
ಬೆಂಗಳೂರು (ಮಾ.30): ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಚಿತ್ರನಟ, ರಂಗಭೂಮಿ ಕಲಾವಿದ, ಸಾಮಾಜಿಕ, ಪರಿಸರ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಯೇಸು ಪ್ರಕಾಶ್ ಕಲ್ಲುಕೊಪ್ಪ(58) ಇಂದು ವಿಧಿವಶರಾಗಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯೇಸುಪ್ರಕಾಶ್ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.. ಆದರೆ ಇಂದು ಚಿಕಿತ್ಸೆಗೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಹುಟ್ಟುಹಬ್ಬ ಸಂಭ್ರಮದಲ್ಲಿ ಕೇಕ್ ಕತ್ತರಿಸಿ ತಿಂದ 10 ವರ್ಷ ಬಾಲಕಿ ನಿಧನ, ಕುಟುಂಬಸ್ಥರು ಅಸ್ವಸ್ಥ!
ತಮ್ಮ ವಿಶಿಷ್ಟ ಅಭಿನಯದ ಮೂಲಕ ಪ್ರಕಾಶ್ ಹೆಬ್ಬಗೋಡು ಎಂದೇ ಗುರುತಿಸಿಕೊಂಡಿದ್ದ ಯೇಸುಪ್ರಕಾಶ್, ಪುನೀತ್ ರಾಜಕುಮಾರ್, ಯಶ್, ದರ್ಶನ್ ಖ್ಯಾತ ನಟರ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ಅಲ್ಲದೇ ನೀನಾಸಂ ಜೊತೆ ರಂಗಭೂಮಿ ನಾಟಕಗಳಲ್ಲೂ ಸಕ್ರಿಯವಾಗಿ ತೊಡಗಿಕೊಂಡಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಒರ್ವ ಪುತ್ರನನ್ನು ಅಗಲಿದ್ದಾರೆ. ನಾಳೆ ಭಾನುವಾರ ಕಲ್ಲುಕೊಪ್ಪದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಕುಟುಂಬಸ್ಥರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ