
ಬೆಂಗಳೂರು(ಆ.01): ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಗರದ ಕೖಷ್ಣರಾಜೇಂದ್ರ ಮಾರುಕಟ್ಟೆ ಹಾಗೂ ಕಲಾಸಿಪಾಳ್ಯ ಮಾರುಕಟ್ಟೆ ಸೀಲ್‌ಡೌನ್ ಮಾಡಿದ್ದ ಬಿಬಿಎಂಪಿ ಇದೀಗ ಈ ಸೀಲ್‌ಡೌನ್ ಕ್ರಮವನ್ನು ಆಗಸ್ಟ್ 31ರವರೆಗೆ ಮುಂದುವರಿಸಿ ಆದೇಶಿಸಿದೆ.
ಕೆ.ಆರ್.ಮಾರುಕಟ್ಟೆ ಸುತ್ತಮುತ್ತ ಹಲವರಿಗೆ ಸೋಂಕು ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಇಲ್ಲಿವರೆಗೆ ನಿತ್ಯ ಬರುವ ಲಕ್ಷಾಂತರ ಮಂದಿಗೆ ಸೋಂಕು ಹರಡುವ ಅಪಾಯದ ಹಿನ್ನೆಲೆಯಲ್ಲಿ ಈ ಹಿಂದೆ ಸೆ.31 ರವರೆಗೆ ಈ ಮಾರುಕಟ್ಟೆಗಳನ್ನು ತೆರೆಯದಂತೆ ಸೀಲ್‌ಡೌನ್ ಮಾಡಲಾಗಿತ್ತು.
ಚಿಕ್ಕಪೇಟೆಯಲ್ಲಿ ವ್ಯಾಪಾರ ವಹಿವಾಟು ಪುನರಾರಂಭ..!
ಜು.31ರಂದು ಶುಕ್ರವಾರ ಈ ಸೀಲ್‌ಡೌನ್ ಅವಧಿ ಮುಕ್ತಾಯವಾಗಿದೆ. ಈ ನಡುವೆ ಕೇಂದ್ರ ಸರ್ಕಾರ ಕಂಟೈನ್‌ಮೆಂಟ್ ವಲಯಗಳ ಲಾಕ್‌ಡೌನ್ ಅವಧಿಯನ್ನು ಮುಂದುವರಿಸಲು ಆದೇಶಿಸಿದೆ. ಹೀಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಈ ಎರಡೂ ಮಾರುಕಟ್ಟೆಗಳಲ್ಲಿ ಇನ್ನೂ ಒಂದು ತಿಂಗಳ ಕಾಲ ಸೀಲ್‌ಡೌನ್ ಮುಂದುವರಿಸಲು ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ