
ಕಲಬುರಗಿ (ಮಾ.27): ಮಾಹಿತಿ ಹಕ್ಕು ಕಾರ್ಯಕರ್ತನ ಹೆಸರನ್ನು ಬ್ಲಾಕ್ ಲಿಸ್ಟ್ ನಿಂದ ತೆಗೆಯಲು ಹಣದ ಬೇಡಿಕೆ ಇಟ್ಟಿದ್ದ ರಾಜ್ಯ ಮಾಹಿತಿ ಹಕ್ಕು ಆಯೋಗದ ಕಲಬುರಗಿ ಪೀಠದ ಆಯುಕ್ತ ರವೀಂದ್ರ ಢಾಕಪ್ಪ ಫೋನ್ ಪೇ ಮೂಲಕ ಹಣವನ್ನ ಪಡೆಯುತ್ತಿದ್ದಾಗ ಗುರುವಾರ ರೆಡ್ ಹ್ಯಾಂಡ್ ಆಗಿ ಲೋಕಾಯುಕ ಲೋಕಾಯುಕ್ತ ಪೊಲೀಸರು ಬೀಸಿರುವ ಬಲೆಗೆ ಬಿದ್ದಿದ್ದಾರೆ.
ಕಲಬುರಗಿ ಪೀಠದ ಆಯುಕ್ತರಾಗಿರುವ ರವೀಂದ್ರ ಗುರುನಾಥ ಡಾಕಪ್ಪ ಅವರು, ತಾವು ಬೇಡಿಕೆ ಇಟ್ಟಿದ್ದ ಹಣವನ್ನ ಬ್ಯಾಂಕ್ ವರ್ಗಾವಣೆ ಮೂಲಕ ಪಡೆಯುತ್ತಿದ್ದಾಗ ಕಲಬುರಗಿಯಲ್ಲಿ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಇದನ್ನು ಓದಿ: ಎಲ್ಲಾ ಸ್ವಯಂ ಘೋಷಿತ ಹಿಂದೂ ಹುಲಿಗಳ ಬಗ್ಗೆ ಕನಿಕರ ಮೂಡುತ್ತಿದೆ: ಪ್ರಿಯಾಂಕ್ ಖರ್ಗೆ ವ್ಯಂಗ್ಯ
ಬ್ಲಾಕ್ ಲಿಸ್ಟ್ ನಲ್ಲಿರುವ ಆರ್ ಟಿಐ ಕಾರ್ಯಕರ್ತ ಸೈಬಣ್ಣ ಸಾಸಿ ಬೆನಕನಳ್ಳಿ ಹೆಸರನ್ನು ಅಲ್ಲಿಂದ ತೆಗೆದು ಹಾಕಲು ಆಯುಕ್ತ ರವೀಂದ್ರ ಢಾಕಪ್ಪ ಇವರು 3 ಲಕ್ಷ ರೂ, ಗೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈಗಾಗಲೇ 1 ಲಕ್ಷ ರೂ, ಗಳನ್ನು ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡಿದ್ದ ಆಯುಕ್ತರು, ಉಳಿದ ಹಣ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾರೆ. ಎಂದು ತಿಳಿದುಬಂದಿದೆ. ಲೋಕಾಯುಕ್ತ ಡಿವೈಎಸ್ ಪಎಸ್ ಪಿ ಗೀತಾ ಬೇನಾಳ್ ನೈತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಸದ್ಯ ಗುರುನಾಥ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಎಸ್.ಪಿ ಬಿಕೆ. ಉಮೇಶ್ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗೀತಾ ಬೆನಾಳ, ಪೊಲೀಸ್ ಇನ್‌ಸ್ಪೆಕ್ಟರ್ ಅರುಣ್ ಕುಮಾರ್ ಹಾಗೂ ಸಿಬ್ಬಂದಿಯವರಾದ ಮಲ್ಲಿನಾಥ್, ಹನುಮಂತ, ಬಸವರಾಜ್, ಪೈಮೊದಿನಪೈಮೊದಿನ್, ತಂಡದಿಂದ ತನಿಖೆ ಮುಂದುವರಿದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ