
ಬೆಂಗಳೂರು (ಫೆ.22): ಉದ್ಯೋಗಕ್ಕಾಗಿ ರಷ್ಯಾಕ್ಕೆ ತೆರಳಿದ್ದ ಕರ್ನಾಟಕ ಮೂಲದ ಯುವಕರನ್ನು ಯುದ್ಧಕ್ಕೆ (Russia Ukrain War) ಬಳಸಿಕೊಂಡ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಜಿಲ್ಲಾಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಮೂವರು ಯುವಕರು ರಷ್ಯಾಕ್ಕೆ ಹೋಗಿದ್ದ ಮಾಹಿತಿ ಇದೆ ಎಂದರು.
ವಿಧಾನಸೌಧದಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ರಷ್ಯಾ ಸೇನೆ ಅಮಾಯಕ ಯುವಕರನ್ನು ಯುದ್ಧಕ್ಕೆ ಬಳಸಿದ ಮಾಹಿತಿ ಇದೆ. ರಷ್ಯಾದಲ್ಲಿ ನಮ್ಮ ಯುವಕರನ್ನು ಸೇನೆಗೆ ಬಳಸಿಕೊಂಡ ಮಾಹಿತಿಯನ್ನು ನಮ್ಮ ಜಿಲ್ಲಾಧಿಕಾರಿ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಮೂವರು ಯುವಕರು ರಷ್ಯಾಕ್ಕೆ ಹೋಗಿದ್ದ ಮಾಹಿತಿ ನೀಡಿದ್ದಾರೆ ಎಂದರು.
ನಮ್ಮದು ಆಳುವ ಸರ್ಕಾರವಲ್ಲ, ಆಲಿಸುವ ಸರ್ಕಾರ: ಸಚಿವ ಖರ್ಗೆ
ಉದ್ಯೋಗಕ್ಕಾಗಿ ತೆರಳಿದ್ದ ಯುವಕರನ್ನು ಯುದ್ಧಕ್ಕೆ ಬಳಸಿಕೊಂಡ ಮಾಹಿತಿ ಇದೆ. ರಷ್ಯಾದ ವ್ಯಾಗ್ನರ್ ಗ್ರೂಪ್ಗೆ ಸೇರ್ಪಡೆ ಮಾಡಿಕೊಂಡ ಮಾಹಿತಿ ಇದೆ. ಕರ್ನಾಟಕ ಮಾತ್ರವಲ್ಲದೆ, ತೆಲಂಗಾಣ, ಉತ್ತರ ಭಾರತದ ಯುವಕರು ಸಿಲುಕಿರುವ ಮಾಹಿತಿ ಇದೆ. ಈ ವಿಚಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಮನಕ್ಕೆ ತಂದಿದ್ದು, ವಿದೇಶಾಂಗ ಸಚಿವರ ಜೊತೆ ಮಾತನಾಡುವಂತೆ ಮನವಿ ಮಾಡಿದ್ದೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ