ಜ. 13ಕ್ಕೆ K SET ಪರೀಕ್ಷೆ: ವಸ್ತ್ರ ಸಂಹಿತೆ ಕಡ್ಡಾಯಗೊಳಿಸಿದ ಕೆಇಎ, ಮಾಂಗಲ್ಯ ಸರ, ಕಾಲುಂಗುರಕ್ಕೆ ಅನುಮತಿ

By Ravi Janekal  |  First Published Jan 5, 2024, 9:58 AM IST

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಜ.13ರಂದು ನಡೆಸಲಿರುವ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್‌) ವಸ್ತ್ರ ಸಂಹಿತೆ ನಿಯಮಾವಳಿ ಪ್ರಕಟಿಸಿದ್ದು, ಸರಳ ಉಡುಪು ಧರಿಸಿ ಬರಲು ಸೂಚಿಸಿದೆ. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಇನ್ಯಾವುದೇ ಕಂಠಾಭರಣ, ಕಿವಿಯೋಲೆ, ಉಂಗುರ ಹಾಗೂ ಕಡಗಗಳನ್ನು ಧರಿಸಿಕೊಂಡು ಧರಿಸಿ ಬರುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.


ಬೆಂಗಳೂರು (ಜ.5): ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಜ.13ರಂದು ನಡೆಸಲಿರುವ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ-ಸೆಟ್‌) ವಸ್ತ್ರ ಸಂಹಿತೆ ನಿಯಮಾವಳಿ ಪ್ರಕಟಿಸಿದ್ದು, ಸರಳ ಉಡುಪು ಧರಿಸಿ ಬರಲು ಸೂಚಿಸಿದೆ. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಇನ್ಯಾವುದೇ ಕಂಠಾಭರಣ, ಕಿವಿಯೋಲೆ, ಉಂಗುರ ಹಾಗೂ ಕಡಗಗಳನ್ನು ಧರಿಸಿಕೊಂಡು ಧರಿಸಿ ಬರುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

ಕೆಲ ದಿನಗಳ ಹಿಂದೆ ನಡೆದ ನಿಗಮ ಮಂಡಳಿ ಪರೀಕ್ಷೆಗಳ ವೇಳೆ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಿಸುವ ಮುನ್ನ ಮಂಗಳಸೂತ್ರ ಮತ್ತು ಕಾಲುಂಗುರವನ್ನು ತೆಗೆಸಿದ್ದು ಭಾರೀ ವಿವಾದಕ್ಕೀಡಾಗಿತ್ತು. ಇದು ಬಹುಸಂಖ್ಯಾತ ಹಿಂದೂ ಸಂಸ್ಕೃತಿಗೆ ಅಗೌರವ ತೋರಲಾಗಿದೆ ಎಂದು ಸಾರ್ವಜನಿಕರು ಹಾಗೂ ರಾಜಕೀಯ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಮಂಗಳ ಸೂತ್ರ ಮತ್ತು ಕಾಲುಂಗುರಕ್ಕೆ ವಿನಾಯಿತಿ ನೀಡಿದೆ.

Latest Videos

undefined

ಪರೀಕ್ಷೆಯ ಅಂದು ಬೆಳಿಗ್ಗೆ 10 ರಿಂದ 11 ಮತ್ತು ಮಧ್ಯಾಹ್ನ 12ರಿಂದ 2 ಗಂಟೆಯವರೆಗೆ ನಡೆಯಲಿದೆ. ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ನಲ್ಲಿ ಪರೀಕ್ಷಾ ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಪರೀಕ್ಷಾ ಕೇಂದ್ರ ಪ್ರವೇಶಿಸುವ ಮುನ್ನ ಈ ಪ್ರವೇಶ ಪತ್ರದ ಜೊತೆಗೆ ಸರ್ಕಾರದ ಮಾನ್ಯತೆಯ ಒಂದು ಗುರುತಿನ ಪತ್ರ(ಆಧಾರ್‌, ಡಿಎಲ್‌, ರೇಷನ್‌ಕಾರ್ಡ್‌ ಇತ್ಯಾದಿ) ತೋರಿಸುವುದು ಕಡ್ಡಾಯ. ಬರುವಾಗ ತಮ್ಮ ಎರಡು ಭಾವಚಿತ್ರಗಳನ್ನು ತರಬೇಕು..

ಕೆ - ಸೆಟ್‌ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ವಸ್ತ್ರ ಸಂಹಿತೆಯನ್ನು ಪಾಲಿಸಬೇಕಿದೆ. ಯಾವುದೇ ಅಕ್ರಮ ನಡೆಯಬಾರದು ಎಂಬ ಕಾರಣದಿಂದ ಈ ಕ್ರಮ ಅನುಸರಿಸಲಾಗುತ್ತಿದೆ. ಹಾಗಾದರೆ ಪರೀಕ್ಷೆಗೆ ಅಭ್ಯರ್ಥಿಗಳು ಉಡುಪು ಹೇಗೆ ಧರಿಸಬೇಕು?

ತುಮಕೂರಿನಲ್ಲಿ ತಪ್ಪಿತು ದೊಡ್ಡ ಅನಾಹುತ;  ಮಕ್ಕಳ ಕೈಗೆ ಸಿಕ್ಕಿತ್ತು ಹಂದಿ ಬೇಟೆಗೆ ಬಳಸುವ ಸಿಡಿ ಮದ್ದಿನ ಉಂಡೆ!

ವಸ್ತ್ರಸಂಹಿತೆ ಏನು: ಪುರುಷ ಅಭ್ಯರ್ಥಿಗಳು ಅರೆತೋಳಿನ ಅಂಗಿ, ಹೆಚ್ಚಿನ ಜೇಬುಗಳಿಲ್ಲದ ಸರಳ ಪ್ಯಾಂಟ್‌ ಕಡ್ಡಾಯ. ಉಡುಪಲ್ಲಿ ಜೇಬು ಪಾಕೆಟ್, ದೊಡ್ಡ ಬಟನ್ಸ್ ಮತ್ತು ವಿಸ್ತಾರ ಕಸೂತಿ ಇರುವಂತಿಲ್ಲ. ಬೆಲ್ಟ್‌, ಶೂಗಳನ್ನು ನಿಷೇಧಿಸಲಾಗಿದೆ. ಕಂಠಾಭರಣ, ಕಿವಿಯೋಲೆ, ಉಂಗುರ ಮತ್ತು ಕೈ ಕಡಗಗಳನ್ನು ಧರಿಸಿಕೊಂಡು ಬರಬಾರದು.

ಮಹಿಳಾ ಅಭ್ಯರ್ಥಿಗಳಿಗೆ ವಿಪರೀತ ಕಸೂತಿ, ಹೂಗಳು, ಬ್ರೂಚ್, ಬಟನ್, ಪೂರ್ಣ ತೋಳಿನ ರವಿಕೆ/ವಸ್ತ್ರ ಇರುವ ಉಡುಪು ಮತ್ತು ಜೀನ್ಸ್ ಪ್ಯಾಂಟ್ ಹಾಗೂ ಶೂ, ದಪ್ಪ ಸೋಲ್‌ನ ಚಪ್ಪಲಿ ಧರಿಸಿ ಬರುವಂತಿಲ್ಲ. ಜೊತೆಗೆ ಬ್ಲೂಟೂತ್‌, ಪೆನ್‌ಡ್ರೈವ್‌, ಕೈಗಡಿಯಾರ, ಮೈಕ್ರೋಫೋನ್‌ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್‌ ವಸ್ತುಗಳನ್ನು ತರುವಂತಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರಾದ ರಮ್ಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಡಿಸಿಇಟಿ-2023: ಡಿ.16ರಿಂದ ಕ್ಯಾಶುಯಲ್ ತೆರವು ಹಂತದ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ

click me!