ಯುವಕರಿಗೆ ಉದ್ಯೋಗ ಗ್ಯಾರಂಟಿ, ಸಿಎಂ ಸಿದ್ದರಾಮಯ್ಯರಿಂದ ಸಿಹಿ ಸುದ್ದಿ

Kannadaprabha News   | Kannada Prabha
Published : Feb 26, 2026, 06:55 AM IST
Siddaramaiah

ಸಾರಾಂಶ

ಯುವಕರಿಗೆ ಉದ್ಯೋಗ ನೀಡುವುದು ಸರ್ಕಾರದ ಭರವಸೆ. ಇದೀಗ ಸರ್ಕಾರದಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಮುಂಬರುವ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕಾರ್ಕಳ: ಯುವಕರಿಗೆ ಉದ್ಯೋಗ ನೀಡುವುದು ಸರ್ಕಾರದ ಭರವಸೆ. ಇದೀಗ ಸರ್ಕಾರದಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಮುಂಬರುವ ಬಜೆಟ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಯುವಕರಿಗೆ ಉದ್ಯೋಗ ನೀಡುವುದು ಸರ್ಕಾರದ ಭರವಸೆ

ನಗರದಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ರಾಜ್ಯ ಸರ್ಕಾರದಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿ, ಯುವಕರಿಗೆ ಉದ್ಯೋಗ ನೀಡುವುದು ಸರ್ಕಾರದ ಭರವಸೆ. ಒಳ ಮೀಸಲಾತಿ ಕಾರಣದಿಂದ ಪ್ರಕ್ರಿಯೆ ವಿಳಂಬವಾಗಿತ್ತು. ಇದೀಗ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಮುಂಬರುವ ಬಜೆಟ್‌ನಲ್ಲಿ ಈ ಕುರಿತ ಘೋಷಣೆ ಮಾಡಲಾಗುವುದು. ರಾಜ್ಯದಲ್ಲಿ ಸುಮಾರು ಎರಡೂವರೆ ಲಕ್ಷ ಖಾಲಿ ಹುದ್ದೆಗಳಿದ್ದು, ಹಂತ-ಹಂತವಾಗಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಯುವಕರಿಗೆ ನಾವು ಉದ್ಯೋಗ ಕೊಟ್ಟೇ ಕೊಡ್ತೀವಿ ಎಂದು ಭರವಸೆ ನೀಡಿದರು.

ಬಿಜೆಪಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ

ಇದೇ ವೇಳೆ, ಬಿಜೆಪಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ, ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳು ಬಿಜೆಪಿ ಬಿಟ್ಟು ಪ್ರತಿಭಟನೆ ಮಾಡಿದ್ದು ಯಾಕೆ?. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನೇಮಕಾತಿ ನಡೆಯದ ಕಾರಣ ನಾವು ಅಧಿಕಾರಕ್ಕೆ ಬರುವಾಗಲೇ 2.64 ಲಕ್ಷ ಉದ್ಯೋಗಗಳು ಖಾಲಿಯಿದ್ದವು. ಕಳೆದ ಎರಡೂವರೆ ವರ್ಷಗಳಲ್ಲಿ ವಿವಿಧ ಇಲಾಖೆಗಳಲ್ಲಿ 40,000ಕ್ಕೂ ಹೆಚ್ಚು ನೇಮಕಾತಿಗಳನ್ನು ನಡೆಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಎಂದಿದ್ರು. ಕಳೆದ 10 ವರ್ಷಗಳ ಅವಧಿಯಲ್ಲಿ ಅವರು ಎಷ್ಟು ಉದ್ಯೋಗವನ್ನು ಸೃಷ್ಟಿ ಮಾಡಿದರು? ಎಂದು ಪ್ರಶ್ನಿಸಿದರು.

- ಖಾಲಿ ಹುದ್ದೆಗಳ ಭರ್ತಿಗಾಗಿ ಮಂಗಳವಾರ ಧಾರವಾಡದಲ್ಲಿ ಉದ್ಯೋಗ ಆಕಾಂಕ್ಷಿಗಳ ಬೃಹತ್‌ ಪ್ರತಿಭಟನೆ

- ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 2.6 ಲಕ್ಷ ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹ

- ನೇಮಕಾತಿಗೆ ಅಧಿಸೂಚನೆ ಹೊರಡಿಸುವವರೆಗೂ ಅನಿರ್ದಿಷ್ಟಾವಧಿ ಹೋರಾಟದ ಪಟ್ಟು ಹಿಡಿದಿದ್ದ ಆಕಾಂಕ್ಷಿಗಳು

- ಜಿಲ್ಲಾಡಳಿತ ಮನವಿಗೆ ಮೇರೆಗೆ ತಾತ್ಕಾಲಿಕವಾಗಿ ಪ್ರತಿಭಟನೆ ಕೈಬಿಟ್ಟಿದ್ದ ಸಾವಿರಾರು ಪ್ರತಿಭಟನಾಕಾರರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಒಂದೇ ವರ್ಷದಲ್ಲಿ ಚಿನ್ನದ ಚೋರಿ ರನ್ಯಾಳಿಂದ 1.27 ಕ್ವಿಂಟಲ್ ಚಿನ್ನ ಸ್ಮಗ್ಲಿಂಗ್!
ಹುದ್ದೆಗಳ ಭರ್ತಿಗೆ ಯೋಜನೆ ರೆಡಿ ಇದೆ, ಧೈರ್‍ಯವಾಗಿರಿ: ಡಿಕೆ