ಹಫ್ತಾ ವಸೂಲಿಗೆ ಒತ್ತಡ: ಕಲಬುರಗಿಯಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳ ವಿರುದ್ಧ ಸಿಡಿದೆದ್ದ ಕಾನ್​ಸ್ಟೇಬಲ್​​ಗಳು

By Govindaraj S  |  First Published Jul 7, 2023, 9:46 AM IST

ಇಲ್ಲಿನ ನಗರ ಸಂಚಾರ ಪೊಲೀಸ್‌ ಠಾಣೆ-1ರಲ್ಲಿನ ಪೇದೆ ಚಂದ್ರಕಾಂತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ ನಗರದಲ್ಲಿ ನಡೆದಿದೆ. ಕೆಲಸದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳು ತುಂಬ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಚಂದ್ರಕಾಂತ ವಿಷ ಪ್ರಾಶನ ಮಾಡಿದ್ದಾನೆ.


ಕಲಬುರಗಿ (ಜು.07): ಇಲ್ಲಿನ ನಗರ ಸಂಚಾರ ಪೊಲೀಸ್‌ ಠಾಣೆ-1ರಲ್ಲಿನ ಪೇದೆ ಚಂದ್ರಕಾಂತ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಗುರುವಾರ ನಗರದಲ್ಲಿ ನಡೆದಿದೆ. ಕೆಲಸದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಗಳು ತುಂಬ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಚಂದ್ರಕಾಂತ ವಿಷ ಪ್ರಾಶನ ಮಾಡಿದ್ದಾನೆ. ತಕ್ಷಣ ಇವರು ವಿಷ ಕುಡಿದಿರೋದನ್ನ ಮನೆಯಲ್ಲಿ ಕುಟುಂಬದ ಸದಸ್ಯರು ಗಮನಿಸಿ ಅವರನ್ನು ಜಿಮ್ಸ್‌ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಮುಂದುವರಿದಿದ್ದು ಪೇದೆ ಚಂದ್ರಕಾಂತ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆಂದು ಆಸ್ಪತ್ರೆ ಮೂಲಗಳು ಹೇಳಿವೆ.

ಏತನ್ಮದ್ಯೆ ಸದರಿ ಘಟನೆಗೆ ಪೊಲೀಸ್‌ ಪೇದೆಗಳು ಕ್ರೋಧಗೊಂಡಿದ್ದು ಹಿರಿಯ ಪೊಲೀಸ್‌ ಅಧಿಕಾರಿಗಳ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಹಪ್ತಾ ವಸೂಲಿಯಂತಹ ಕೆಲಸಗಳಿಗೆ ನಮ್ಮನ್ನು ಬಳಸಿಕೊಳ್ಳುತ್ತಿದ್ದಾರೆ, ಮಾಡದೆ ಹೋದಲ್ಲಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ, ಹಪ್ತಾ ವಸೂಲಿಗೆ ಸಹಕರಿಸದ ಪೊಲೀಸ್‌ ಪೇದೆಗಳನ್ನು ವರ್ಗಾವಣೆ ಮಾಡುತ್ತಿದ್ದಾರೆಂದು ಪೇದೆಗಳು ಹಿರಿಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

Tap to resize

Latest Videos

undefined

Karnataka Budget 2023 Live Updates | ಕರ್ನಾಟಕ ಬಜೆಟ್

ಆತ್ಮಹತ್ಯೆಗೆ ಯತ್ನಿಸಿದ ಪೇದೆ ವರ್ಗವಾಗಿತ್ತು: ಇನ್ನು ಆತ್ಮಹತ್ಯೆಗೆ ಯತ್ನಿಸಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಂದ್ರಕಾಂತ ಅವರನ್ನು ನಗರ ಪೊಲೀಸ್‌ ಆಯುಕ್ತ ಚೇತನ್‌ ಆರ್‌. ಫರಹತಾಬಾದ್‌ ಠಾಣೆಗೆ ವರ್ಗಾವಣೆ ಮಾಡಿದ್ದರು. ನಮ್ಮ ಮೇಲಾಧಿಕಾರಿಗಳೇ ಸುಳ್ಳು ಹೇಳಿ ವರ್ಗಾವಣೆ ಮಾಡಿಸಿದ್ದಾರೆ ಎಂದು ಚಂದ್ರಕಾಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ 59 ಕಾನ್‌ಸ್ಟೇಬಲ್‌ಗಳನ್ನು ವರ್ಗಾವಣೆ ಮಾಡಲಾಗಿದೆ. ತಮಗೆ ಬೇಡವಾದವರನ್ನು ವರ್ಗಾವಣೆ ಮಾಡಿಸಿದ್ದಾರೆ ಆರೋಪ ಮಾಡಿದ್ದಾರೆ.

ಮದುವೆ‌‌ ವಿಚಾರದಲ್ಲಿ ಬೇಸರ: ಬೆಂಗಳೂರಿನ ಬೆಸ್ಕಾಂ ಇಂಜಿನಿಯರ್ ಪಾವಗಡದಲ್ಲಿ ಆತ್ಮಹತ್ಯೆ

ಕೆರಳಿದ ಪೇದೆಗಳು: ಮರಳು ಹಪ್ತಾ, ವೈನ್‌ ಶಾಪ್‌ ಹಪ್ತಾ ವಸೂಲಿ ಮಾಡಲು ಪಿಎಸ್‌ಐ, ಸಿಪಿಐ, ಡಿವೈಎಸ್ಪಿ ಅವರು ಒತ್ತಡ ಹೇರುತ್ತಿದ್ದಾರೆ. ಬಳಿಕ ಲೀಡರ್‌ಗಳಿಗೆ ದುಡ್ಡು ಕೊಟ್ಟು ಬರುತ್ತಾರೆ ಎಂದು ಕಲಬುರಗಿಯ ಪೊಲೀಸ್‌ ಕಾನ್‌ಸ್ಟೇಬಲ್‌ಗಳು ಮಾಡಿರುವ ಆರೋಪ ನಗರ ಪೊಲೀಸ್‌ ವಲಯದಲ್ಲಿ ಸಂಚಲನ ಮೂಡಿಸಿದೆ. ಅದರಲ್ಲೂ ಪೇದೆ ಭೀಮಾ ನಾಯಕ್‌ ಎಂಬುವವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

click me!