
ನವದೆಹಲಿ(ಸೆ.08): ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಹಾಗೂ ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದು ಬಿಜೆಪಿ ಜಯಭೇರಿ ಬಾರಿಸಿರುವುದಕ್ಕೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅತೀವ ಹರ್ಷ ವ್ಯಕ್ತಪಡಿಸಿದ್ದಾರೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ಬಿಜೆಪಿ ನಾಯಕತ್ವಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಮಂಗಳವಾರ ಟ್ವೀಟ್ ಮಾಡಿರುವ ನಡ್ಡಾ ‘ಪ್ರಧಾನಿ ನರೇಂದ್ರ ಮೋದಿ ಅವರ ಜನಸ್ನೇಹಿ ಯೋಜನೆಗಳಿಂದಾಗಿ ನಾವು ಮೊದಲ ಬಾರಿಗೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಯ ಗಳಿಸಿದ್ದೇವೆ. ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಮೂಡಿಬಂದಿರುವುದು ಮತ್ತು ಕಲಬುರಗಿಯಲ್ಲಿ ಅತ್ಯುತ್ತಮವಾದ ಸಾಧನೆ ಮಾಡಿರುವುದು ಹೆಮ್ಮೆಯ ವಿಷಯ. ಇದಕ್ಕಾಗಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಪಕ್ಷದ ಕಾರ್ಯಕರ್ತರಿಗೆ ಧನ್ಯವಾದಗಳು’ ಎಂದು ಹೇಳಿದ್ದಾರೆ.
ಕರ್ನಾಟಕ ಮುಂದಿನ ಚುನಾವಣೆಗೆ ಯಾರ ನಾಯಕತ್ವ? ದಾವಣಗೆರೆಯಲ್ಲಿ ಸೀಕ್ರೆಟ್ ಬಿಚ್ಚಿಟ್ಟ ಅಮಿತ್ ಶಾ!
ಸೋಮವಾರ ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆಯ ಚುನಾವಣಾ ಫಲಿತಾಂಶ ಪ್ರಕಟವಾಗಿತ್ತು. ಈ ಪೈಕಿ ಮೂರರಲ್ಲೂ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ