
ಬೆಂಗಳೂರು (ಮಾ.4): ಅಕ್ರಮ ಚಿನ್ನ ಸಾಗಾಟ ಆರೋಪದ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಎಡಿಜಿಪಿ ರಾಮಚಂದ್ರರಾವ್ ಅವರ ಪುತ್ರಿ ಆಗಿರುವ ರನ್ಯಾ ರಾವ್ ಕನ್ನಡದಲ್ಲಿ ಕಿಚ್ಚ ಸುದೀಪ್ ಜೊತೆಗೆ ಮಾಣಿಕ್ಯ ಸಿನೆಮಾ ಸೇರಿದಂತೆ ಪಟಾಕಿ ಹಾಗೂ ತಮಿಳಿನ 'ವಾಘಾ' ಸಿನಿಮಾಗಳಲ್ಲಿ ರನ್ಯಾ ರಾವ್ ನಟಿಸಿದ್ದರು.
ಕಿಚ್ಚನ ಕಾರಣಕ್ಕೆ ಚಿತ್ರರಂಗದ ವಿರುದ್ದ ಕಿಚ್ಚು ಹತ್ತಿಕೊಳ್ತಾ? ಸುದೀಪ್ ವಿರುದ್ಧ ರವಿ ಗಣಿಗ ಕೆಂಡಾಮಂಡಲ!
ಸುಮಾರು 15ಕೆಜಿ ಚಿನ್ನ ಅಕ್ರಮ ಸಾಗಾಟ ಆರೋಪದಲ್ಲಿ ನಟಿ ರನ್ಯಾ ರಾವ್ ರನ್ನು ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಮಾರ್ಚ್ 4ರ ಮಧ್ಯರಾತ್ರಿ ಬೆಂಗಳೂರು ವಿಮಾಣ ನಿಲ್ದಾಣದಲ್ಲಿ ಚಿನ್ನ ಸಮೇತ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ರನ್ಯಾ ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ಮಧ್ಯರಾತ್ರಿ ಆಗಮಿಸಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ಮಾರ್ಚ್4ರಂದು ರಾತ್ರಿ ನಟಿ ರನ್ಯಾ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿದೇಶದಿಂದ ಹೆಚ್ಚುವರಿ ಗೋಲ್ಡ್ ತಂದ ಆರೋಪ ರನ್ಯಾ ಮೇಲೆ ಇದೆ. ನಿನ್ನೆ ರಾತ್ರಿಯೇ ನಾಗವಾರದ ಡಿಆರ್ ಐ ಕಛೇರಿಗೆ ಕರೆತಂದ ಅಧಿಕಾರಿಗಳು ವಿಚಾರಣೆ ನಡೆಯುತ್ತಿದ್ದಾರೆ.
ಡಿಕೆ ಶಿವಕುಮಾರ್ ವೇದಿಕೆ ಮೇಲೆ ಸಾಧು ಕೋಕಿಲಾ ತಲೆ ಸವರಿದ್ದು ಭಾರೀ ಹೈಲೈಟ್ ಆಗ್ತಿದೆ, ಯಾಕೆ?
ರನ್ಯಾ ರಾವ್ ಅವರು 28 ಮೇ 1993 ರಂದು ಕರ್ನಾಟಕದ ಚಿಕ್ಕಮಗಳೂರಿನಲ್ಲಿ ಜನಿಸಿದರು. 2014 ಕಿಚ್ಚ ಸುದೀಪ್ ನಾಯಕನಾಗಿ ನಟಿಸಿ ನಿರ್ದೇಶಿಸಿದ್ದ ಮಾಣಿಕ್ಯ ಚಿತ್ರ ರನ್ಯಾ ರಾವ್ ಅವರ ಮೊದಲ ಚಿತ್ರವಾಗಿತ್ತು. 2017 ರಲ್ಲಿ ಬಿಡುಗಡೆಯಾದ ಗಣೇಶ್ ಅಭಿನಯದ ಕನ್ನಡದ ಹಾಸ್ಯ ಚಿತ್ರ ಪಟಾಕಿಯಲ್ಲಿ ಪತ್ರಕರ್ತೆ ಪಾತ್ರ ನಿರ್ವಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ