಾ.ಸಿ.ಎನ್. ಅಶ್ವತ್ಥ ನಾರಾಯಣ ಸಂತಾಪ ವ್ಯಕ್ತಪಡಿಸಿದ್ದಾರೆ. ಸತ್ಯಭಾಮಾ ಅವರು ಕಂಬಾರರ ಸಾಹಿತ್ಯ ವ್ಯವಸಾಯಕ್ಕೆ ನಿರಂತರ ಸಹಕಾರಿಯಾಗಿದ್ದರು. ಅವರ ಅಗಲುವಿಕೆಯಿಂದ ಒಬ್ಬ ಬರಹಗಾರನಿಗಿದ್ದ ಪೋಷಣೆ ಮತ್ತು ಬೆಂಬಲದ ನೆಲೆ ಇಲ್ಲದಂತಾಗಿದೆ ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ಹೇಳಿದ್ದಾರೆ.

ಸತ್ಯಭಾಮಾ ಅವರ ಆತ್ಮಕ್ಕೆ ಪರಮಾತ್ಮನು ಶಾಂತಿಯನ್ನು ನೀಡಿ, ಅವರ ನಿಧನದಿಂದ ಉಂಟಾಗಿರುವ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಕುಟುಂಬದ ಸದಸ್ಯರಿಗೆ ಕರುಣಿಸಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.

ಎಚ್ಟಿಕೆ ಸಂತಾಪ
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿಗಳಾದ ಡಾ. ಚಂದ್ರಶೇಖರ ಕಂಬಾರ ಅವರ ಧರ್ಮಪತ್ನಿ ಶ್ರೀಮತಿ ಸತ್ಯಭಾಮ ಚಂದ್ರಶೇಖರ ಕಂಬಾರ ಅವರ ನಿಧನ ತೀವ್ರ ದುಃಖ ಉಂಟು ಮಾಡಿದೆ. ಸತ್ಯಭಾಮ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕಂಬಾರರು, ಮತ್ತವರ ಕುಟುಂಬದ ಸದಸ್ಯರಿಗೆ ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. 

ಸಾಹಿತ್ಯ ಅಕಾಡೆಮಿಗೂ ಜ್ಞಾನಪೀಠಕ್ಕೂ ಸಂಬಂಧವಿಲ್ಲ
ಕಂಬನಿ ಮಿಡಿದ ರೇಣುಕಾಚಾರ್ಯ:
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ್ ಕಂಬಾರ ಅವರ ಧರ್ಮಪತ್ನಿ ಶ್ರೀಮತಿ ಸತ್ಯಭಾಮ ಚಂದ್ರಶೇಖರ್ ಕಂಬಾರ್ ಅವರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ. ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಓಂ ಶಾಂತಿ..

ಕಂಬಾರರ ಧರ್ಮಪತ್ನಿ ನಿಧಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ. ಚಂದ್ರಶೇಖರ್ ಕಂಬಾರ ಅವರ ಪ್ರೇರಣಾ ಶಕ್ತಿ ಆಗಿದ್ದ ಅವರ ಧರ್ಮಪತ್ನಿ ಶ್ರೀಮತಿ ಸತ್ಯಭಾಮ ಚಂದ್ರಶೇಖರ್ ಕಂಬಾರ್ ಅವರ ನಿಧನ ತೀವ್ರ ದುಃಖ ತಂದಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ, ಎಂದು ಹೇಳಿದ್ದಾರೆ. 

 

click me!