'63% ಭ್ರಷ್ಟಾಚಾರ' ಹೇಳಿಕೆ ವಿವಾದ: 'ನನ್ನ ಹೇಳಿಕೆ ತಿರುಚಲಾಗಿದೆ' ಉಪಲೋಕಾಯುಕ್ತ ನ್ಯಾ. ವೀರಪ್ಪ ಸ್ಪಷ್ಟನೆ

Published : Dec 05, 2025, 01:44 PM IST
Justice Veerappa Says 63 parcentage Corruption Data Misused Blames Politicians

ಸಾರಾಂಶ

Justice Veerappa corruption statement: 'ಶೇ. 63ರಷ್ಟು ಭ್ರಷ್ಟಾಚಾರ' ಹೇಳಿಕೆ ಕುರಿತು ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಹೇಳಿಕೆಯು 2019ರ ಇಂಡಿಯಾ ಕರೆಪ್ಷನ್ ಸರ್ವೆಯನ್ನು ಆಧರಿಸಿದ್ದು, ಯಾವುದೇ ನಿರ್ದಿಷ್ಟ ಸರ್ಕಾರವನ್ನು ಗುರಿಯಾಗಿಸಿಲ್ಲ ಎಂದು ತಿಳಿಸಿದ್ದಾರೆ.

ಬೆಂಗಳೂರು (ಡಿ.5) ಕರ್ನಾಟಕ ರಾಜ್ಯದಲ್ಲಿ 'ಶೇ. 63ರಷ್ಟು ಭ್ರಷ್ಟಾಚಾರವಿದೆ' ಎಂದು ಇತ್ತೀಚೆಗೆ ನೀಡಿದ್ದ ಹೇಳಿಕೆ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಇಂದು ಸ್ಪಷ್ಟೀಕರಣ ನೀಡಿದ್ದಾರೆ. ತಮ್ಮ ಹೇಳಿಕೆಯನ್ನು ರಾಜಕೀಯ ನಾಯಕರು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಅವರು ತೀವ್ರ ನೋವು ವ್ಯಕ್ತಪಡಿಸಿದ್ದಾರೆ.

ನಾನು ಯಾವ ಸರ್ಕಾರವನ್ನೂ ಗುರಿಯಾಗಿಸಿ ಹೇಳಿಲ್ಲ:

ನ್ಯಾಯಮೂರ್ತಿ ವೀರಪ್ಪ ಅವರು ತಮ್ಮ ಹಿಂದಿನ ಹೇಳಿಕೆಯನ್ನು ಸಮರ್ಥಿಸಿಕೊಂಡು, ತಾವು ಯಾವುದೇ ನಿರ್ದಿಷ್ಟ ಸರ್ಕಾರ ಅಥವಾ ಅವಧಿಯನ್ನು ಉಲ್ಲೇಖಿಸಿಲ್ಲ, ಅಲ್ಲದೇ ನಾನು ಯಾವ ಸರ್ಕಾರವನ್ನು ಗಮನದಲ್ಲಿಟ್ಟುಕೊಂಡು ಹೇಳಿಲ್ಲ. ಇಂಡಿಯಾ ಕರೆಪ್ಷನ್ ಸರ್ವೆಯಲ್ಲಿ (India Corruption Survey) ಇದ್ದ ಮಾಹಿತಿಯನ್ನು ಮಾತ್ರ ಹೇಳಿದ್ದೇನೆ. 2019 ರಲ್ಲಿ ನಡೆದಿದ್ದ ಸರ್ವೆಯ ಪ್ರಕಾರ, ಆಗ ಶೇ. 63ರಷ್ಟು ಭ್ರಷ್ಟಾಚಾರ ಇದೆ ಎಂದು ವರದಿಯಾಗಿತ್ತು. ನಾನು ಅದನ್ನು ಮಾತ್ರ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ನನ್ನ ಹೇಳಿಕೆ ಸ್ವಾರ್ಥಕ್ಕೆ ಬಳಸಿಕೊಂಡಿದ್ದಾರೆ:

ನನ್ನ ಹೇಳಿಕೆಯನ್ನು ತಿರುಚಲಾಗಿದೆ. ರಾಜಕೀಯ ನಾಯಕರು ಇದನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿದ್ದಾರೆ. ನಾನು 'ನಮ್ಮ ದೇಶ, ನಮ್ಮ ರಾಜ್ಯ' ಎಂದು ಸಾಮಾನ್ಯೀಕರಿಸಿ ಮಾಡಿ ಮಾತನಾಡಿದ್ದೇನೆ. ನನ್ನ ಹೇಳಿಕೆಯನ್ನು ಈ ರೀತಿ ಬಳಕೆ ಮಾಡಿಕೊಂಡಿರುವುದು ನನಗೆ ನಿಜಕ್ಕೂ ನೋವು ತಂದಿದೆ. ಈ ಭ್ರಷ್ಟಾಚಾರಕ್ಕೆ ಸಮಾಜ ಮತ್ತು ಜನರು ಕೂಡ ಕಾರಣ. ಆರಂಭದಿಂದಲೂ ಎಲ್ಲಾ ಸರ್ಕಾರಗಳು ಕೂಡ ಭ್ರಷ್ಟಾಚಾರದಲ್ಲಿ ಇವೆ. ನಾನು ಯಾವುದೇ ಒಂದು ನಿರ್ದಿಷ್ಟ ಸರ್ಕಾರ ಅಂತಾ ಗುರಿಯಾಗಿಸಿ ಹೇಳಿಲ್ಲ ಎಂದು ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ವಿವಾದಕ್ಕೆ ಕಾರಣವಾಗಿದ್ದ ಹೇಳಿಕೆ ಏನು?

ಇತ್ತೀಚೆಗೆ ಹೈಕೋರ್ಟ್ ವಕೀಲರ ಸಭಾಂಗಣದಲ್ಲಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ್ದ ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪ ಅವರು, ದೇಶದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ಇರುವ ರಾಜ್ಯಗಳಲ್ಲಿ ಕರ್ನಾಟಕವು ಐದನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಶೇ. 63ರಷ್ಟು ಭ್ರಷ್ಟಾಚಾರ ತುಂಬಿ ತುಳುಕಾಡುತ್ತಿದೆ. ಮಹಿಳಾ ಅಧಿಕಾರಿಗಳು, ನೌಕರರು ಸಹ ಭ್ರಷ್ಟಾಚಾರದಲ್ಲಿ ಮುಳುಗಿರುವುದು ವಿಪರ್ಯಾಸ. ನಾನು ಉಪ ಲೋಕಾಯುಕ್ತ ಆದ ಮೇಲೆ ಇದನ್ನೆಲ್ಲಾ ನೋಡುವ ಅವಕಾಶ ಸಿಕ್ಕಿದೆ' ಎಂದು ಬೇಸರ ವ್ಯಕ್ತಪಡಿಸಿದ್ದರು.

ನ್ಯಾಯಮೂರ್ತಿಗಳ ಈ ಕಟು ಹೇಳಿಕೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಮತ್ತು ಪರಸ್ಪರ ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ವಿಡಿಯೋ ವೈರಲ್: ರೇಪಿಸ್ಟ್ ಉಮೇಶ್ ರೆಡ್ಡಿ ಬಳ್ಳಾರಿಗೆ ಶಿಫ್ಟ್ ರಿಕ್ವೆಸ್ಟ್!
ಹಾವೇರಿ: ಮತ್ತೆ ಮುನ್ನಲೆಗೆ ಬಂದ ಹಿಜಾಬ್ VS ಕೇಸರಿ ವಿವಾದ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರಸ್ಪರ ಸವಾಲು!