ಟೈಟ್‌ ಫೈಟ್‌ ಶಾಸಕ ಗಣೇಶ್‌ ನಾಪತ್ತೆ : ಎಲ್ಲಿದ್ದಾರೆ..?

Published : Jan 23, 2019, 08:12 AM IST
ಟೈಟ್‌ ಫೈಟ್‌ ಶಾಸಕ ಗಣೇಶ್‌ ನಾಪತ್ತೆ : ಎಲ್ಲಿದ್ದಾರೆ..?

ಸಾರಾಂಶ

ಶಾಸಕ ಆನಂದ ಸಿಂಗ್‌ ಮೇಲೆ ಬೆಂಗಳೂರಿನ ಈಗಲ್ಟನ್‌ ರೆಸಾರ್ಟ್‌ನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಎದುರಿಸುತ್ತಿರುವ ಕಂಪ್ಲಿ ಶಾಸಕ ಗಣೇಶ್‌ ನಾಪತ್ತೆಯಾಗಿದ್ದಾರೆ. 

ಬಳ್ಳಾರಿ :  ಹೊಸಪೇಟೆ ಶಾಸಕ ಆನಂದ ಸಿಂಗ್‌ ಮೇಲೆ ಬೆಂಗಳೂರಿನ ಈಗಲ್ಟನ್‌ ರೆಸಾರ್ಟ್‌ನಲ್ಲಿ ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಎದುರಿಸುತ್ತಿರುವ ಕಂಪ್ಲಿ ಶಾಸಕ ಗಣೇಶ್‌ ತಮ್ಮ ಮೇಲೆ ಪ್ರಕರಣ ದಾಖಲಾಗುತ್ತಿದ್ದಂತೆಯೇ ತಲೆ ಮರೆಸಿಕೊಂಡು ಮೈಸೂರಿನ ಆಪ್ತರೊಬ್ಬರ ಮನೆಯಲ್ಲಿ ಉಳಿದುಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಇದಕ್ಕೆ ರಾಜ್ಯ ಸರ್ಕಾರದ ಪ್ರಭಾವಿ ರಾಜಕೀಯ ನಾಯಕರ ನೆರವು ಸಿಕ್ಕಿದ್ದು, ಬಂಧನದಿಂದ ತಪ್ಪಿಸಿಕೊಳ್ಳಲು ಶಾಸಕ ಗಣೇಶ್‌ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. 

ಘಟನೆ ಬಳಿಕ ತಮ್ಮ ಕುಟುಂಬ ಸದಸ್ಯರ ಜೊತೆ ಬೇರೊಂದು ಮೊಬೈಲ್‌ ಸಂಖ್ಯೆಯಲ್ಲಿ ನಿರಂತರವಾಗಿ ಸಂಪರ್ಕದಲ್ಲಿರುವ ಗಣೇಶ್‌, ‘ನನಗೆ ಏನೂ ಸಮಸ್ಯೆಯಾಗುವುದಿಲ್ಲ. ಜಾಮೀನು ಸಿಗಲಿದ್ದು ಧೈರ್ಯವಾಗಿರಿ’ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ಸಿದ್ದರಾಮಯ್ಯಗೆ ಅವಾಚ್ಯ ಪದಗಳ ನಿಂದನೆ, ಯುವಕನ ರೀಲ್ಸ್ ಹುಟ್ಟಿಸಿತು ವಿವಾದ, ವೈರಲ್ ಆದ ರೀಲ್ಸ್
US-Iran peace talks in Pakistan: ಕದನ ನಿಲ್ಲಿಸುವ ದಲ್ಲಾಳಿತನಕ್ಕೆ ಪಾಕ್‌ ಇಳಿದಿದ್ದೇಕೆ!?