ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆಗೈದ ಘಟನೆಯೂ ಒಂದಾಗಿದೆ. ಗೌರಿ ಲಂಕೇಶ್ ಹತ್ಯೆಗೈದು ಜೈಲು ಸೇರಿದ್ದ ಆರೋಪಿಗಳಿಗೆ ಆರು ವರ್ಷಗಳ ಬಳಿಕ ಜಾಮೀನು ಮಂಜೂರು ಮಾಡಲಾಗಿದೆ.
ಬೆಂಗಳೂರು (ಜು.16): ರಾಜ್ಯದಲ್ಲಿ ನಡೆದ ಭೀಕರ ಘಟನೆಗಳಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಹತ್ಯೆಗೈದ ಘಟನೆಯೂ ಒಂದಾಗಿದೆ. ಗೌರಿ ಲಂಕೇಶ್ ಅವರನ್ನು ಹತ್ಯೆಗೈದು ಜೈಲು ಸೇರಿದ್ದ ಮೂವರು ಆರೋಪಿಗಳಿಗೆ ಆರು ವರ್ಷಗಳ ಬಳಿಕ ಜಾಮೀನು ಮಂಜೂರು ಮಾಡಲಾಗಿದೆ.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಜಾಮೀನು ಅರ್ಜಿಯನ್ನು ಸೋಮವಾರ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠದಿಂದ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಲಾಗಿದೆ. ಆರೋಪಿಗಳ ಪರ ಹಿರಿಯ ವಕೀಲ ಅರುಣ್ ಶ್ಯಾಂ ವಾದ ಮಂಡಿಸಿದ್ದು, ಮೂವರು ಆರೋಪಿಗಳು ಜಾಮೀನು ಪಡೆದಿದ್ದಾರೆ. ಈ ಮೂಲಕ ಬರೋಬ್ಬರಿ 6 ವರ್ಷದ ಬಳಿಕ ಜೈಲಿನಿಂದ ಹೊರಬರಲಿದ್ದಾರೆ. ಇನ್ನು ಜಾಮೀನು ಮಂಜೂರು ಮಾಡಿದ ನಂತರ ಕೆಲವು ಷರತ್ತುಗಳನ್ನು ವಿಧಿಸಲಾಗುತ್ತಿದ್ದು, ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ನಂತರ ಆರೋಪಿಗಳು ಇಂದು ಸಂಜೆ ವೇಳೆಗೆ ಜೈಲಿನಿಂದ ಹೊರಬರುವ ಸಾಧ್ಯತೆಯಿದೆ.