
ಮಂಗಳೂರು(ಮಾ.01): ದೇಶದಲ್ಲಿ ಪ್ರಸ್ತುತ ಸಾಗಾಟ ವೆಚ್ಚ ಹೆಚ್ಚಿದೆ. ಈ ವೆಚ್ಚ ಕಡಿಮೆ ಮಾಡುವ ಉದ್ದೇಶದಿಂದ ದೇಶದಲ್ಲಿ 22 ಗ್ರೀನ್ ಎಕ್ಸ್‌ಪ್ರೆಸ್ ಹೆದ್ದಾರಿಗಳ(Green Express Highway) ನಿರ್ಮಾಣ ಆಗುತ್ತಿದೆ. ಇದರಲ್ಲಿ ಚೆನ್ನೈ-ಬೆಂಗಳೂರು(Chennai-Bengaluru) ಹೆದ್ದಾರಿಯ ಕಾಮಗಾರಿ ಪ್ರಗತಿಯಲ್ಲಿದ್ದು, ಇದು ಪೂರ್ಣಗೊಂಡ ಬಳಿಕ ಕೇವಲ 2 ಗಂಟೆಯಲ್ಲಿ ಚೆನ್ನೈನಿಂದ ಬೆಂಗಳೂರು ತಲುಪಬಹುದಾಗಿದೆ ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ(Nitin Gadkari) ತಿಳಿಸಿದ್ದಾರೆ.
ನಗರದ ಖಾಸಗಿ ಹೊಟೇಲ್‌ನಲ್ಲಿ ಸೋಮವಾರ ಕೆಸಿಸಿಐ ವತಿಯಿಂದ ಆಯೋಜಿಸಲಾಗಿದ್ದ ಸಭೆಯಲ್ಲಿ ಅವರು ಮಾತನಾಡಿದ ಅವರು, ಅದೇ ರೀತಿ ಇತರ ಹೆದ್ದಾರಿ ಕಾಮಗಾರಿಗಳೂ ಭರದಿಂದ ನಡೆಯುತ್ತಿವೆ ಎಂದು ತಿಳಿಸಿದರು. ಕೇಂದ್ರ ಸರ್ಕಾರ(Central Government) ಇದೀಗ ಬಯೋ ಇಂಧನಕ್ಕೆ(Bio Fuel) ಹೆಚ್ಚು ಒತ್ತು ನೀಡುತ್ತಿದ್ದು, ಇನ್ನು ಎರಡು ವರ್ಷಗಳಲ್ಲಿ ದೇಶದಲ್ಲಿ ಬಯೋಎಥೆನಾಲ್(Bioethanol) ಉತ್ಪಾದಿಸುವ 300ಕ್ಕೂ ಅಧಿಕ ಕೈಗಾರಿಕೆಗಳು ಸ್ಥಾಪನೆಯಾಗಲಿವೆ ಎಂದರು.
Hubballi: ನಿತಿನ್ ಗಡ್ಕರಿಯನ್ನು ಹಾಡಿ ಹೊಗಳಿದ ಮಲ್ಲಿಕಾರ್ಜುನ ಖರ್ಗೆ
ಪೆಟ್ರೋಲ್, ಡೀಸೆಲ್‌ಗೆ ಹೋಲಿಸಿದರೆ ಬಯೋ ಎಥೆನಾಲ್ ಪರಿಸರಕ್ಕೆ(Environment) ಪೂರಕ ಮಾತ್ರವಲ್ಲದೆ, ಅಗ್ಗವೂ ಆಗಿದೆ. ಕೃಷಿ ಉತ್ಪನ್ನಗಳಿಂದ ಈ ಇಂಧನ ತಯಾರಿಸಲು ಸಾಧ್ಯವಿರುವುದರಿಂದ ಕೃಷಿ ಉತ್ಪನ್ನಗಳಿಗೂ ಉತ್ತಮ ಬೇಡಿಕೆ ಬರಲಿದೆ. ಈ ಇಂಧನವನ್ನು ವಿದೇಶಗಳಿಗೂ ರಫ್ತು ಮಾಡಲೂ ವಿಫುಲ ಅವಕಾಶವಿದೆ. ಹಾಗಾಗಿ ಬಯೋ ಎಥೆನಾಲ್ ಉತ್ಪಾದಿಸುವ ಕೈಗಾರಿಕೆಗಳಿಗೆ(Industries) ಉತ್ತೇಜನ ನೀಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
2024ರಲ್ಲಿ ರಾಜ್ಯದಲ್ಲಿ ಅಮೆರಿಕ ಮಾದರಿ ರಸ್ತೆ
ಬೆಂಗಳೂರು: ಭಾರತದ (India) ರಸ್ತೆಗಳ ಗುಣಮಟ್ಟವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವ ಗುರಿ ಹೊಂದಿದ್ದು 2024ರೊಳಗೆ ಕರ್ನಾಟಕದ (Karnataka) ಎಲ್ಲ ರಸ್ತೆಗಳ ಗುಣಮಟ್ಟವನ್ನು ಅಮೆರಿಕ ಮಾದರಿಗೆ ಎತ್ತರಿಸಲಾಗುವುದು ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. ಬೆಳಗಾವಿ, ಹುಬ್ಬಳ್ಳಿ ಮತ್ತು ಮಂಗಳೂರುಗಳಲ್ಲಿ ನಿನ್ನೆ(ಸೋಮವಾರ) ಒಂದೇ ದಿನದಲ್ಲಿ ನಡೆದ ಪ್ರತ್ಯೇಕ ಸಮಾರಂಭಗಳಲ್ಲಿ ಅವರು ಒಟ್ಟಾರೆ ರಾಜ್ಯದ ವಿವಿಧೆಡೆ ನಡೆಯಲಿರುವ .19,930 ಕೋಟಿ ವೆಚ್ಚದ 46 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದರು.
2024ರ ಅಂತ್ಯದೊಳಗೆ ಕರ್ನಾಟಕದ ರಸ್ತೆಗಳನ್ನು ಅಮೆರಿಕದ ರಸ್ತೆಗಳ ಗುಣಮಟ್ಟಕ್ಕೆ ಸಮನಾಗಿ ಅಭಿವೃದ್ಧಿ ಪಡಿಸಲಾಗುವುದು. ಇದಕ್ಕೆ ಪೂರಕವೆಂಬಂತೆ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ ಅವರು, ಅರಣ್ಯ ಹಾಗೂ ಪರಿಸರ ಇಲಾಖೆಗಳ ಕ್ಲಿಯರೆನ್ಸ್ ಪಡೆಯುವ ಕಾರ್ಯಕ್ಕೆ ರಾಜ್ಯ ಸರ್ಕಾರ ಆದ್ಯತೆ ನೀಡಬೇಕು ಎಂದು ನುಡಿದರು.
ಕೇಂದ್ರ ಸಚಿವ ನಿತಿನ್ ಗಡ್ಕರಿಗೇ ಕ್ರೆಡಿಟ್ ಕಾರ್ಡ್ ನೀಡಲು ನಿರಾಕರಿಸಿದ್ದ ICICI Bank
ದೇಶದ ಅಭಿವೃದ್ಧಿಯೂ ರಸ್ತೆ ಸಂಪರ್ಕ ಜಾಲವನ್ನು ಅವಲಂಬಿಸಿದೆ. ಪ್ರತಿ ಕ್ಷೇತ್ರದ ಬೆಳವಣಿಗೆಯೂ ಆಯಾ ಮೂಲಸೌಲಭ್ಯದ ಆಧಾರದ ಮೇಲೆ ಇರುತ್ತದೆ. ರಸ್ತೆ ಸಂಪರ್ಕ ಉತ್ತಮವಾಗಿದ್ದರೆ, ಬಂಡವಾಳ ಹೂಡಿಕೆಯೂ ಹರಿದು ಬರುತ್ತದೆ. ಇದರಿಂದ ನಿರುದ್ಯೋಗ ಸಮಸ್ಯೆ ನಿವಾರಣೆಯಾಗುತ್ತದೆ. ಈ ರೀತಿ ಪ್ರತಿ ಕ್ಷೇತ್ರದ ಅಭಿವೃದ್ಧಿಯೂ ರಸ್ತೆ ಸೇರಿದಂತೆ ಮೂಲಸೌಲಭ್ಯದ ಮೇಲೆ ಅವಲಂಬನೆಯಾಗಿರುತ್ತದೆ ಎಂದು ತಿಳಿಸಿದರು.
ಕೇಂದ್ರ ಸಾರಿಗೆ ಇಲಾಖೆಯಲ್ಲಿ ಹಣಕಾಸಿನ ತೊಂದರೆಯಿಲ್ಲ. ಬೇಕಾದ ಯೋಜನೆಗಳನ್ನು ಕೈಗೊಂಡು ಬನ್ನಿ. ನಾವು ಮಂಜೂರಾತಿ ನೀಡುತ್ತೇವೆ ಎಂದು ಭರವಸೆ ನೀಡಿದ ಅವರು, ಉದ್ಯಮ ಹಾಗೂ ಪ್ರವಾಸೋದ್ಯಮದ ಅಭಿವೃದ್ಧಿ ದೃಷ್ಟಿಯಿಂದ ಕರ್ನಾಟಕದ ಯೋಜನೆಗಳನ್ನು ಮೂರು ಪ್ಯಾಕೇಜುಗಳಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ.ಭಾರತಮಾಲಾ 2ರ ಯೋಜನೆಯಡಿ ಕೊಪ್ಪಳ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ ಅನೇಕ ರಸ್ತೆಗಳ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಅಭಿವೃದ್ಧಿಯಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂಬುದೇ ನಮ್ಮ ಮೂಲಮಂತ್ರ. ಅಭಿವೃದ್ಧಿಯೊಂದೇ ನನ್ನ ಗುರಿ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ