ಕೊರೋನಾಗೆ ಹಿರಿಯ ಪತ್ರಕರ್ತ ಸೋಮಶೇಖರ್‌ ಯಡವಟ್ಟಿ ಬಲಿ

By Kannadaprabha NewsFirst Published Aug 17, 2020, 10:40 AM IST
Highlights

ಹಿರಿಯ ಪತ್ರಕರ್ತ ಸೋಮಶೇಖರ್‌ ಯಡವಟ್ಟಿ ನಿಧನ| ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಸೋಮಶೇಖರ್‌ ಯಡವಟ್ಟಿ| ಸೋಮಶೇಖರ್‌ ಯಡವಟ್ಟಿ ನಿಧನಕ್ಕೆ ಗಣ್ಯರ ಸಂತಾಪ| 

ಬೆಂಗಳೂರು(ಆ.17): ಕೊರೋನಾ ಸೋಂಕಿಗೆ ತುತ್ತಾಗಿದ್ದ ಹಿರಿಯ ಪತ್ರಕರ್ತ ಸೋಮಶೇಖರ್‌ ಯಡವಟ್ಟಿ(50) ಅವರು ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಮುಂಜಾನೆ ನಿಧನರಾಗಿದ್ದಾರೆ. ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಧಾರವಾಡ ಮೂಲದವರಾದ ಸೋಮಶೇಖರ್‌ಯಡವಟ್ಟಿ ಅವರು ಈ ಟಿವಿ, ಕರುನಾಡ ಸಂಜೆ, ಉದಯವಾಣಿ, ಸಂಯುಕ್ತ ಕರ್ನಾಟಕ ದಿನ ಪತ್ರಿಕೆಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ಸಂಯುಕ್ತ ಕರ್ನಾಟಕ ಪತ್ರಿಕೆಯ ಮುಖ್ಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಶುಕ್ರವಾರದವರೆಗೂ ಕರ್ತವ್ಯಕ್ಕೆ ಹಾಜರಾಗಿದ್ದ ಅವರು ಕೆಮ್ಮು, ಜ್ವರ, ನೆಗಡಿ ಹಿನ್ನಲೆಯಲ್ಲಿ ರಾತ್ರಿ ಪ್ರಯಾಸಪಟ್ಟುಕೊಂಡೇ ಮನೆಗೆ ಮರಳಿದ್ದರು. ಬಳಿಕ ಆರೋಗ್ಯ ಇನ್ನಷ್ಟು ಬಿಗಡಾಯಿಸಿ ಶನಿವಾರ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಮಧ್ಯಾಹ್ನ 3.30ರ ಸುಮಾರಿಗೆ ಅವರನ್ನು ಎಂ.ಎಸ್‌.ರಾಮಯ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇದೇ ವೇಳೆ ಅವರಿಗೆ ಕೊರೋನಾ ಪರೀಕ್ಷೆ ಕೂಡ ನಡೆಸಲಾಗಿತ್ತು.

ಹಾಸನ: ಮೈಮೇಲೆ ದೇವರು ಬಂದಿದೆ ಎಂದು ಕೋವಿಡ್‌ ರೋಗಿಯ ಮೇಲೆ ಸೆಕ್ಯುರಿಟಿ ಗಾರ್ಡ್‌ ಹಲ್ಲೆ

ಸಿಎಂ, ಗಣ್ಯರ ಸಂತಾಪ: 

ಸೋಮಶೇಖರ್‌ ಯಡವಟ್ಟಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್‌.ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಸೇರಿದಂತೆ ವಿವಿಧ ಗಣ್ಯರು, ಅವರ ಸ್ನೇಹಿತರು, ಸಹೋದ್ಯೋಗಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಆದರೆ, ಭಾನುವಾರ ಮುಂಜಾನೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮರಣಾನಂತರ ಬಂದ ವರದಿಯಲ್ಲಿ ಅವರಿಗೆ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿಯಿಂದಲೇ ನಗರದ ಸುಮ್ಮನಹಳ್ಳಿ ವಿದ್ಯುತ್‌ ಚಿತಾಗಾರದಲ್ಲಿ ಭಾನುವಾರ ಸಂಜೆ ಅವರ ಮೃತದೇಹದ ಅಂತ್ಯಕ್ರಿಯೆ ನೆರವೇರಿಸಲಾಯಿತು.
 

click me!