
ಬೆಂಗಳೂರು(ಮೇ.27): ಕೊರೋನಾ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಪತ್ರಕರ್ತರನ್ನು ಪ್ಯಾಕೇಜ್‌ನಲ್ಲಿ ಸೇರಿಸಿ ತಲಾ 10 ಸಾವಿರ ರು. ನೆರವು ನೀಡಬೇಕು. ಕೊರೋನಾ ಸೋಂಕಿನಿಂದ ಮೃತಪಟ್ಟಪತ್ರಕರ್ತ ಕುಟುಂಬಕ್ಕೆ ತಲಾ 5 ಲಕ್ಷ ರು. ನೆರವು ನೀಡಬೇಕು ಎಂದು ಮನವಿ ಮಾಡಲಾಗಿದೆ.
ಪತ್ರಿಕಾ ವಿತರಕರು ಮತ್ತು ಕೇಬಲ್ ಟಿವಿ ಆಪರೇಟರ್ಸ್‌ಗಳಿಗೆ ಕೋವಿಡ್ ಲಸಿಕೆ ನೀಡಬೇಕು. ಪತ್ರಕರ್ತರ ಕುಟುಂಬ ಸದಸ್ಯರಿಗೂ ಆದ್ಯತೆ ಮೇಲೆ ಲಸಿಕೆ ಕೊಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮನವಿ ಸಲ್ಲಿಸಿದೆ.
ರಾಜ್ಯದಲ್ಲಿ ಮತ್ತೆ ಸೋಂಕು ಏರಿಕೆ, ರೈತರ ನೆರವಿಗೆ ಬರಬೇಕಿದೆ ಸರ್ಕಾರ
ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದ್ದು, ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವ ಭರವಸೆಯನ್ನು ಸಿಎಂ ಯಡಿಯೂರಪ್ಪ ಅವರು ನೀಡಿದ್ದಾರೆ ಎಂದು ಸಂಘದ ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ