ಧರ್ಮಸ್ಥಳ ಕೇಸಲ್ಲಿ ನ್ಯಾಯಕ್ಕೆ ಲೇಖಕಿಯರ ಒತ್ತಾಯ, ಹಕ್ಕೊತ್ತಾಯ ಪತ್ರದಲ್ಲಿ ಏನಿದೆ?

Kannadaprabha News, Ravi Janekal |   | Kannada Prabha
Published : Oct 22, 2025, 06:32 AM IST
Women writers meet CM

ಸಾರಾಂಶ

ಲೇಖಕಿಯರು ಮತ್ತು ಮಹಿಳa ಹೋರಾಟಗಾರರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಧರ್ಮಸ್ಥಳ ಸುತ್ತಮುತ್ತಲಿನ ಅತ್ಯಾ೧ಚಾರ ಕೊಲೆ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಲು ಒತ್ತಾಯಿಸಿದೆ. ಮಹಿಳೆಯರ ಮೇಲಿನ ಹಿಂಸೆ ತಡೆಯಲು ವಿಎಸ್ ಉಗ್ರಪ್ಪ ಸಮಿತಿ ವರದಿ ಅನುಷ್ಠಾನಕ್ಕೆ ಒತ್ತಾಯ.

ಬೆಂಗಳೂರು (ಅ.22): ‘ರಾಜ್ಯದಲ್ಲಿ ಮಹಿಳೆಯರ ಮೇಲಿನ ಹಿಂಸೆ ತಡೆಯಲು ವಿ.ಎಸ್.ಉಗ್ರಪ್ಪ ಅವರ ಸಮಿತಿ ನೀಡಿರುವ ವರದಿ ಅನುಷ್ಠಾನಗೊಳಿಸಬೇಕು ಹಾಗೂ ಧರ್ಮಸ್ಥಳ ಸುತ್ತಮುತ್ತ ನಡೆದಿರುವ ಭೀಕರ ಅತ್ಯಾ೧ಚಾರ, ಬರ್ಬರ ಕೊಲೆ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು’ ಎಂದು ಲೇಖಕಿಯರು, ಮಹಿಳಾ ಹೋರಾಟಗಾರರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಹಕ್ಕೊತ್ತಾಯ ಮಾಡಿದೆ.

ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ವಿವಿಧ ಮಹಿಳಾ ಸಂಘಟನೆಗಳ ಪ್ರತಿನಿಧಿಗಳು, ಲೇಖಕಿಯರು ಹಾಗೂ ಮಹಿಳಾ ಹೋರಾಟಗಾರರ ನಿಯೋಗ ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಮನವಿ ಪತ್ರ ಸಲ್ಲಿಸಿತು.

ಹಕ್ಕೊತ್ತಾಯ ಪತ್ರದಲ್ಲಿ ಏನಿದೆ?

ಹಕ್ಕೊತ್ತಾಯ ಪತ್ರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಸುತ್ತಮುತ್ತ ನಡೆದಿರುವ ಭೀಕರ ಅತ್ಯಾ೧ಚಾರ, ಬರ್ಬರ ಕೊಲೆಗಳ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ನ್ಯಾಯ ಹಾಗೂ ಅವರ ಕುಟುಂಬದವರು, ಸಾಕ್ಷಿಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಮನವಿ ಮಾಡಿದರು.

ಸೌಜನ್ಯ ಕೊಂದವರು ಯಾರು?

ಧರ್ಮಸ್ಥಳ ಪ್ರಕರಣದ ಕುರಿತು ವಿಶೇಷ ತನಿಖಾದಳ ರಚಿಸಿದ ನಿಮ್ಮ ಸರ್ಕಾರದ ದಿಟ್ಟತನ ಸ್ವಾಗತಿಸುತ್ತೇವೆ. ಆಗಸ್ಟ್ ತಿಂಗಳಲ್ಲಿ ಆರಂಭಿಸಿದ ಕೊಂದವರು ಯಾರು ಎಂಬ ಆಂದೋಲನದ ಪ್ರತಿನಿಧಿಗಳು ನಾವು. ನೀವು ರಚಿಸಿರುವ ಎಸ್‌ಐಟಿಗೆ ಸ್ವಾತಂತ್ರ್ಯ ನೀಡಬೇಕು. ವಿಶೇಷವಾಗಿ ಸೌಜನ್ಯ, ಪದ್ಮಲತಾ, ಯಮುನಾ, ನಾರಾಯಣರಂತಹ ಕೊಲೆ ಪ್ರಕರಣಗಳಲ್ಲಿ ಮರು ತನಿಖೆ ನಡೆಸಬೇಕು ಎಂದು ಮನವಿ ಮಾಡಿದರು.

ಜತೆಗೆ ಪ್ರಕರಣಗಳಲ್ಲಿ ಅನುಮಾನಾಸ್ಪದವಾಗಿ ಮರಣ ಹೊಂದಿರುವ ಉದಾ: ಸೌಜನ್ಯ ಪ್ರಕರಣದ ಸಾಕ್ಷಿಗಳಾದ ರವಿ ಪೂಜಾರಿ, ಗೋಪಾಲಕೃಷ್ಣಗೌಡ, ದಿನೇಶ್ ಗೌಡ, ವಾರಿಜ ಆಚಾರ್ಯ, ಹರೀಶ್ ಮಡಿವಾಳ ಅವರ ಮರಣ ಪ್ರಕರಣಗಳನ್ನು ತನಿಖೆಗೆ ಒಳಪಡಿಸಬೇಕು. ಈ ಪ್ರಕರಣಗಳಲ್ಲಿ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಮಹಿಳೆಯರ ಸುರಕ್ಷತೆಗೆ ಆದ್ಯತೆ ನೀಡಿ:

ಮಹಿಳೆಯರ ಸುರಕ್ಷತೆಗೆ ಸಾರ್ವಜನಿಕ, ಧಾರ್ಮಿಕ ಸ್ಥಳಗಳಲ್ಲಿ ಸಿಸಿ ಟಿವಿ ಕಣ್ಗಾವಲು, ಮಹಿಳಾ ಸಹಾಯ ಡೆಸ್ಕ್‌ ಸೇರಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಎಲ್ಲಾ ಧರ್ಮಗಳ, ಧಾರ್ಮಿಕ ಸಂಸ್ಥೆಗಳಲ್ಲಿ ಆಂತರಿಕ ಸಮಿತಿ ರಚಿಸಿ ಲೈಂಗಿಕ ಕಿರುಕುಳಗಳ ಪ್ರಕರಣ ತೆಗೆದುಕೊಳ್ಳಲು ಪಾಶ್‌ ಕಾಯ್ದೆಯಡಿ ಕ್ರಮ ಕೈಗೊಳ್ಳಬೇಕು. ಆರೋಗ್ಯಕರ ಲೈಂಗಿಕತೆ ಕುರಿತು ಶಿಕ್ಷಣ ನೀಡಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!