
ಕಲಬುರಗಿ (ಫೆ.10): ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಮತೀನ್ ಪಟೇಲ್ ಅವರು ಧುರಂಧರ್ ಸಿನಿಮಾ ಹಾಡಿಗೆ ಗನ್ ಹಿಡಿದು ಡ್ಯಾನ್ಸ್ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಕೈಯಲ್ಲಿ ಗನ್ ಹಿಡಿದು ಸ್ಟೆಪ್ ಹಾಕಿದ್ದ ನಾಯಕನ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಇದೀಗ ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ವಿಡಿಯೋ ವೈರಲ್ ಆಗಿ ವಿವಾದಕ್ಕೀಡಾಗುತ್ತಿದ್ದಂತೆ ಎಚ್ಚೆತ್ತುಕೊಂಡ ಮತೀನ್ ಪಟೇಲ್, ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಅದು ಅಸಲಿ ಗನ್ ಅಲ್ಲ, ಬದಲಾಗಿ ಮಕ್ಕಳ ಆಟಿಕೆಯ ಗನ್ (ಲೈಟರ್ ಗನ್)' ಎಂದು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿದ್ದಾರೆ.
ಕಳೆದ ತಿಂಗಳು 18 ರಂದು ನನ್ನ ಸಹೋದರಿಯ ಮಗಳ ಮದುವೆಯ ಮುನ್ನಾ ದಿನ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆ ಸಂಭ್ರಮದ ವೇಳೆ ಕುಟುಂಬದ ಸದಸ್ಯರೆಲ್ಲರೂ ವಿವಿಧ ಪಾತ್ರಗಳನ್ನು ಮಾಡುತ್ತಾ ಡ್ಯಾನ್ಸ್ ಮಾಡಿದ್ದೆವು. ಮಕ್ಕಳ ಒತ್ತಾಯಕ್ಕೆ ಮಣಿದು ನಾನು ಕೇವಲ ಒಂದು ಪಾತ್ರಕ್ಕಾಗಿ ಆ ಲೈಟರ್ ಗನ್ ಹಿಡಿದುಕೊಂಡಿದ್ದೆ ಅಷ್ಟೇ' ಎಂದು ಕಾರ್ಯಕ್ರಮದ ಹಿನ್ನೆಲೆಯನ್ನು ವಿವರಿಸಿದ್ದಾರೆ.
ರಾಜಕೀಯ ವರ್ಚಸ್ಸಿಗೆ ಧಕ್ಕೆ ತರಲು ವಿರೋಧಿಗಳು ಕುತಂತ್ರ
ತಮ್ಮ ರಾಜಕೀಯ ವರ್ಚಸ್ಸಿಗೆ ಧಕ್ಕೆ ತರಲು ಕೆಲವರು ಈ ವಿಡಿಯೋವನ್ನು ದುರುದ್ದೇಶಪೂರ್ವಕವಾಗಿ ವೈರಲ್ ಮಾಡುತ್ತಿದ್ದಾರೆ ಎಂದು ಮತೀನ್ ಆರೋಪಿಸಿದ್ದಾರೆ. ನಾನು ಜವಾಬ್ದಾರಿಯುತ ಸ್ಥಾನದಲ್ಲಿದ್ದವನು, ಈ ರೀತಿ ಗನ್ ಪ್ರದರ್ಶನ ಮಾಡುವವನಲ್ಲ. ಈಗಾಗಲೇ ಆ ಲೈಟರ್ ಗನ್ ಅನ್ನು ಪೊಲೀಸರಿಗೆ ಒಪ್ಪಿಸಿ, ಸಂಪೂರ್ಣ ಮಾಹಿತಿ ನೀಡಿದ್ದೇನೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ