ಇ-ಖಾತಾ ಸಮಸ್ಯೆ ನಿವಾರಣೆಗೆ ಜಂಟಿ ಕಾರ್ಯಪಡೆ

By Kannadaprabha News  |  First Published Nov 14, 2024, 8:49 AM IST

 ಖಾತಾ ವಿತರಿಸುವ ಸಂಬಂಧ ತಕ್ಷಣದ ಪರಿಹಾರೋಪಾಯಗಳನ್ನು ಸೂಚಿಸುವುದು ಸೇರಿದಂತೆ ಇತರೆ ಅಂಶಗಳುಳ್ಳ 3 ಇಲಾಖೆಗಳ ಸಚಿವರ ಉನ್ನತ ಮಟ್ಟದ ಸಭೆ ವರದಿಯನ್ನು ಎರಡು ತಿಂಗಳೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ. 


ಬೆಂಗಳೂರು(ನ.14):  ರಾಜ್ಯದಲ್ಲಿ ಇ-ಸ್ವತ್ತು, ಇ-ಆಸ್ತಿ ಮತ್ತು ಇ-ವಿನ್ಯಾಸಗಳನ್ನು ಸುಗಮವಾಗಿ ಸಾರ್ವಜನಿಕರಿಗೆ ವಿತರಿಸಲು ಅನುಕೂಲವಾಗುವ ನಿಟ್ಟಿನಲ್ಲಿ ಕೈಗೊಳ್ಳ ಬಹುದಾದ ಕ್ರಮಗಳ ಬಗ್ಗೆ ಸೂಚಿಸಲು ರಚನೆಯಾಗಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯ ಉನ್ನತ ಮಟ್ಟದ ಜಂಟಿ ಕಾರ್ಯಪಡೆಗೆ ಎರಡು ತಿಂಗಳಲ್ಲಿ ವರದಿ ನೀಡುವಂತೆ ಸರ್ಕಾರ ನಿರ್ದೇಶನ ನೀಡಿದೆ. 

ಸ್ಥಿರಾಸ್ತಿಗಳ ನೋಂದಣಿಗಾಗಿ ಗ್ರಾಮಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತೆಗಳನ್ನು ವಿತರಿಸುವ ಸಂಬಂಧ ಕಂದಾಯ ಸಚಿವ ಕೃಷ್ಣಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ನೇತೃತ್ವದಲ್ಲಿ ಬುಧವಾರ ವಿಕಾಸಸೌಧದಲ್ಲಿ ಸಭೆ ನಡೆಸಲಾಯಿತು. 

Tap to resize

Latest Videos

undefined

ರಾಜ್ಯಾದ್ಯಂತ ಆಸ್ತಿ ಸೇರಿದಂತೆ ಎಲ್ಲ ನೋಂದಣಿ ಹಠಾತ್ ಸ್ಥಗಿತ!

ಈ ವೇಳೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಮೂರು ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಉನ್ನತ ಮಟ್ಟದ ಜಂಟಿ ಕಾರ್ಯಪಡೆ ರಚನೆಗೆ ನಿರ್ಧರಿಸಲಾಯಿತು. ಗ್ರಾಮೀಣಾಭಿವೃದ್ಧಿ ಪಂಚಾಯತ್‌ರಾಜ್ ಮತ್ತು ಇಲಾಖೆ, ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ, ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆಗಳ ನಡುವೆ ಸಮನ್ವಯದಿಂದ ಇ-ಸ್ವತ್ತು, ಇ-ಆಸ್ತಿ ಮತ್ತು ಇ-ವಿನ್ಯಾಸಗಳನ್ನು ಸುಗಮವಾಗಿ ವಿತರಣೆ ಮಾಡಲು ಅನುಕೂಲವಾಗುವಂತೆ ವರದಿ ನೀಡಲು ಸೂಚನೆ ನೀಡಲಾಗಿದೆ.

ಖಾತಾ ವಿತರಿಸುವ ಸಂಬಂಧ ತಕ್ಷಣದ ಪರಿಹಾರೋಪಾಯಗಳನ್ನು ಸೂಚಿಸುವುದು ಸೇರಿದಂತೆ ಇತರೆ ಅಂಶಗಳುಳ್ಳ 3 ಇಲಾಖೆಗಳ ಸಚಿವರ ಉನ್ನತ ಮಟ್ಟದ ಸಭೆ ವರದಿಯನ್ನು ಎರಡು ತಿಂಗಳೊಳಗೆ ಸಲ್ಲಿಸುವಂತೆ ಸೂಚಿಸಲಾಗಿದೆ. 
ಮಲೆನಾಡು ಪ್ರದೇಶದಲ್ಲಿ ವಿಶೇಷವಾಗಿ ಚಿಕ್ಕ ಮಗಳೂರು, ಹಾಸನ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಖಾತಾ ವಿತರಿಸುವಲ್ಲಿ ಎದುರಾಗಿರುವ ಸಮಸ್ಯೆಗಳಿಗೆ ಪರಿ ಹಾರ ಸೂಚಿಸಬೇಕು. ಅಲ್ಲದೇ, ಖಾತಾ ವಿಚಾರ ಸಂಬಂಧ ಭವಿಷ್ಯದಲ್ಲಿ ಎದುರಾಗುವ ಸಮಸ್ಯೆಗಳೂ ಸೇರಿದಂತೆ ಈಗ ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವ ಬಗ್ಗೆ ಶಿಫಾರಸು ಮಾಡುವಂತೆ ತಿಳಿಸಲಾಯಿತು. 

ಕೃಷಿ ಜಮೀನು ಭೂ ಪರಿವರ್ತನೆ ನಂತರ ನಿವೇಶನ ಬಿಡುಗಡೆಗೊಳಿಸುವ ಮುನ್ನ ಉದ್ಯಾನ ವನ, ಸಿಎ ನಿವೇಶನ ಮತ್ತು ರಸ್ತೆ ಜಮೀನುಗಳ ಇ-ಖಾತೆ ಮಂಜೂರು ಮಾಡುವ ಕುರಿತು ಸಭೆ ಯಲ್ಲಿ ವಿಸ್ತ್ರತವಾಗಿ ಚರ್ಚಿಸಲಾಯಿತು. ಮಹಾ ನಗರ ಪಾಲಿಕೆಗಳಲ್ಲಿ ನೀಡುತ್ತಿರುವ ಟಿಡಿಆರ್ ಗಳನ್ನು ಪುನರ್‌ ಉಪಯೋಗಿಸದಂತೆ ತಡೆಯಲು ಮತ್ತು ಟಿಡಿಆರ್‌ಗಳಿಗೂ ಸಹ ಇ-ಖಾತೆಯನ್ನು ವಿತರಿಸುವ ಬಗ್ಗೆ ಚರ್ಚಿಸಲಾಗಿದ್ದು, ಇವುಗಳ ಸಾಧಕ-ಬಾಧಕ ಕುರಿತು ವರದಿ ನೀಡುವಂತೆಯೂ ತಿಳಿಸಲಾಯಿತು.

click me!