
ಧಾರವಾಡ (ನ.6): ಲಿಂಗಾಯತ ಮಠಾಧೀಶರ ಬಗ್ಗೆ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆಂದು ಬಸವ ತತ್ವ ಅನುಯಾಯಿಗಳ ಒತ್ತಡದ ಹಿನ್ನೆಲೆಯಲ್ಲಿ ಇದೀಗ ಮಹಾರಾಷ್ಟ್ರದ ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿಗೆ ಧಾರವಾಡ ಜಿಲ್ಲೆಗೂ ನಿರ್ಬಂಧ ಹೇರಲಾಗಿದೆ.
ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದಲ್ಲಿ ನ. 7ರಂದು ನಡೆಯಲಿರುವ ಸಹಜಾನಂದ ಸಪ್ತಾಹಕ್ಕೆ ಕನ್ಹೇರಿ ಮಠದ ಸ್ವಾಮೀಜಿ ಆಗಮಿಸಬೇಕಿತ್ತು. ಆದರೆ, ಲಿಂಗಾಯತ ಮಠಾಧೀಶರು, ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕನ್ಹೇರಿ ಮಠದ ಸ್ವಾಮೀಜಿ ಧಾರವಾಡಕ್ಕೆ ಬರಲು ಬಿಡುವುದಿಲ್ಲ. ಒಂದು ವೇಳೆ ಬಂದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿತ್ತು.
ಈ ಮಧ್ಯೆ ಧಾರವಾಡ ಹಾಗೂ ಕುಂದಗೋಳದಲ್ಲಿ ಕನ್ಹೇರಿ ಮಠದ ಸ್ವಾಮೀಜಿ ಭಕ್ತರು ಶ್ರೀಗಳಿಗೆ ಯಾವುದೇ ಕಾರಣಕ್ಕೂ ನಿರ್ಬಂಧ ಹೇರಬಾರದು ಎಂದು ಪ್ರತಿಭಟನೆಗಳನ್ನು ಸಹ ಮಾಡಿದ್ದರು. ಆದರೆ, ಸಾರ್ವಜನಿಕ ಶಾಂತತೆಗೆ ಧಕ್ಕೆ ಉಂಟಾಗದಂತೆ ಮುಂಜಾಗೃತಾ ಕ್ರಮವಾಗಿ ನ. 5ರಿಂದ ಜನವರಿ 3ರ ವರೆಗೆ ಜಿಲ್ಲೆಗೆ ಪ್ರವೇಶಿಸದಂತೆ ಜಿಲ್ಲಾಧಿಕಾರಿ ದಿವ್ಯಪ್ರಭು ಬುಧವಾರ ಆದೇಶಿಸಿದ್ದಾರೆ.
ಕನ್ಹೇರಿ ಮಠದ ಸ್ವಾಮೀಜಿಗೆ ಈಗಾಗಲೇ ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಯ ಪ್ರವೇಶಕ್ಕೂ ನಿರ್ಬಂಧ ಹೇರಿದ್ದನ್ನು ಸ್ಮರಿಸಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ