ಕನ್ನಡ ಹೋರಾಟಗಾರರ ಕೇಸ್‌ಗಳು ವಾಪಸ್: ಸಿಎಂ ಸಿದ್ದರಾಮಯ್ಯ

Published : Jan 28, 2025, 09:08 AM IST
ಕನ್ನಡ ಹೋರಾಟಗಾರರ ಕೇಸ್‌ಗಳು ವಾಪಸ್: ಸಿಎಂ ಸಿದ್ದರಾಮಯ್ಯ

ಸಾರಾಂಶ

ರಾಜ್ಯ ಸರ್ಕಾರ ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿಯ ಪರವಾಗಿದೆ. ನಾಮ ಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಗೊಳಿಸಿದೆ. ಅಲ್ಲದೆ, ಕನ್ನಡದಲ್ಲೇ ಆಡಳಿತ ನಡೆಸುತ್ತಿದೆ. ಅದೇ ರೀತಿ ಕನ್ನಡಪರ ಹೋರಾಟದ ವೇಳೆ ದಾಖಲಾದ ಕೇಸುಗಳನ್ನು ನಮ್ಮ ಸರ್ಕಾರ ವಾಪಸ್ ಪಡೆಯಲಿದೆ ಎಂದು ಭರವಸೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು(ಜ.28): ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಎಲ್ಲಾ ಕೇಸುಗಳನ್ನು ವಾಪಸ್ ಪಡೆಯಲಾ ಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. 

ಸೋಮವಾರ ವಿಧಾನಸೌಧದ ಆವರಣದಲ್ಲಿ ನಾಡದೇವಿ ಭುವನೇಶ್ವರಿಯ ಕಂಚಿನ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿ, ರಾಜ್ಯ ಸರ್ಕಾರ ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿಯ ಪರವಾಗಿದೆ. ನಾಮ ಫಲಕಗಳಲ್ಲಿ ಶೇ.60 ಕನ್ನಡ ಕಡ್ಡಾಯಗೊಳಿಸಿದೆ. ಅಲ್ಲದೆ, ಕನ್ನಡದಲ್ಲೇ ಆಡಳಿತ ನಡೆಸುತ್ತಿದೆ. ಅದೇ ರೀತಿ ಕನ್ನಡಪರ ಹೋರಾಟದ ವೇಳೆ ದಾಖಲಾದ ಕೇಸುಗಳನ್ನು ನಮ್ಮ ಸರ್ಕಾರ ವಾಪಸ್ ಪಡೆಯಲಿದೆ ಎಂದು ಭರವಸೆ ನೀಡಿದರು. 

ಈಗ ಸಿಎಂ ಸಿದ್ದರಾಮಯ್ಯ ಮನೆ ಬಾಗಿಲಿಗೇ ಬಂತು ಇ.ಡಿ. ನೋಟಿಸ್‌!

ಕನ್ನಡಪರ ಸಂಘಟನೆ ಗಳು, ಹೋರಾಟಗಾರರು ಕೇಸು ವಾಪಸ್ ಪಡೆಯುವಂತೆ ಸರ್ಕಾರಕ್ಕೆ ಮೊದಲು ಅರ್ಜಿ ಸಲ್ಲಿಸಬೇಕು. ಈ ಅರ್ಜಿಗಳನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆಯಲ್ಲಿ ರಚಿಸಲಾಗಿರುವ ಸಂಪುಟ ಉಪಸ ಮಿತಿ ಮುಂದೆ ಇಟ್ಟು ಚರ್ಚಿಸಿ ತೀರ್ಮಾನ ಕೈಗೊಂಡು ಕೇಸುಗಳನ್ನು ವಾಪಸ್ ಪಡೆಯುತ್ತೇವೆ ಎಂದು ಹೇಳಿದರು. 

ಈ ಕುರಿತು ಕನ್ನಡಪ್ರಭದೊಂದಿಗೆ ಮಾತನಾಡಿ, ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂ ದು ಅವರು, ನಮ್ಮ ಮನವಿಗೆ ಸಿಎಂ ಸಿದ್ದರಾಮಯ್ಯ ಸ್ಪಂದಿಸಿದ್ದು ಸಂತಸವಾಗಿದೆ. ಹೋರಾಟ ಗಾರರು ಕೂಡಲೇ ಸರ್ಕಾರಕ್ಕೆ ಅರ್ಜಿಗಳನ್ನು ಸಲ್ಲಿಸಲಿದ್ದಾರೆ ಎಂದು ತಿಳಿಸಿದರು. 

ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣ ಅವರು, ಸಿಎಂ ಸಿದ್ದರಾಮಯ್ಯ ಅವರ ತೀರ್ಮಾನ ಅಭಿನಂದನೀಯ. ಕನ್ನಡ ಹೋರಾಟಗಾರರಿಗೆ ಶಕ್ತಿ ತುಂಬುವಂತಹ ಇನ್ನಷ್ಟು ತೀರ್ಮಾನಗಳನ್ನು ಮುಖ್ಯಮಂತ್ರಿಯವರು ತೆಗೆದುಕೊಳ್ಳಬೇಕು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್