ನ.1ರಂದೇ ‘ಕಲ್ಯಾಣ ಕರ್ನಾಟಕ’ ಪ್ರತ್ಯೇಕ ರಾಜ್ಯಕ್ಕೆ ಧ್ವಜಾರೋಹಣ

By Kannadaprabha NewsFirst Published Oct 30, 2022, 2:00 AM IST
Highlights

ಹಿಂದುಳಿದ ಕಲ್ಯಾಣ ಕರ್ನಾಟಕ ಅಭಿವೃದ್ಧಿಯ ನಿರ್ಲಕ್ಷ್ಯ ಹಾಗೂ ಕಲಂ 371 ಜೆ ಸಮರ್ಪಕ ಜಾರಿಗೊಳಿಸದಿರುವುದನ್ನು ಖಂಡಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ನ.1ರಂದು ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಲು ಇಲ್ಲಿನ ಜನಪರ ಸಂಘಟನೆಗಳು ನಿರ್ಧರಿಸಿವೆ. 

ಕಲಬುರಗಿ (ಅ.30): ಹಿಂದುಳಿದ ಕಲ್ಯಾಣ ಕರ್ನಾಟಕ ಅಭಿವೃದ್ಧಿಯ ನಿರ್ಲಕ್ಷ್ಯ ಹಾಗೂ ಕಲಂ 371 ಜೆ ಸಮರ್ಪಕ ಜಾರಿಗೊಳಿಸದಿರುವುದನ್ನು ಖಂಡಿಸಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ನ.1ರಂದು ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಲು ಇಲ್ಲಿನ ಜನಪರ ಸಂಘಟನೆಗಳು ನಿರ್ಧರಿಸಿವೆ. ಕಲಬುರಗಿ ನಗರ ಉಪ ರಾಜಧಾನಿಯಾಗಲು ಎಲ್ಲಾ ಅರ್ಹತೆ ಹೊಂದಿದೆ. ವಿಮಾನ ನಿಲ್ದಾಣ, ಕೇಂದ್ರೀಯ ವಿಶ್ವವಿದ್ಯಾಲಯ, ಸೇರಿದಂತೆ ಅನೇಕ ಶಿಕ್ಷಣ ಸಂಸ್ಥೆಗಳಿವೆ. ಶೈಕ್ಷಣಿಕವಾಗಿ ಸಮಗ್ರ ಅಭಿವೃದ್ಧಿ ಹೊಂದಿದೆ.

ಆದ್ದರಿಂದ ಕಲಬುರಗಿ ಜಿಲ್ಲೆ ರಾಜ್ಯದ ಉಪರಾಜಧಾನಿ ಒಂದು ತಿಂಗಳೋಳಗಾಗಿ ಘೋಷಿಸಿ ಇಲ್ಲದಿದ್ದರೆ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡಿ ಎಂದು ನ.1ರಂದು ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣ ಮಾಡಿ ತೆಲಂಗಾಣ ಮಾದರಿಯಲ್ಲಿ ಪ್ರತ್ಯೇಕ ರಾಜ್ಯ ಹೋರಾಟ ಪ್ರಾರಂಭಿಸಲಾಗುವುದು ಎಂದು ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂಎಸ್‌ ಪಾಟೀಲ ನರಿಬೋಳ, ಮತ್ತು ಗ್ರಾಮೀಣ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷರಾದ ಶ್ರವಣಕುಮಾರ ಡಿ ನಾಯಕ, ಡಾ.ರಾಜಶೇಖರ ಬಂಡೆ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Mysuru: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಧೂಳೀಪಟ: ನಳಿನ್‌ಕುಮಾರ್‌ ಕಟೀಲ್‌

ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕದ ಜಿಲ್ಲೆಗಳನ್ನು ಅಭಿವೃದ್ಧಿ ಮಾಡಲು ಸರಕಾರ ಬದ್ಧವಾಗಿದ್ದರೆ ಕೂಡಲೇ ಕಲಬುರಗಿಯನ್ನು ರಾಜ್ಯದ ಎರಡನೆ ರಾಜಧಾನಿ ಎಂದು ಘೋಷಿಸಬೇಕು. ಇಲ್ಲಿಯ ಜನರು ತಮ್ಮ ಕೆಲಸಕ್ಕಾಗಿ 600 ಕಿ.ಮೀ ದೂರದ ರಾಜಧಾನಿ ಬೆಂಗಳೂರಿಗೆ ಹೋಗಿ ಬರುವುದು ದುಬಾರಿ ಜೊತೆಗೆ ಸಮಯವು ವ್ಯರ್ಥವಾಗುತ್ತದೆ. ಹೀಗಾಗಿ ಕಲಬುರಗಿ ಉಪರಾಜಧಾನಿ ಆದರೆ ಎಲ್ಲಾ ಉಪಕಚೇರಿ ಇಲ್ಲಿ ಕಾರ್ಯನಿರ್ವಹಿಸುತ್ತವೆ. ಇದರಿಂದ ಇಲ್ಲಿನ ಜನರಿಗೆ ಅನುಕೂಲವಾಗುತ್ತದೆ ಎಂದರು.

ಈ ಹಿಂದೆ ಸರ್ಕಾರ 371 (ಜೆ) ಸಮರ್ಪಕ ಅನುಷ್ಠಾನಕ್ಕೆ ವಿಶೇಷ ಅಭಿವೃದ್ಧಿ ಕೋಶ ಸ್ಥಾಪಿಸುವುದಾಗಿ ಭರವಸೆ ನೀಡಿತ್ತು. ಇನ್ನೂ ಅದು ಕೇವಲ ಭರವಸೆಯಾಗಿಯೇ ಉಳಿದಿದೆ. ರೈಲ್ವೆ ಡಿವಿಷನ್‌, ಏಮ್ಸ್‌, ಟೆಕ್ಸ್‌ಟೈಲ್‌ ಪಾರ್ಕ್, ಆಹಾರ ಪ್ರಯೋಗಾಲಯ ಹಾಗೂ ಇಂಧನ ಪ್ರಾದೇಶಿಕ ಕಚೇರಿ ಹೋಗಿವೆ. ಇದೀಗ ದಶಕಗಳ ಕಾಲ ಇತಿಹಾಸ ಹೊಂದಿರುವ ದೂರದರ್ಶನ ಕೇಂದ್ರವನ್ನೂ ಕೂಡಾ ಕಲಬುರಗಿಯಿಂದ ಕಿತ್ತುಕೊಳ್ಳಲಾಗುತ್ತಿದೆ.

ವೈದ್ಯರ ಹಾಜರಾತಿ ಮೇಲೆ ನಿಗಾಕ್ಕೆ ಬಯೋಮೆಟ್ರಿಕ್‌: ಸಚಿವ ಸುಧಾಕರ್‌

ಬಹುದಿನಗಳ ಹಿಂದೆಯೇ ಘೋಷಣೆಯಾದ ಥೀಮ್‌ ಪಾರ್ಕ್ ಕಾಮಗಾರಿ ಡ್ರೀಮ್‌ ಪಾರ್ಕ್ ಆಗಿ ಉಳಿದಿದೆ. ಕೆರೆ ಅಭಿವೃದ್ಧಿ ಕಾಮಗಾರಿ ಅರ್ಧಕ್ಕೆ ನಿಂತಿದೆ. ಕೆಕೆಆರ್‌ಡಿಬಿ ಹಣ ಕಲ್ಯಾಣಕ್ಕೆ ಸಂಬಧಿಸದ ಜಿಲ್ಲೆಗಳಿಗೆ ಬಿಡುಗಡೆ ಮಾಡಲಾಗಿದೆ ಇದಕ್ಕೆ ಈ ಭಾಗದ ರಾಜಕಾರಣಿಗಳ ಇಚ್ಛಾ ಶಕ್ತಿಯ ಕೋರತೆಯು ಕಾರಣ ಎಂದು ಅವರು ಆರೋಪಿಸಿದ್ದಾರೆ.

click me!