
ಕಲಬುರಗಿ (ನ.14) ಕಲಬುರಗಿ ತಾಲೂಕಿನ ಕಲ್ಲಹಂಗರಗಾ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಅಷ್ಟಗಾ ಗ್ರಾಮಲ್ಲಿ ಶುಕ್ರವಾರ ರಾತ್ರಿ 8 ಗಂಟೆ 3 ನಿಮಿಷಕ್ಕೆ ರಿಕ್ಟರ್ ಮಾಪಕದಲ್ಲಿ 2 ರಷ್ಟು ತೀವ್ರತೆ ಇರುವಂತಂಹ ಭೂಕಂಪನ ದಾಖಲಾಗಿದೆ.
ಈ ಕಂಪನದ ತೀವ್ರತೆ, ಪ್ರಮಾಣ ಕಮ್ಮಿ ಇತ್ತು, ಹೀಗಾಗಿ ಇದು ಊರಿನ ಜನರ ಗಮನಕ್ಕೆ ಅಷ್ಟಾಗಿ ಬಂದಿಲ್ಲ ಎನ್ನಲಾಗಿದೆ. ಭೂಮಿ ಕಂಪಿಸಿರುವುದು ರಿಕ್ಟರ್ ಮಾಪಕದಲ್ಲಿ ದಾಖಲಯಾಗಿದೆ, ಆದರೆ ತೀವ್ರತೆ ಅಷ್ಟಾಗಿರಲಿಲ್ಲ, ಜನ ಭಯ ಪಡುವ ಅಗತ್ಯವಿಲ್ಲವೆಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಅಕ್ಟೋಬರ್ 21 ರಂದು ಬೆಳಿಗ್ಗೆ 2.5 ತೀವ್ರತೆ ಲಘು ಭೂಕಂಪ ಸಂಭವಿಸಿತ್ತು. ಗಡಿಕೇಶ್ವರ ಗ್ರಾಮದ ಬಳಿ ಭೂಕಂಪದ ಕೇಂದ್ರಬಿಂದು ಪತ್ತೆಯಾಗಿತ್ತು. ಭೂಕಂಪನದ ಭಯಕ್ಕೆ ಜನರು ಮನೆಗಳಿಂದ ಹೊರಗೆ ಓಡಿಬಂದಿದ್ದು ವರದಿಯಾಗಿತ್ತು. ತಿಂಗಳೊಳಗೆ ಇದೀಗ ಮತ್ತೆ ಕಲಬುರಗಿಯಲ್ಲಿ ಭೂಮಿ ಕಂಪಿಸಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ